ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಇನ್ನಿಲ್ಲ

Suvarna News   | Asianet News
Published : Mar 08, 2020, 09:54 PM IST
ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಇನ್ನಿಲ್ಲ

ಸಾರಾಂಶ

ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ನಿಧನ|ನವದೆಹಲಿಯ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಹಂಸರಾಜ್ ಭಾರದ್ವಾಜ್|2009 ರಿಂದ 2014ರವರೆಗೆ ಕರ್ನಾಟಕದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಭಾರದ್ವಾಜ್|

ಬೆಂಗಳೂರು[ಮಾ.08]: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ (82) ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಂಸರಾಜ್ ಭಾರದ್ವಾಜ್  ಅವರು ಇಂದು[ಭಾನುವಾರ] ನವದೆಹಲಿಯ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  

ಹಂಸರಾಜ್ ಭಾರದ್ವಾಜ್ ಅವರು 2009 ರಿಂದ 2014ರವರೆಗೆ ಕರ್ನಾಟಕದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಕೇಂದ್ರದ ಕಾನೂನು ಸಚಿವರಾಗಿಯೂ ಕೂಡ ಸೇವೆ ಸಲ್ಲಿಸಿದ್ದರು. ಮೃತ ಹಂಸರಾಜ್ ಭಾರದ್ವಾಜ್ ಅವರ ಅಂತ್ಯಕ್ರಿಯೆ ನಾಳೆ[ಸೋಮವಾರ] ನವದೆಹಲಿಯ ನಿಗಮ್ ಬೋಧ  ಘಾಟ್ ನಲ್ಲಿ ನಡೆಯಲಿದೆ ಎಂದು ಅವರ ಪುತ್ರ ಅರ್ಜುನ್ ಭಾರದ್ವಾಜ್ ಅವರು ಮಾಹಿತಿ ನೀಡಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹಂಸರಾಜ್ ಭಾರದ್ವಾಜ್ ಪತ್ನಿ, ಮಗ ಹಾಗೂ ಇಬ್ಬರು ಪುತ್ರಿಯರನ್ನ ಅಗಲಿದ್ದಾರೆ. ಹಂಸರಾಜ್ ಭಾರದ್ವಾಜ್ ಅವರ ನಿಧನಕ್ಕೆ ಕೇಂದ್ರ ಸಚಿವ ರವಿಶಂಕರ ಪ್ರಸಾದ ಸೇರಿದಂತೆ ಪ್ರಮುಖ ನಾಯಕರು ಸಂತಾಪ ಸೂಚಿಸಿದ್ದಾರೆ.

PREV
click me!

Recommended Stories

ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ: ಸಿಎಂ ಸಿದ್ದರಾಮಯ್ಯ
ಹಿಂದೂ, ಧರ್ಮವೇ ಅಲ್ಲ, ಅದೊಂದು ಬೈಗುಳ ಶಬ್ದ : ಬಿ.ಜಿ ಕೋಳ್ಸೆ