ಚೆನ್ನಗಿರಿ ಮಾಜಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಅವರ ಮೇಲೆ ದಾಖಲಾಗಿದ್ದ 40 ಲಕ್ಷ ರೂ. ಲಂಚ ಸ್ವೀಕಾರದ ಲೋಕಾಯುಕ್ತ ಕೇಸ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಬೆಂಗಳೂರು (ಡಿ.20): ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ 40 ಲಕ್ಷ ರೂ. ಹಣದ ಸಮೇತವಾಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಬೆಂಗಳೂರು ಜಲಮಂಡಳಿ ಅಧಿಕಾರಿ ಮಾಡಾಳು ಪ್ರಶಾಂತ್ ಪ್ರಕರಣದಲ್ಲಿ ಮಾಜಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಅವರಿಗೆ ನ್ಯಾಯಾಲಯ ಕ್ಲೀನ್ ಚಿಟ್ ಕೊಟ್ಟಿದೆ. ಶಾಸಕರ ಮೇಲೆ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಮಾರ್ಚ್ ತಿಂಗಳಲ್ಲಿ ಚನ್ನಗಿರಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಅವರ ಕಚೇರಿಯಲ್ಲಿ ಲಂಚ ಪಡೆಯುವಾಗ 40 ಲಕ್ಷ ರೂ. ಸಮೇತವಾಗಿ ಲೋಕಾಯಕ್ತರಿಗೆ ಅವರ ಪುತ್ರ ಮಾಡಾಳು ಪ್ರಶಾಂತ್ ಸಿಕ್ಕಿಬಿದ್ದಿದ್ದರು. ಈ ಪ್ರಕರಣದಲ್ಲಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಅವರನ್ನು ಕೂಡ ಆರೋಪಿಯನ್ನಾಗಿ ಮಾಡಿದ್ದರು. ಆದರೆ, ಲೋಕಾಯುಕ್ತ ಪೊಲೀಸರ ಬಂಧನದಿಂದ ನಾಪತ್ತೆಯಾಗಿದ್ದ ಮಾಡಾಳು ವಿರುಪಾಕ್ಷಪ್ಪ ಅವರು ನ್ಯಾಯಾಲಯದಿಂದ ಜಾಮೀನು ಪಡೆದ ನಂತರ ಸಾರ್ವಜನಿಕರ ಮುಂದೆ ಹಾಜರಾಗಿದ್ದರು. ಈ ಪ್ರಕರಣದ ವಿಚಾರಣೆಗೆ ಮಾಡಾಳು ವಿರುಪಾಕ್ಷಪ್ಪ ಅವರನ್ನು ವಶಕ್ಕೆ ಪಡೆಯಲು ನ್ಯಾಯಾಲಯದ ಅನುಮತಿ ನೀಡಿದ ನಂತರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದಾದ ನಂತರ ಲೋಕಾಯುಕ್ತ ಪೊಲೀಸರು ವಿಚಾರಣೆ ಮಾಡುತ್ತಿದ್ದು, ಪ್ರಕರಣದ ಅಪ್‌ಡೇಟ್ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡುತ್ತಿದ್ದರು. ಆದರೆ, ಈ ಹಣಕ್ಕೆ ನಮ್ಮ ಬಳಿ ದಾಖಲೆಗಳಿವೆ ಎಂದು ಮಾಜಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಹೇಳಿಕೊಂಡಿದ್ದರು. ಆದರೆ, ಈಗ ನ್ಯಾಯಾಲಯ 40 ಲಕ್ಷ ರೂ. ನಗದು ಹಣದ ಸಮೇತವಾಗಿ ಮಾಡಾಳು ವಿರುಪಾಕ್ಷಪ್ಪ ಅವರ ಪುತ್ರ ಸಿಕ್ಕಿಬಿದ್ದ ಪ್ರಕರಣದಲ್ಲಿ ಮಾಜಿ ಶಾಸಕರಿಗೆ ಕ್ಲೀನ್ ಚಿಟ್ ನೀಡಲಾಗಿದೆ.
ಬೆಳಗಾವಿಯಲ್ಲಿ ಹೆಚ್ಚಾಯ್ತು ಮರಾಠಿಗರ ಪುಂಡಾಟ: ಕನ್ನಡ ಬಾವುಟ ಹಾರಿಸಿದ ಕನ್ನಡಿಗರ ಮೇಲೆ ಹಲ್ಲೆ!
ಈ ಮೂಲಕ ಮಾಜಿ ಶಾಸಕ ಮಾಡಾಳು ವಿರೂಪಾಕ್ಷ ಗೆ ಬಿಗ್ ರಿಲೀಫ್ ಸಿಕ್ಕಿಂತಾಗಿದೆ. ಲೋಕಾಯುಕ್ತ ಪೊಲೀಸರಿಂದ ಮಾಡಾಳು ವಿರೂಪಾಕ್ಷ ವಿರುದ್ಧದ ಕೇಸ್ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಆದೇಶ ಹೊರಡಿಸಲಾಗಿದೆ. ವಿಧಾನಸಭಾ ಸ್ಪೀಕರ್ ಅನುಮತಿ ಪಡೆಯದೇ ಲೋಕಾಯುಕ್ತ ಪೊಲೀಸರಿಂದ ತನಿಖೆ ಮಾಡಲಾಗಿದೆ. ಈ ತಾಂತ್ರಿಕ ಕಾರಣದಿಂದಾಗಿ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರು ರಿಲೀಫ್ ಪಡೆದುಕೊಂಡಿದ್ದಾರೆ.
ಇನ್ನು ಕೆಎಸ್‌ಡಿಎಲ್‌ನ ಅಧ್ಯಕ್ಷರಾಗಿದ್ದ ಮಾಡಾಳು ವಿರುಪಾಕ್ಷಪ್ಪ ಅವರು ಲಂಚದ ಆರೋಪದಲ್ಲಿ ಜೈಲಿಗೆ ಹೋಗಿ ಬಂದಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಕೇವಲ ಮಾಡಾಳು ವಿರೂಪಾಕ್ಷಪ್ಪ ವಿರುದ್ಧ ದಾಖಲಾಗಿದ್ದ ಕೇಸ್ ಮಾತ್ರ ರದ್ದುಗೊಳಿಸಿ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದಿಂದ ಆದೇಶ ಹೊರಡಿಸಲಾಗಿದೆ. ಆದರೆ, ಮಾಡಳು ವಿರೂಪಾಕ್ಷಪ್ಪ ಪುತ್ರ ಸೇರಿ ಇತರ ಆರೋಪಿಗಳ ವಿರುದ್ಧದ ಲೋಕಾಯುಕ್ತ ಪ್ರಕರಣದ ಕೇಸ್ ಮುಂದುವರೆಯಲಿದೆ.
‘ಪೇ ಚಲುವ’ ಭಿತ್ತಿಪತ್ರ ಕೇಸಿನ ವಿಚಾರಣೆಗೆ ಹೈಕೋರ್ಟ್ ತಡೆ
‘ಪೇ ಚಲುವ’ ಭಿತ್ತಿಪತ್ರ ಕೇಸಿನ ವಿಚಾರಣೆಗೆ ಹೈಕೋರ್ಟ್ ತಡೆ
ಬೆಂಗಳೂರು (ಡಿ.20): ಕೃಷಿ ಸಚಿವ ಚೆಲುವರಾಯ ಸ್ವಾಮಿ ವಿರುದ್ಧ ‘ಪೇ ಚಲುವರಾಯಸ್ವಾಮಿ‘ ಅಭಿಯಾನ ನಡೆಸಿ ಸಾರ್ವಜನಿಕ ಪ್ರದೇಶದಲ್ಲಿ ಭಿತ್ತಿಪತ್ರ ಅಂಟಿಸಿದ ಆರೋಪದಡಿ ಮಂಡ್ಯದ ಐವರು ಬಿಜೆಪಿ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ದೋಷಾರೋಪಪಟ್ಟಿ ಮತ್ತು ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಪ್ರಕರಣ ಸಂಬಂಧ ತಮ್ಮ ವಿರುದ್ಧ ಕರ್ನಾಟಕ ಮುಕ್ತ ಪ್ರದೇಶಗಳ ವಿರೂಪ ತಡೆ ಕಾಯ್ದೆಯಡಿ ದಾಖಲಿಸಿರುವ ದೋಷಾರೋಪ ಪಟ್ಟಿ ಮತ್ತು ಮಂಡ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಹಿರಿಯ ಸಿವಿಲ್ ಮತ್ತು ಸಿಜೆಎಂ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಸಿ.ಟಿ. ಮಂಜುನಾಥ್ ಸೇರಿ ಐವರು ಬಿಜೆಪಿ ಕಾರ್ಯಕರ್ತ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರ ನ್ಯಾಯಪೀಠ ಈ ಆದೇಶ ಮಾಡಿತು. ಜತೆಗೆ, ಪ್ರತಿವಾದಿಯಾಗಿರುವ ಮಂಡ್ಯ ಪಶ್ಚಿಮ ಠಾಣಾ ಪೊಲೀಸರು ಮತ್ತು ದೂರುದಾರ ರುದ್ರೇಗೌಡಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.