
ವರದಿ : ಮಹಂತೇಶ್ ಕುಮಾರ್, ಏಷ್ಯನೆಟ್ ಸುವರ್ಣ ನ್ಯೂಸ್
ತುಮಕೂರು (ಜು.03): ಜಿಲ್ಲೆಯ ಕುಣಿಗಲ್ ವಿಧಾನಸಭಾ ಕ್ಷೇತ್ರದ ಶಾಸಕ ರಂಗನಾಥ್ ಸ್ಥಳದಲ್ಲಿಯೇ ಜನರ ಸಮಸ್ಯೆಯನ್ನು ಆಲಿಸಲು ವಿಭಿನ್ನವಾದ ಒಂದು ಪ್ರಯತ್ನವನ್ನು ಆರಂಭಿಸಿದ್ದಾರೆ. ಗ್ರಾಮದಲ್ಲಿ ರಾತ್ರಿ ವಾಸ್ತವ್ಯ ಹೂಡಿ ಜನರ ಸಮಸ್ಯೆಗಳನ್ನ ಬಗೆಹರಿಸಲು ಮುಂದಾಗಿದ್ದಾರೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಬಂಧಿ ಯಾಗಿರುವ ರಂಗನಾಥ್ ಸರ್ಕಾರದ ಯೋಜನೆಗಳನ್ನು ಸುಲಭವಾಗಿ ತಂದು ಅನುಷ್ಠಾನಗೊಳಿಸಲು ಪ್ರಯತ್ನಕ್ಕೆ ಮುಂದಾಗಿದ್ದಾರೆ. ಮೊದಲಿಗೆ ಕುಣಿಗಲ್ ತಾಲ್ಲೂಕಿನ ಯಡಿಯೂರು ಹೋಬಳಿಯ ನಾಗಸಂದ್ರ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದ ಅವರು, ಗ್ರಾಮಕ್ಕೆ ಅಧಿಕಾರಿಗಳೊಂದಿಗೆ ತೆರಳಿದ್ದರು. 'ಶಾಸಕರ ನಡೆ ಹಳ್ಳಿ ಕಡೆ' ಕಾರ್ಯಕ್ರಮ ನಡೆಸಿದ ಶಾಸಕ ರಂಗನಾಥ್, ಜೊತೆ ಅಧಿಕಾರಿಗಳು ಭಾಗಿಯಾಗಿ ಅಲ್ಲಿಯೇ ರಾತ್ರಿಯಿಡಿ ತಂಗಿದ್ದರು. ಕಾರ್ಯಕ್ರಮದ ವೇಳೆ ಬಡವರ ಮನೆಯಲ್ಲಿ ಊಟ ಮಾಡಿ ರಾತ್ರಿ ವಾಸ್ತವ್ಯ ಹೂಡಿದರು.
ಸಾವಿನ ದವಡೆಯಲ್ಲಿದ್ದ ಮಕ್ಕಳಿಗೆ ಮರುಜನ್ಮ ನೀಡಿ, ಪ್ರಾಣಬಿಟ್ಟ ಮಹಾತಾಯಿ
ಜಿ.ಪಂ,ತಾ.ಪಂ. ಹಾಗೂ ಲೋಕಸಭಾ ಚುನಾವಣೆಗೆ ತಯಾರಿ: ಕಳೆದ ಕೆಲ ದಿನಗಳ ಹಿಂದೆ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಮರುದಿನವೇ ಅಧಿಕಾರಿಗಳ ಜೊತೆ, ಶಾಸಕರ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಮೂಲಕ ಗ್ರಾಮ ವಾಸ್ತವ್ಯ ಮಾಡಿದ್ದ ರಂಗನಾಥ್ ನಡೆಗೆ ಕ್ಷೇತ್ರದಲ್ಲಿ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿತ್ತು. ಅಲ್ಲದೆ ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಅಲ್ಲದೆ ಮುಂದಿನ ಲೋಕಸಭಾ ಚುನಾವಣೆಯನ್ನು ಕೂಡ ಗಮನದಲ್ಲಿಟ್ಟುಕೊಂಡು ಶಾಸಕರು ಇಂತಹ ಜನಪರ ಕೆಲಸಗಳಿಗೆ ಕೈ ಹಾಕಿದ್ದಾರೆ ಎಂಬುದು ವಿರೋಧಪಕ್ಷಗಳ ಮುಖಂಡರ ಟೀಕೆ ಕೂಡ ವ್ಯಕ್ತವಾಗಿದೆ.
ಸಾವಿನ ದವಡೆಯಲ್ಲಿದ್ದ ಮಕ್ಕಳಿಗೆ ಮರುಜನ್ಮ ನೀಡಿ, ಪ್ರಾಣಬಿಟ್ಟ ಮಹಾತಾಯಿ
ತುಮಕೂರು (ಜು.02): ಭಾನುವಾರವಾದ್ದರಿಂದ ಶಾಲೆಗೆ ರಜೆಯಿದ್ದ ಹಿನ್ನೆಲೆಯಲ್ಲಿ ಮಕ್ಕಳನ್ನು ಕರೆದುಕೊಂಡು ಕೆರೆಯ ಬಳಿ ಬಟ್ಟೆಯನ್ನು ತೊಳೆಯಲು ಹೋಗಿದ್ದ ಮಹಿಳೆ, ತನ್ನ ಇಬ್ಬರು ಮಕ್ಕಳು ಆಟವಾಡುತ್ತಾ ಕೆರೆ ಬಿದ್ದಿದ್ದನ್ನು ನೋಡಿ ಅವರನ್ನು ರಕ್ಷಣೆ ಮಾಡಲು ಮುಂದಾಗಿದ್ದಾಳೆ. ಆದರೆ, ಮಕ್ಕಳ ಜೀವವನ್ನು ಉಳಿಸಿದ ಮಹಿಳೆ, ಕೊನೆಗೆ ಈಜು ಬಾರದೇ ಆಳಕ್ಕೆ ಬಿದ್ದು ಪ್ರಾಣತ್ಯಾಗ ಮಾಡಿದ್ದಾಳೆ. ಮೃತ ಮಹಿಳೆಯನ್ನು ಮನು (30) ಎಂದು ಗುರುತಿಸಲಾಗಿದೆ. ಶಿರಾ ತಾಲ್ಲೂಕಿನ ರಥಸಂದ್ರ ಗ್ರಾಮದ ಕೆರೆಯಲ್ಲಿ ಘಟನೆ ನಡೆದಿದೆ. ಮೃತ ಮಹಿಳೆ ಭಾನುವಾರ ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದಳು. ಇಬ್ಬರು ಮಕ್ಕಳು ಕೆರೆ ದಡದಲ್ಲಿ ಆಟವಾಡುತ್ತಿದ್ದರು. ಹೀಗಾಗಿ, ತನ್ನ ಬಟ್ಟೆ ಒಗೆಯುವ ಕಾರ್ಯವನ್ನು ಮುಂದುವರೆಸಿದ್ದಳು. ಆದರೆ, ಇದ್ದಕ್ಕಿಂತೆ ನೀರಿಗೆ ಮಕ್ಕಳು ಬಿದ್ದಿರುವ ಘಟನೆ ನಡೆದಿದ್ದು, ಇದನ್ನು ಕಂಡು ಗಾಬರಿಯಾದ ಮಹಿಳೆ ತನಗೆ ಈಜು ಬರುವುದಿಲ್ಲ ಎಂಬ ಅರಿವೂ ಇಲ್ಲದೆಯೇ ಕೆರೆಗೆ ಹಾರಿ ಮಕ್ಕಳನ್ನು ರಕ್ಷಣೆ ಮಾಡಲು ಮುಂದಾಗಿದ್ದಾಳೆ.
ಗಂಡ-ಹೆಂಡ್ತಿ ಇಬ್ರೂ ಪೊಲೀಸ್: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಕ್ಕೆ ಬಲಿಯಾದ ಪತಿ
ಈಜು ಬಾರದಿದ್ದರೂ ಕೆರೆಗೆ ಧುಮಿಕಿ ಮಕ್ಕಳ ರಕ್ಷಣೆ: ಇನ್ನು ಮಕ್ಕಳು ಮುಳುಗುವುದನ್ನು ನೋಡಿ ಕೆರೆಗೆ ಧುಮಿಕಿ ಮಕ್ಕಳನ್ನು ಹೊರಗೆ ಎಸೆದಿದ್ದಾಳೆ. ಆಗ, ಇತರರು ಮಕ್ಕಳನ್ನು ಎಳೆದುಕೊಂಡಿದ್ದಾರೆ. ಆದರೆ, ತಾನು ಕೆರೆಯ ನೀರಿನಿಂದ ಮೇಲಕ್ಕೆ ಬರುವಾಗ ಕಾಲು ಜಾರಿ ಬಿದ್ದಿದ್ದಾಳೆ. ಈ ವೇಳೆ ಈಜು ಬಾರದ ಹಿನ್ನೆಲೆಯಲ್ಲಿ ಮಹಿಳೆ ಕೆರೆಯಲ್ಲಿಯೇ ಮುಳುಗಿದ್ದಾಳೆ. ಉಳಿದಂತೆ ಬಟ್ಟೆ ಒಗೆಯಲು ಹೋಗಿದ್ದ ಇತರೆ ಮಹಿಳೆಯರಿಗೂ ಈಜು ಬಾರದ ಹಿನ್ನೆಲೆಯಲ್ಲಿ ರಕ್ಷಣೆಗಾಗಿ ಕೂಗಿಕೊಂಡಿದ್ದಾರೆ. ಯಾರೊಬ್ಬರೂ ಸಹಾಯಕ್ಕೆ ಬಾರದ ಹಿನ್ನೆಲೆಯಲ್ಲಿ ಕೆಲವೇ ಕ್ಷಣಗಳಲ್ಲಿ ಮಹಿಳೆ ಜೀವ ಬಿಟ್ಟಿದ್ದಾಳೆ.