ಬಂಧನದ ಭೀತಿ ಎದುರಿಸುತ್ತಿದ್ದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್‌ಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.
ಶಿವಮೊಗ್ಗ (ಮಾ.11): ಬಂಧನದ ಭೀತಿ ಎದುರಿಸುತ್ತಿದ್ದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್‌ಗೆ ಶಿವಮೊಗ್ಗ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು, ಶಾಸಕರಿಗೆ ಬಿಗ್ ರಿಲೀಫ್ ದೊರೆತಿದೆ.
ಫೆ.27 ಮತ್ತು 28 ರಂದು ಭದ್ರಾವತಿಯ ಕನಕ ಮಂಟಪದಲ್ಲಿ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಶಾಸಕ ಬಿ.ಕೆ.ಸಂಗಮೇಶ್ ವಿರುದ್ಧ ಜಾತಿ ನಿಂದನೆ ಮತ್ತು ಹಲ್ಲೆ ಯತ್ನ ಪ್ರಕರಣ ದಾಖಲಾಗಿತ್ತು. ಪುತ್ರರ ಮೇಲೂ ಪ್ರಕರಣ ದಾಖಲಾಗಿದ್ದು, ಓರ್ವ ಪುತ್ರ ಬಸವೇಶ್ ಬಂಧನಕ್ಕೆ ಒಳಗಾಗಿದ್ದಾರೆ. ಶಾಸಕ ಸಂಗಮೇಶ್‌ಗೂ ಬಂಧನದ ಭೀತಿ ಎದುರಾಗಿತ್ತು.
ಸಂಗಮೇಶ್ ಅಂಗಿ ಕೇಸ್ : ಸ್ಪೀಕರ್ ಕಾಗೇರಿ ಮಹತ್ವದ ಆದೇಶ ..
ಇದೀಗ ಶಾಸಕ ಸಂಗಮೇಶ್, ಪುತ್ರ ಗಣೇಶ್ ಹಾಗೂ ಸಹೋದರ ಬಿ.ಕೆ.ಮೋಹನ್‌ಗೆ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ. ಕಳೆದ ವಾರ ನಿರೀಕ್ಷಣಾ ಜಾಮೀನು ಕೋರಿ ಈ ಮೂವರೂ ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಬುಧವಾರ ವಿಚಾರಣೆ ನಡೆಸಿದ ನ್ಯಾಯಾಧೀಶ ಕುಡು ಒಕ್ಕಲಿಗರ್ ಸೋಮಪ್ಪನವರು ನಿರೀಕ್ಷಣಾ ಜಾಮೀನು ನೀಡಿದ್ದಾರೆ.