ಕರ್ನಾಟಕದ ಕರಾವಳಿ ತೀರ ಸುರಕ್ಷಿತ: ಕೋಸ್ಟ್ ಗಾರ್ಡ್ ಕಮಾಂಡರ್ ಪಿ.ಕೆ.ಮಿಶ್ರಾ ಅಭಿಮತ

By Sathish Kumar KH  |  First Published Feb 27, 2023, 4:04 PM IST

ಕರಾವಳಿ ಭದ್ರತಾ ಪಡೆಯಿಂದ ನೀಡಲಾದ ತರಬೇತಿಯ ಕಾರ್ಯ ವಿಧಾನಗಳನ್ನು ದೈನಿಕ ಕಾರ್ಯಗಳಲ್ಲಿ ಅಳವಡಿಕೆ ಮಾಡಿಕೊಂಡರೆ ಕರ್ನಾಟಕ ಕರಾವಳಿ ತೀರ ಪ್ರದೇಶ ಸುರಕ್ಷಿತ ಆಗಿರುತ್ತದೆ.


ಉಡುಪಿ (ಫೆ.27): ರಾಜ್ಯದ ಕರಾವಳಿ ಕಾವಲು ಪಡೆಗೆ, ಮಲ್ಪೆಯ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯಲ್ಲಿ ನೀಡಿರುವ ತರಬೇತಿಯ ಕಾರ್ಯ ವಿಧಾನಗಳನ್ನು, ದೈನಂದಿನ ಕರ್ತವ್ಯದಲ್ಲಿ ಸಮರ್ಪಕವಾಗಿ ಅಳವಡಿಸಿಕೊಳ್ಳುವ ಮೂಲಕ ರಾಜ್ಯದ ಮೂಲಕ ಕರಾವಳಿ ತೀರವನ್ನು ಸುರಕ್ಷಿತವಾಗಿಡಲು ಸಾಧ್ಯವಾಗಲಿದೆ ಎಂದು ಮಂಗಳೂರು ವಿಭಾಗದ ಕೋಸ್ಟ್ ಗಾರ್ಡ್‌ನ ಡಿಐಜಿ ಕಮಾಂಡರ್ ಪಿ.ಕೆ.ಮಿಶ್ರಾ ಹೇಳಿದರು.

ಉಡುಪಿ ಬಳಿಯಿರುವ ಮಲ್ಪೆಯ ಕರಾವಳಿ ಕಾವಲು ಪೊಲೀಸ್ ಕಚೇರಿಯಲ್ಲಿ ನಡೆದ, ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ, ಮೊದಲ ತಂಡದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

Tap to resize

Latest Videos

undefined

ಉಡುಪಿ: ರಾಜ್ಯದಲ್ಲಿ ಮೊದಲ ಬಾರಿಗೆ Dragon Boat Championship!

ಸಮುದ್ರದಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಸೂಕ್ತ ರೀತಿಯ ಸಂವಹನ ಹಾಗೂ ಕಾರ್ಯಚರಣೆ ಕುರಿತ ಸ್ಪಷ್ಟ ಮಾಹಿತಿಗಳು ಎಲ್ಲಾ ಸಿಬ್ಬಂದಿಗಳಿಗೂ ಇರಬೇಕು, ಕೌಶಲ್ಯದಿಂದ ಕೂಡಿದ ಕಾರ್ಯವಿಧಾನವನ್ನು ಅಳವಡಿಸಿಕೊಂಡು , ಕರ್ತವ್ಯ ಸಂದರ್ಭದಲ್ಲಿ ಎದುರಾಗುವ ಎಲ್ಲಾ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಬೇಕು , ಸಿಬ್ಬಂದಿಗಳಿಗೆ ಇನ್ನೂ ಹೆಚ್ಚಿನ ತರಬೇತಿಯ ಅಗತ್ಯವಿದಲ್ಲಿ ಕೋಸ್ಟ್ ಗಾರ್ಡ್ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.

ಪ್ರಾಕೃತಿಕ ವಿಕೋಪ ಸಂದರ್ಭ ಎದುರಿಸಲು ಅನುಕೂಲ: ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಮಾತನಾಡಿ, ಕರಾವಳಿ ಭದ್ರತಾ ತರಬೇತಿ ಸಂಸ್ಥೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಮಾತ್ರವಲ್ಲದೇ ಜಿಲ್ಲೆ ಹಾಗೂ ರಾಜ್ಯದ ಕಂದಾಯ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆಯ ಸಿಬ್ಬಂದಿಗಳಿಗೂ ಅಗತ್ಯವಿರುವ ಅಗತ್ಯ ತರಬೇತಿ ನೀಡುವುದರಿಂದ ರಾಜ್ಯದಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗಲಿದೆ. ಅಲ್ಲದೇ ಸಾರ್ವಜನಿಕರಿಗೂ ಸಹ ಸರ್ಟಿಫಿಕೇಟ್ ಕೋರ್ಸ್ಗಳ ತರಬೇತಿ ನೀಡುವ ಮೂಲಕ ಈ ತರಬೇತಿ ಸಂಸ್ಥೆಯಲ್ಲಿ ನಿರಂತರವಾಗಿ ಕಾರ್ಯಕ್ರಮಗಳನ್ನು ಆಯೋಜಿಸಬಹುದಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ನಕ್ಸಲ್ ನಿಗ್ರಹ ಪಡೆಯ ಪೊಲಸ್‌ ವರಿಷ್ಠಾಧಿಕಾರಿ ನಿಕ್ಕಂ ಪ್ರಕಾಶ್ ಅಮೃತ್, ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಅಬ್ದುಲ್ ಅಹದ್, ಇನ್ಸ್ಪೆಕ್ಟರ್‌ಗಳಾದ ಶಂಕರ್, ಪ್ರಮೋದ್ ಮತ್ತಿತರರು ಉಪಸ್ಥಿತರಿದ್ದರು.

Udupi: ಮದ್ಯಪಾನ ವಯಸ್ಸು 18ಕ್ಕೆ ಇಳಿಸಿದ ಸರಕಾರ, ಪ್ರಮೋದ್ ಮುತಾಲಿಕ್ ಖಂಡನೆ

ಉತ್ತಮ ಪ್ರದರ್ಶನ ತೋರಿದವರಿಗೆ ಬಹುಮಾನ: ಮಲ್ಪೆಯ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯಲ್ಲಿ ಫೆಬ್ರವರಿ 13 ರಿಂದ 25 ರ ವರೆಗೆ ನಡೆದ ಪ್ರಥಮ ತಂಡದ ಈ ತರಬೇತಿ ಕಾರ್ಯಕ್ರಮದಲ್ಲಿ ರಾಜ್ಯದ ಕರಾವಳಿ ಕಾವಲು ಪೊಲೀಸ್‌ನ 25 ಸಿಬ್ಬಂದಿಗಳು ಭಾಗವಹಿಸಿದ್ದರು. ಇವರಿಗೆ ಸಮುದ್ರದಲ್ಲಿ ಈಜು ತರಬೇತಿ, ಅಪಾಯಕ್ಕೆ ಸಿಲುಕಿದವರ ರಕ್ಷಣೆ, ಅಗ್ನಿ ಅವಘಡಗಳಿಂದ ರಕ್ಷಣೆ, ಸಮುದ್ರದಲ್ಲಿ ಸಂಪರ್ಕ ವ್ಯವಸ್ಥೆಗಳ ಬಳಕೆ, ಬೋಟ್ ಗಳ ಕಾರ್ಯವಿಧಾನ, ಡ್ರೋಣ್ ಬಳಕೆ, ಅಗತ್ಯ ಕಾಯಿದೆಗಳು ಸೇರಿದಂತೆ ರಕ್ಷಣಾ ಕಾರ್ಯಚರಣೆಗೆ ಅಗತ್ಯವಿರುವ ಅತ್ಯಗತ್ಯ ತರಬೇತಿಯನ್ನು ನೀಡಲಾಗಿದೆ. ತರಬೇತಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಸಿಬ್ಬಂದಿಗಳಿಗೆ ಬಹುಮಾನ ವಿತರಿಸಲಾಯಿತು.

ಕರಾವಳಿ ಕಾವಲು ಪೊಲೀಸ್‌ನ ಎಸ್ಪಿ ಹಾಗೂ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಅಬ್ದುಲ್ ಅಹದ್ ಸ್ವಾಗತಿಸಿದರು. ಕರಾವಳಿ ಕಾವಲು ಪೊಲೀಸ್ ನ ಇನ್ಸ್ಪೆಕ್ಟರ್ ಶಂಕರ್ ನಿರೂಪಿಸಿದರು. ಇನ್ಸ್ಪೆಕ್ಟರ್ ಪ್ರಮೋದ್ ವಂದಿಸಿದರು.

click me!