ಮುಸ್ಲಿಂ, ಕ್ರಿಶ್ಚಿಯನ್, ಜೈನರಿಗೆ ಸಾಲ ಬೇಕೇ? ಈಗಲೇ ಸರ್ಕಾರದ ಯೋಜನೆಗೆ ಅರ್ಜಿ ಹಾಕಿ!

Published : Sep 25, 2025, 07:01 PM IST
Karnataka govt Loan Application

ಸಾರಾಂಶ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2025-26ನೇ ಸಾಲಿಗಾಗಿ ವಿವಿಧ ಸಾಲ ಯೋಜನೆಗಳನ್ನು ಪ್ರಕಟಿಸಿದೆ. ಮತೀಯ ಅಲ್ಪಸಂಖ್ಯಾತ ಸಮುದಾಯದವರು ವೃತ್ತಿ ಪ್ರೋತ್ಸಾಹ, ಸ್ವಾವಲಂಭಿ ಸಾರಥಿ, ಶ್ರಮಶಕ್ತಿ, ವ್ಯಾಪಾರ, ಮತ್ತು ವಿದೇಶಿ ಶಿಕ್ಷಣ ಸಾಲಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಬೆಂಗಳೂರು (ಸೆ.25): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿನಲ್ಲಿ ವೃತ್ತಿ ಪ್ರೋತ್ಸಾಹ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಶ್ರಮಶಕ್ತಿ ಸಾಲ ಯೋಜನೆ, ವ್ಯಾಪಾರ / ಉದ್ಯಮಗಳಿಗೆ ನೇರಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣಕ್ಕಾಗಿ ಸಾಲ ಯೋಜನೆ, ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಯಾಧನ ಯೋಜನೆ ಮತ್ತು ಸ್ವಾಂತನ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತ ರಿಂದ (ಅಂದರೆ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು ಹಾಗೂ ಪಾರ್ಸಿ ಜನಾಂಗದವರಿಂದ ) ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರಬೇಕು. ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 15 ವರ್ಷದಿಂದ ಖಾಯಂ ನಿವಾಸಿಯಾಗಿರಬೇಕು. ಆಸಕ್ತರು ವೆಬ್ ಸೈಟ್ www.kmdconline.karnataka.gov.in ನಲ್ಲಿ ಅಕ್ಟೋಬರ್ 16, 2025 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ (ಕೇಂದ್ರಿಯ ವಿಭಾಗ), ಕೊಠಡಿ ಸಂಖ್ಯೆ FF-29/37,1ನೇಮಹಡಿ, ಹಮೀದ್ ಷಾ ಕಾಂಪ್ಲೆಕ್ಸ್, ಹಲಸೂರು ಗೇಟ್ ಪೊಲೀಸ್ ಠಾಣೆ, ಕಬ್ಬನ್ ಪೇಟೆ ಮುಖ್ಯ ರಸ್ತೆ, ಬೆಂಗಳೂರು-560 002 ಅಥವಾ ದೂರವಾಣಿ ಸಂಖ್ಯೆ 080-22114815 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಕೇಂದ್ರಿಯ ವಿಭಾಗ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Read more Articles on
click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಬೆಂಗಳೂರು ಏರ್ಪೋರ್ಟ್ ಹೊಸ ಪಿಕ್‌ಅಪ್‌, ಪಾರ್ಕಿಂಗ್ ರೂಲ್ಸ್; ಪ್ರಯಾಣಿಕರ ಸಮಸ್ಯೆ 30 ದಿನಗಳೊಳಗೆ ನಿವಾರಣೆ