ವಿಜಯನಗರ: ತಾಯಿಯನ್ನು ಚಿಕಿತ್ಸೆಗೆ ಕರೆತಂದ ಅಪ್ರಾಪ್ತೆಯ ಮೇಲೆ ಅತ್ಯಾ*ಚಾರವೆಸಗಿದ ಆಸ್ಪತ್ರೆ ನೌಕರ!

Published : May 09, 2026, 09:59 AM IST
Vijayanagara hospital assault case

ಸಾರಾಂಶ

ವಿಜಯನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ, ಗ್ರೂಪ್ ‘ಡಿ’ ನೌಕರನೊಬ್ಬ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತಾಯಿಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುತ್ತಿದ್ದ ಬಾಲಕಿಯನ್ನು ನಂಬಿಸಿ, ಕ್ವಾರ್ಟರ್ಸ್‌ಗೆ ಕರೆದೊಯ್ದು ಈ ಕೃತ್ಯ ಎಸಗಿದ್ದು, ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.

ವಿಜಯನಗರ ಜಿಲ್ಲೆಯಲ್ಲಿ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಅಪ್ರಾಪ್ತ ಬಾಲಕಿಗೆ ಲೈ*ಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. 16 ವರ್ಷದ ಅಪ್ರಾಪ್ತ ಬಾಲಕಿ ತನ್ನ ತಾಯಿಯನ್ನು ಚಿಕಿತ್ಸೆಗೆಂದು ಸರ್ಕಾರಿ ಆಸ್ಪತ್ರೆಗೆ ಕರೆತರುತ್ತಿದ್ದಳು. ತಾಯಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ, ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಅಜಯ್ ಮದಕರಿ (37) ಎಂಬ ವ್ಯಕ್ತಿ ಬಾಲಕಿಯೊಂದಿಗೆ ಪರಿಚಯ ಬೆಳೆಸಿಕೊಂಡಿದ್ದಾನೆ. ಕಳೆದ ಎರಡು ತಿಂಗಳಿನಿಂದ ಬಾಲಕಿ ತಾಯಿಯನ್ನು ಆಸ್ಪತ್ರೆಗೆ ಕರೆತರುತ್ತಿದ್ದ ಸಂದರ್ಭದಲ್ಲಿ ಈ ಪರಿಚಯ ಹೆಚ್ಚಾಗಿತ್ತು.

ಆಸ್ಪತ್ರೆಯಲ್ಲಿ ಗ್ರೂಪ್ ‘ಡಿ’ ನೌಕರ

ಆರೋಪಿಯು ಬಾಗಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಗ್ರೂಪ್ ‘ಡಿ’ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದು, ಬಾಲಕಿಯ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡಿದ್ದಾನೆ. ಘಟನೆ ನಡೆದ ದಿನ, ಬಾಲಕಿಯನ್ನು ಪುಸಲಾಯಿಸಿ ಆಸ್ಪತ್ರೆಯ ಕ್ವಾರ್ಟರ್ಸ್‌ಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿಗೆ ಕರೆದೊಯ್ದ ಬಳಿಕ, ಅವಳಿಗೆ ಮತ್ತು ಬರುವ ಔಷಧಿ ನೀಡಿದ್ದು, ನಂತರ ಅವಳ ಮೇಲೆ ಲೈ*ಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಪೋಕ್ಸೋ ಅಡಿ ಪ್ರಕರಣ ದಾಖಲು

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಸಂತ್ರಸ್ತ ಬಾಲಕಿಯ ಕುಟುಂಬಸ್ಥರು ಹೊಸಪೇಟೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಮಕ್ಕಳ ಮೇಲೆ ಲೈ*ಗಿಕ ಅಪರಾಧಗಳಿಂದ ರಕ್ಷಣೆಯ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಿದ್ದಾರೆ. ನಂತರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸಂತ್ರಸ್ತ ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಆಕೆಗೆ ಅಗತ್ಯ ಚಿಕಿತ್ಸೆ ಹಾಗೂ ಮನೋವೈದ್ಯಕೀಯ ನೆರವು ಒದಗಿಸಲಾಗುತ್ತಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

PREV
Read more Articles on
click me!

Recommended Stories

ಸಂಪುಟ ವಿಸ್ತರಣೆ ಬಗ್ಗೆ ಮಹತ್ವದ ಸುಳಿವು ನೀಡಿದ ದಿನೇಶ್ ಗುಂಡೂರಾವ್, ಹೇಳಿದ್ದೇನು?
ಮೂಲ್ಕಿ, ಸುಳ್ಯ, ಬಂಟ್ವಾಳ, ಪುತ್ತೂರಿನಲ್ಲಿ ಮಳೆ: ಕೆರೆಗಳಾದ ರಸ್ತೆಗಳು, ಕೃತಕ ನೆರೆ ಸೃಷ್ಟಿ