ಲೋಕಸಭಾ ಮತ ಎಣಿಕೆ ಹಿನ್ನೆಲೆ ಬೆಂಗಳೂರಿನಲ್ಲಿ 144 ಸೆಕ್ಷನ್‌ ಜಾರಿ

By Kannadaprabha News  |  First Published Jun 4, 2024, 10:23 AM IST

ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ನಗರದಲ್ಲಿ 144 ಸೆಕ್ಷನ್‌ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.


ಬೆಂಗಳೂರು (ಜೂ.4): ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ನಗರದಲ್ಲಿ 144 ಸೆಕ್ಷನ್‌ ಅಡಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಆದೇಶಿಸಿದ್ದಾರೆ.

ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಜನ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಜನ ಗುಂಪು ಸೇರುವುದು, ವಿಜಯೋತ್ಸವ ಮೆರವಣಿಗೆ ಹಾಗೂ ಸಭೆ-ಸಮಾರಂಭಗಳನ್ನು ನಡೆಸುವುದಾಗಿ ಕಡ್ಡಾಯವಾಗಿ ನಿಷೇಧಿಸ ಲಾಗಿದೆ. ನಿಷೇದಾಜ್ಞೆ ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

Latest Videos

undefined

ಎರಡೂ ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ ಕಾಯ್ದುಕೊಂಡ ರಾಹುಲ್ ಗಾಂಧಿ

ಶನಿವಾರ ಸಂಜೆ 4 ಗಂಟೆಯಿಂದಲೇ ನಗರದಲ್ಲಿ ಮದ್ಯ ಮಾರಾಟ ನಿಷೇಧಿಸಿದ್ದು, ಸೋಮವಾರ ಮಧ್ಯರಾತ್ರಿ 12 ಗಂಟೆಗೆವರೆಗೆ ಈ ನಿಷೇಧ ಮುಂದುವರೆಯಲಿದೆ.ನಗರದ ಮೂರು ಕೇಂದ್ರಗಳಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.

ಪೊಲೀಸ್‌ ಬಂದೋಬಸ್ತ್‌: ಮತ ಎಣಿಕೆ ದಿನ ಬಂದೋಬಸ್ತ್‌ ಕರ್ತವ್ಯಕ್ಕೆ 1524 ಪೊಲೀಸ್‌ ಅಧಿಕಾರಿ/ ಸಿಬ್ಬಂದಿ, 13 ಸಶಸ್ತ್ರ ತುಕಡಿಗಳು ಹಾಗೂ 4 ಕ್ಷಿಪ್ತ ಕಾರ್ಯ ಪಡೆಗಳನ್ನು ನಿಯೋಜಿಸಲಾಗಿದೆ. ಈಗಾಗಲೇ ಸ್ಟ್ರಾಂಗ್ ರೂಮ್‌ ಭದ್ರತೆಗಾಗಿ ದಿನದ ಮೂರು ಪಾಳಿಯಲ್ಲಿ 516 ಪೊಲೀಸ್ ಅಧಿಕಾರಿ/ ಸಿಬ್ಬಂದಿ ಮತ್ತು ಮತ ಎಣಿಕೆ ಕೇಂದ್ರದ ಸುತ್ತಮುತ್ತ ಸುಗಮ ಸಂಚಾರಕ್ಕಾಗಿ 400ಕ್ಕೂ ಅಧಿಕ ಸಂಚಾರ ಪೊಲೀಸ್‌ ಅಧಿಕಾರಿ/ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಮತ ಎಣಿಕೆ ಸಂಬಂಧ ಒಟ್ಟು 2,400ಕ್ಕೂ ಅಧಿಕ ಪೊಲೀಸರನ್ನು ಬಂದೋಬಸ್ತ್‌ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಫಲಿತಾಂಶ ಹೋರಬೀಳೋದೊಂದೇ ಬಾಕಿ: ಕೇಜಿಗಟ್ಟಲೇ ಲಡ್ಡಿನೊಂದಿಗೆ ಸಂಭ್ರಮಾಚರಣೆಗೆ ಕಾಯ್ತಿರುವ ಬಿಜೆಪಿಗರು

ನಗರದ ಎಲ್ಲ ಪೊಲೀಸ್‌ ಠಾಣಾಗಳ ವ್ಯಾಪ್ತಿಯಲ್ಲಿಯೂ ಸಹ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸೂಕ್ತ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕಾರಿ/ ಸಿಬ್ಬಂದಿಗಳೊಂದಿಗೆ ಕೆಎಸ್‌ಆರ್‌ಪಿ, ಸಿಎಆರ್‌ ತುಕಡಿಗಳನ್ನೂ ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ತಿಳಿಸಿದ್ದಾರೆ.

click me!