ಬರ ಪರಿಹಾರವಾಗಿ ಕೇವಲ ₹2 ಸಾವಿರ ನೀಡಿರುವ ಸರ್ಕಾರದ ಕ್ರಮ ಖಂಡಿಸಿ ಹಾವೇರಿ ಜಿಲ್ಲೆ ಸವಣೂರಿನಲ್ಲಿ ಸೋಮವಾರ ರೈತರು ಪ್ರತಿಭಟನೆ ನಡೆಸಿದರು. ಸವಣೂರು ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತ ಮುಖಂಡರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿದ್ದರೂ ಈವರೆಗೆ ಪರಿಹಾರ ನೀಡಿರಲಿಲ್ಲ. ಈಗ ರೈತರ ಖಾತೆಗೆ ಕೇವಲ ₹2 ಸಾವಿರ ಹಾಕಿದ್ದಾರೆ. ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸವಣೂರು (ಡಿ.12): ಬರ ಪರಿಹಾರವಾಗಿ ಕೇವಲ ₹2 ಸಾವಿರ ನೀಡಿರುವ ಸರ್ಕಾರದ ಕ್ರಮ ಖಂಡಿಸಿ ಹಾವೇರಿ ಜಿಲ್ಲೆ ಸವಣೂರಿನಲ್ಲಿ ಸೋಮವಾರ ರೈತರು ಪ್ರತಿಭಟನೆ ನಡೆಸಿದರು.
ಸವಣೂರು ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತ ಮುಖಂಡರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿದ್ದರೂ ಈವರೆಗೆ ಪರಿಹಾರ ನೀಡಿರಲಿಲ್ಲ. ಈಗ ರೈತರ ಖಾತೆಗೆ ಕೇವಲ ₹2 ಸಾವಿರ ಹಾಕಿದ್ದಾರೆ. ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
undefined
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗೆ ತಾವೇ ಹಣ ಸಂಗ್ರಹಿಸಿ ನೀಡಲು ಮುಂದಾಗಿ, ಪ್ರತಿ ರೈತರೂ ಒಂದೊಂದು ಸಾವಿರದಂತೆ ಸುಮಾರು ₹30 ಸಾವಿರ ದೇಣಿಗೆ ಹಣ ಸಂಗ್ರಹಿಸಿದರು. ಸಂಗ್ರಹಿಸಿದ ಹಣವನ್ನು ಉಪವಿಭಾಗಾಧಿಕಾರಿ ಮಹಮ್ಮದ್ ಖಿಜರ್ ಹಾಗೂ ತಹಸೀಲ್ದಾರ್ ಭರತ್ ಅವರಿಗೆ ನೀಡಲು ಮುಂದಾದರು. ಆದರೆ, ಮನವಿಯನ್ನು ಮಾತ್ರ ಸ್ವೀಕರಿಸಲು ಒಪ್ಪಿದ ಅಧಿಕಾರಿಗಳು, ಹಣ ಪಡೆಯಲು ನಿರಾಕರಿಸಿದರು.
ಬರ ನಿರ್ವಹಣೆಗೆ ಕೇಂದ್ರ ಸರ್ಕಾರಕ್ಕೆ ಮೂರು ಪತ್ರ ಬರೆದ್ರೂ ಸಹಕರಿಸುತ್ತಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ
ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಿತ್ತಾಟದಲ್ಲಿ ರೈತರನ್ನು ನಿರ್ಲಕ್ಷ್ಯ ಮಾಡಲಾಗಿದೆ. ಕೇಂದ್ರ ಸರ್ಕಾರ ಹೆಕ್ಟೇರ್‌ಗೆ ₹8 ಸಾವಿರ ಮತ್ತು ರಾಜ್ಯ ಸರ್ಕಾರವೂ ಅಷ್ಟೇ ಮೊತ್ತವನ್ನು ಸೇರಿಸಿ ಪ್ರತಿ ಹೆಕ್ಟೇರ್‌ಗೆ ₹16 ಸಾವಿರ ಬರ ಪರಿಹಾರ ನೀಡಬೇಕು. ಆರ್ಥಿಕವಾಗಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಬರಬೇಕು. ಶೀಘ್ರದಲ್ಲಿ ಬರ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ರೈತರು ಎಚ್ಚರಿಸಿದರು.