ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ನಡೆಸದ ರಾಜ್ಯ ಸರ್ಕಾರ ಈಗ ಬೆಂಗಳೂರು ಜನತೆಯ ಮನೆ ಬಾಗಿಲಿಗೆ ಹೋಗುವುದಕ್ಕೆ ಹೊಸ ಕಾರ್ಯಕ್ರಮ ಆರಂಭಿಸುತ್ತಿದೆ.
ಬೆಂಗಳೂರು (ಜ.01): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ನಡೆಸದ ರಾಜ್ಯ ಸರ್ಕಾರ ಈಗ ಬೆಂಗಳೂರು ಜನತೆಯ ಮನೆ ಬಾಗಿಲಿಗೆ ಹೋಗುವುದಕ್ಕೆ ಹೊಸ ಕಾರ್ಯಕ್ರಮ ಆರಂಭಿಸುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು/ಕುಂದು-ಕೊರತೆಗಳನ್ನು ಆಲಿಸುವ ಸಲುವಾಗಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಜನವರಿ 3 ರಿಂದ 'ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ರಾಜ್ಯದ ರಾಜಧಾನಿಯಲ್ಲಿ 1.3 ಕೋಟಿಗೂ ಅಧಿಕ ಜನರು ವಾಸ ಮಾಡುತ್ತಿದ್ದು, ರಾಜ್ಯಕ್ಕೇ ಅತಿದೊಡ್ಡ ಸ್ಥಳೀಯ ಆಡಳಿತ ಸಂಸ್ಥೆ ಬಿಬಿಎಂಪಿ ಮೂಲ ಸೌಕರ್ಯವನ್ನು ಒದಗಿಸುತ್ತಿದೆ. ಆದರೆ, ರಾಜ್ಯ ಸರ್ಕಾರಗಳ ಸ್ವ ಹಿತಾಸಕ್ತಿಯಿಂದಾಗಿ ಬಿಬಿಎಂಪಿ ಚುನಾವಣೆ ನಡೆದು ಈವರೆಗೆ ಮೂರೂವರೆ ವರ್ಷಗಳಾದರೂ ಯಾರೊಬ್ಬರೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಈಗ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವೂ ಕೂಡ ಲೋಕಸಭಾ ಚುನಾವಣೆ ಮುಗಿಯುವವರೆಗೂ ಬಿಬಿಎಂಪಿ ಚುನಾವಣೆ ನಡೆಸುವ ಗೋಜಿಗೆ ಹೋಗುವುದಿಲ್ಲ. ಜನರು ಸ್ಥಳೀಯ ಜನಪ್ರತಿನಿಧಿಗಳು (ಬಿಬಿಎಂಪಿ ಕಾರ್ಪೋರೇಟರ್ಸ್) ಇಲ್ಲದೇ ಸಮಸ್ಯೆಗಳ ಸರಮಾಲೆಯಲ್ಲಿ ಬೇಯುತ್ತಿದ್ದಾರೆ. ಈಗ ರಾಜಯ ಸರ್ಕಾರ ಬಿಬಿಎಂಪಿ ಚುನಾವಣೆ ನಡೆಸುವ ಭರವಸೆ ನೀಡದೇ, ನಾವೇ ನಿಮ್ಮ ಮನೆಗೆ ಬರುತ್ತೇವೆ, ಸಹಕಾರ ಕೊಡಿ ಎಂದು ಮನವಿ ಮಾಡುತ್ತರಾ ಹೊಸ ಕಾರ್ಯಕ್ರಮವನ್ನು ಆರಂಭ ಮಾಡುತ್ತಿದೆ.
undefined
ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಮೊದಲ ಸರ್ಕಾರಿ ಪ್ರೀಮಿಯಂ ಮದ್ಯ ಮಾರಾಟ ಮಳಿಗೆ ಉದ್ಘಾಟನೆ
ನಾಗರಿಕರು ಸರ್ಕಾರಿ ಕಛೇರಿಗಳಿಗೆ ಬರುವ ಬದಲು ಅವರ ಮನೆ ಬಾಗಿಲಲ್ಲೇ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಪಾಲಿಕೆ ವ್ಯಾಪ್ತಿಯ 8 ವಲಯಗಳಲ್ಲಿ 28 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ವಲಯವಾರು 2 ಅಥವಾ 3 ವಿಧಾನಸಭಾ ಕ್ಷೇತ್ರಗಳನ್ನು ಒಟ್ಟುಗೂಡಿಸಿ ಸದರಿ ಕಾರ್ಯಕ್ರಮ ನಡೆಸಲಾಗುವುದು. ಅದರಂತೆ, ಮೊದಲ ಹಂತದಲ್ಲಿ ಮಹದೇವಪುರ, ಯಲಹಂಕ ಹಾಗೂ ಪೂರ್ವ ವಲಯ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು, 2ನೇ ಹಂತದಲ್ಲಿ ಉಳಿದ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮವನ್ನು ನಡೆಸಲಾಗುವುದು.
ನಾಗರಿಕರು ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿ ತಮ್ಮ ಅಹವಾಲು/ಸಮಸ್ಯೆಗಳನ್ನು ನಿವೇದಿಸಿಕೊಳ್ಳಬಹುದಾಗಿದ್ದು, ನಾಗರಿಕರಿಗೆ ಆಸನಗಳ ವ್ಯವಸ್ಥೆ, ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ ಹಾಗೂ ಮಧ್ಯಾಹ್ನ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿರುತ್ತದೆ. ಅಲ್ಲದೆ ವಿದ್ಯುತ್, ಜನರೇಟರ್ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿರುತ್ತದೆ. ಕಾರ್ಯಕ್ರಮದ ಸ್ಥಳದಲ್ಲಿ ನಾಗರಿಕರಿಗೆ ಅನುಕೂಲವಾಗಲು ಸಹಾಯ ಕೇಂದ್ರ (ಹೆಲ್ಪ್ ಡೆಸ್ಕ್) ಅನ್ನು ಸ್ಥಾಪಿಸಲಾಗಿರುತ್ತದೆ. ಅಲ್ಲದೆ ನಾಗರಿಕರಿಗೆ ಮಾಹಿತಿ ಒದಗಿಸುವ ನಾಮಫಲಕ (ಸೈನೇಜ್)ಗಳನ್ನು ಸಹ ಅಳವಡಿಸಲಾಗಿರುತ್ತದೆ.
ಸಿಬ್ಬಂದಿಗಳಿಗೆ ತರಬೇತಿ: ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಬಂದಂತಹ ದೂರುಗಳನ್ನು ಸಮಗ್ರ ಸಾರ್ವಜನಿಕ ಕುಂದುಕೊರತೆಗಳ ಪರಿಹಾರ ವ್ಯವಸ್ಥೆ (Integrated Public Grievance Redressal system - IPGRS) ಸಾಪ್ಟ್ವೇರ್ ನಲ್ಲಿ ದಾಖಲಿಸಲು ಪಾಲಿಕೆ ಸಿಬ್ಬಂದಿಗಳಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ನಾಗರಿಕರ ಸಂಪೂರ್ಣ ವಿವರ ಹಾಗೂ ನಾಗರಿಕರಿಂದ ಬಂದಂತಹ ದೂರುಗಳು ಯಾವ ಇಲಾಖೆಗೆ ಸಂಬಂಧಿಸಿದ್ದು ಎಂಬುದನ್ನು ಸಾಪ್ಟ್ವೇರ್ನಲ್ಲಿ ದಾಖಲಿಸಲು ವೈ-ಫೈ, ಗಣಕಯಂತ್ರ, ಪ್ರಿಂಟರ್ ಹಾಗೂ ಸ್ಕ್ಯಾನರ್ ಗಳ ವ್ಯವಸೆಯೊಂದಿಗೆ 15 ಕೌಂಟರ್ ಗಳನ್ನು ಸ್ಥಾಪಿಸಲಾಗಿರುತ್ತದೆ.
ರಾಮ ಜನ್ಮಭೂಮಿಗಾಗಿ 30 ವರ್ಷದ ಹಿಂದೆ ಹೋರಾಡಿದ ಹಿಂದೂ ಕಾರ್ಯಕರ್ತರನ್ನು ಬಂಧಿಸುತ್ತಿರುವ ಕಾಂಗ್ರೆಸ್ ಸರ್ಕಾರ!
ನಾಗರಿಕರಿಗೆ ಟೋಕನ್ ವ್ಯವಸ್ಥೆ: 'ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ' ಕಾರ್ಯಕ್ರಮದಲ್ಲಿ ನಾಗರಿಕರು ಅಹವಾಲುಗಳನ್ನು ನೀಡಲು ಅನುವಾಗಲೆಂದು ಟೋಕನ್ ಗಳನ್ನು ಪಡೆಯಲು 10 ಕೌಂಟರ್ ಗಳ ವ್ಯವಸ್ಥೆ ಮಾಡಲಾಗುತ್ತದೆ. ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ನೇರವಾಗಿ ಭೇಟಿಯಾಗಲು ವ್ಯವಸ್ಥೆ ಕಲ್ಪಿಸಲಾಗುತ್ತದೆ. ಆಯಾ ಕ್ಷೇತ್ರದ ಶಾಸಕರನ್ನೂ ಆಹ್ವಾನಿಸಲಾಗಿದೆ.
ಒಂದೇ ಸೂರಿನಡಿ ವಿವಿಧ ಇಲಾಖೆಗಳು: ನಾಗರಿಕರ ಸಮಸ್ಯೆಗಳನ್ನು ಒಂದೇ ಸೂರಿನಡಿ ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ಪ್ರಮುಖ ಇಲಾಖೆಗಳಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಅಬಿವೃದ್ಧಿ ಪ್ರಾಧಿಕಾರ, ಬೆಸ್ಕಾಂ, ಜಲಮಂಡಳಿ, ಬಿಎಂಆರ್ಸಿಎಲ್(ಮೆಟ್ರೋ), ಕೊಳಗೇರಿ ಅಭಿವೃದ್ಧಿ ಮಂಡಳಿ, ಪೊಲೀಸ್ ಇಲಾಖೆ, ಬಿಎಂಟಿಸಿ, ಕಂದಾಯ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಉಪಸ್ಥಿತರಿರಲಿದ್ದಾರೆ.
ಕೋವಿಡ್ 2ನೇ ಡೋಸ್ ಲಸಿಕೆ ಪಡೆದವರಿಗೆ ಕಾರ್ಬೋವ್ಯಾಕ್ಸ್ ಲಸಿಕೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ!