ಕರ್ನಾಟಕ ಉಪ ಚುನಾವಣೆ ಕಣ ರಂಗೇರಿದೆ. ಕಾಂಗ್ರೆಸ್ ಇಂದು ಅಭ್ಯರ್ಥಿಗಳ ಘೋಷಣೆ ಮಾಡಲಿದೆ. ಬಾಗಲಕೋಟೆ ಹಾಗೂ ದಾವಣೆಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡುವಂತೆ ಸಚಿವ ಜಮೀರ್ ಅಹಮ್ಮದ್ ಬಿಗಿಪಟ್ಟು ಹಿಡಿದಿದ್ದಾರೆ. ಇತ್ತ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಖಾಸಗಿ ಹೊಟೆಲ್‌ನಲ್ಲಿ ಸತತ ಸಭೆಗಳನ್ನು ನಡೆಸುತ್ತಿದ್ದಾರೆ. ರಾಜ್ಯದ ಚುನಾವಣಾ ಅಪ್‌ಡೇಟ್ ಸೇರಿದಂತೆ ಕ್ಷಣ ಕ್ಷಣದ ಲೈವ್ ನ್ಯೂಸ್ ಇಲ್ಲಿದೆ.

10:49 PM (IST) Mar 21
10:25 PM (IST) Mar 21
10:17 PM (IST) Mar 21
33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾಮಗಾರಿ ಪೂರ್ಣಗೊಳ್ಳುವ ಭರವಸೆ ಇದೆ. ಕಾಮಗಾರಿಯು ನಿರೀಕ್ಷಿತ ಸಮಯಕ್ಕಿಂತ ವೇಗವಾಗಿ ಸಾಗುತ್ತಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹೇಳಿದರು.
10:04 PM (IST) Mar 21
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆಬಿದ್ದಿದೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ಅತೃಪ್ತ ಮುಖಂಡರ ಮನವೊಲಿಸಲಾಗಿದ್ದು, ಶಾಮನೂರು ಕುಟುಂಬದ ಮೊಮ್ಮಗ ಹಾಗೂ ಉಮೇಶ್ ಮೇಟಿಗೆ ಟಿಕೆಟ್ ಅಂತಿಮಗೊಂಡಿದೆ.
09:45 PM (IST) Mar 21
ಕುದುರೆಮುಖ ರಾಷ್ಟ್ರೀಯ ಉದ್ಯಾನದ 25ಕ್ಕೂ ಹೆಚ್ಚಿನ ಕಡೆಗಳಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿರುವ ಕುರಿತು ತನಿಖೆ ಆರಂಭಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
09:18 PM (IST) Mar 21
ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಪ್ರಸಿದ್ಧ ಬೆಟ್ಟದ ಮಲ್ಲೇಶ್ವರ ಗುಡ್ಡಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ಭಸ್ಮವಾಗಿದೆ. ಈ ದುರ್ಘಟನೆಯಿಂದ ಅಪರೂಪದ ಸಸ್ಯ ಸಂಪತ್ತು ನಾಶವಾಗಿದ್ದು, ಕೃಷ್ಣಮೃಗ ಸೇರಿದಂತೆ ಅನೇಕ ವನ್ಯಜೀವಿಗಳು ಪ್ರಾಣಭಯದಲ್ಲಿವೆ.
08:35 PM (IST) Mar 21
ತಮ್ಮ 50 ವರ್ಷಗಳ ಸುದೀರ್ಘ ರಾಜಕಾರಣದಲ್ಲಿ ಜನಸೇವೆಯೇ ಮುಖ್ಯ ಗುರಿಯಾಗಿಟ್ಟುಕೊಂಡು ದಾಂಡೇಲಿ, ಹಳಿಯಾಳ ಮತ್ತು ಜೋಯಿಡಾ ಭಾಗಗಳಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
06:27 PM (IST) Mar 21
ಆನೆ ದಾಳಿ ಮುಂದಿಟ್ಟುಕೊಂಡು ಆನೆ ದಾಳಿಯ ಸಾವಿನಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ವಿರಾಜಪೇಟೆ ಶಾಸಕ, ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಕೊಡಗು ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
06:15 PM (IST) Mar 21
ನಮಗೆ ಸ್ವಾತಂತ್ರ್ಯ ಬಂದಾಗಿನಿಂದಲೂ ಅವತ್ತಿನ ಸೋವಿಯತ್ ಒಕ್ಕೂಟ ಇಂದಿನ ರಷ್ಯಾ ನಮ್ಮ ಸ್ನೇಹ ರಾಷ್ಟ್ರ. ನೆಹರು ಕಾಲದಿಂದಲೂ ಐತಿಹಾಸಿಕ ಸ್ನೇಹ ರಾಷ್ಟ್ರ. ಆದರೆ ಪ್ರಧಾನಿಯವರು ಇಂದು ಅದನ್ನು ಕೆಡಿಸಿದ್ದಾರೆ.
05:43 PM (IST) Mar 21
ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಮೇಲಿನ ಲೈಂಗಿಕ ಕಿರುಕುಳ ಆರೋಪವು ಸುಳ್ಳು ಮತ್ತು ಪ್ರಚೋದಿತ ಎಂದು ಪೊಲೀಸ್ ಪ್ರಾಥಮಿಕ ತನಿಖೆ ಹೇಳಿದೆ. ಆದರೆ, ಈ ವರದಿಯನ್ನು ತಿರಸ್ಕರಿಸಿರುವ ದೂರುದಾರ ಮಹಿಳೆ, ಇದು ಹಿರಿಯ ಅಧಿಕಾರಿಗಳ ಶಾಮೀಲಿನಿಂದ ಕೂಡಿದ ವರದಿ ಎಂದು ಆರೋಪಿಸಿದ್ದಾರೆ.
05:12 PM (IST) Mar 21
ಪಾಕಿಸ್ತಾನದಲ್ಲಿ 'ಧುರಂಧರ್: ದಿ ರಿವೆಂಜ್' ಚಿತ್ರವನ್ನು ಬ್ಯಾನ್ ಮಾಡಲಾಗಿದೆ. ಆದರೆ ಅಲ್ಲಿ ನಡೆದ ಒಂದು ಘಟನೆ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಪಾಕಿಸ್ತಾನಿ ಪತ್ರಕರ್ತರೊಬ್ಬರು ನೋಡುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.
05:07 PM (IST) Mar 21
ಯಾದಗಿರಿಯ ಸೈದಾಪುರದಲ್ಲಿ, ಕೆಕೆಆರ್‌ಟಿಸಿಯಿಂದ ವಜಾಗೊಂಡಿದ್ದ ಮಾಜಿ ಚಾಲಕ ಮಹಿಪಾಲರೆಡ್ಡಿ ಎಂಬಾತ ಕುಡಿದ ಮತ್ತಿನಲ್ಲಿ ಸರ್ಕಾರಿ ಬಸ್ಸನ್ನೇ ಕದ್ದೊಯ್ದಿದ್ದಾನೆ. ಬಸ್ಸನ್ನು ತನ್ನ ಸ್ವಗ್ರಾಮದ ದೇವಸ್ಥಾನದ ಮುಂದೆ ನಿಲ್ಲಿಸಿದ್ದಾನೆ.
05:00 PM (IST) Mar 21
ಯುಗಾದಿ ಹಬ್ಬದಂದು ರಿಷಬ್ ಶೆಟ್ಟಿ 'ಕಾಂತಾರ ಅಧ್ಯಾಯ 2' ಇಲ್ಲಿಂದ ಶುರು ಎಂದು ಘೋಷಿಸಿದ್ದಾರೆ. ಹೊಂಬಾಳೆ ಫಿಲಂಸ್ ಬದಲು ತಮ್ಮದೇ ಬ್ಯಾನರ್ ಲೋಗೋ ಬಳಸಿರುವುದು, ಅವರು ಸ್ವಂತ ಬ್ಯಾನರ್‌ನಲ್ಲಿ ಸಿನಿಮಾ ಮಾಡುತ್ತಿದ್ದಾರೆಯೇ? ಹೊಂಬಾಳೆ ಜೊತೆಗಿನ ಸಂಬಂಧದಲ್ಲಿ ಬಿರುಕು ಮೂಡಿದೆಯೇ ಎಂಬ ಚರ್ಚೆಗೆ ಕಾರಣವಾಗಿದೆ.
04:53 PM (IST) Mar 21
ಮಕ್ಕಳು ಆಟವಾಡುತ್ತಿದ್ದರು ಎಂಬ ಕಾರಣಕ್ಕೆ ವಸತಿ ಶಾಲೆಯ ಪ್ರಿನ್ಸಿಪಾಲ್ ಹಾಗೂ ವಾರ್ಡನ್ ಮಕ್ಕಳನ್ನ ಅಂಡರ್ ಗ್ರೌಂಡ್ ರೂಮಿನಲ್ಲಿ ಉಪವಾಸವಿಟ್ಟು ಮನಸ್ಸು ಇಚ್ಛೆ ಹಲ್ಲೇ ವಸತಿ ಶಾಲೆಯಲ್ಲಿ ನಡೆದಿದೆ.
04:49 PM (IST) Mar 21
'ಬಾರ್ಬಿ', 'ದಿ ವುಲ್ಫ್ ಆಫ್ ವಾಲ್ ಸ್ಟ್ರೀಟ್' ಅಂತಹ ಸೂಪರ್ ಹಿಟ್ ಸಿನಿಮಾಗಳ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿರುವ ಈ ಸುಂದರಿ, ಈಗ ಗ್ಲಾಮರ್ ಲೋಕದ ಬೆಳಕಿಗಿಂತ ಹೆಚ್ಚಾಗಿ ತಮ್ಮ 'ಖಾಸಗಿ ಜೀವನ'ಕ್ಕೆ (Privacy) ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಹೌದು, ಆದ್ರೆ ಯಾಕೆ ಹೀಗೆ? ಈ ಸ್ಟೋರಿ ನೀಡಿ..
04:42 PM (IST) Mar 21
ಗಳಿಕೆಯ ರೇಸ್‌ನಲ್ಲಿ ಎಸ್.ಎಸ್. ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್’ ಸಿನಿಮಾವನ್ನು ಹಿಂದಿಕ್ಕಿದೆ. ಮೊದಲ ದಿನ ರೂ.275 ಕೋಟಿ ಕಲೆಕ್ಷನ್ ಮಾಡಿದ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಮೊದಲ ಸ್ಥಾನದಲ್ಲಿದೆ.
04:30 PM (IST) Mar 21
ಭ್ರಮೆಯಲ್ಲಿ ಬದುಕುವ ಆದಿ, ಅಚಾನಕ್ ಆಗಿ ಆತನ ಬದುಕಿಗೆ ಬರುವ ಹೆಣ್ಣುಮಗುವಿನ ಕಥೆ ಈ ಸೀರೀಸ್‌ನ ಎರಡನೇ ಭಾಗದಲ್ಲಿತ್ತು. ಮೂರನೆಯ ಹಾಗೂ ಕೊನೆಯ ಭಾಗದಲ್ಲಿ ಹಾಗೆ ಬಂದ ಮಗು ಆದಿಯ ಜಗತ್ತಾಗುವ ಕಥೆ ಇದೆ.
04:08 PM (IST) Mar 21
03:21 PM (IST) Mar 21
ಬೆಂಗಳೂರಿನ ಎಂ.ಜಿ. ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಲ್ಯಾಂಬೋರ್ಗಿನಿ ಕಾರು ಚಾಲಕನೊಬ್ಬ ಅಪಾಯಕಾರಿ ಡ್ರಿಫ್ಟಿಂಗ್ ಸ್ಟಂಟ್ ನಡೆಸಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
03:17 PM (IST) Mar 21
ಶಾಲಾ ಮಕ್ಕಳನ್ನು ಅಂಡರ್ ಗ್ರೌಂಡ್ ರೂಮಿನಲ್ಲಿ ಕೂಡಿಹಾಕಿ ಪ್ರಾಚಾರ್ಯರು ಕ್ರೂರವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಘಟನೆ ಬೆಳಕಿಗೆ ಬಂದಿದ್ದು ಹೇಗೆ?
02:50 PM (IST) Mar 21
ದಾವಣಗೆರೆ ರಾಜಕಾರಣದಲ್ಲಿ ಶಾಮನೂರು ಕುಟುಂಬದ ಪ್ರಾಬಲ್ಯದ ಕುರಿತು ಜೆಡಿಎಸ್ ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್ ವ್ಯಂಗ್ಯವಾಡಿದ್ದಾರೆ. ಒಂದು ಕಾಲದಲ್ಲಿ ಬಿ-ಫಾರಂ ಮನೆಗೆ ಬರುತ್ತಿತ್ತು, ಈಗ ಅದಕ್ಕಾಗಿ ಅಲೆಯುವಂತಾಗಿದೆ ಎಂದು ಟೀಕಿಸಿದ್ದಾರೆ.
02:05 PM (IST) Mar 21
01:19 PM (IST) Mar 21
ರಂಜಾನ್ ಸಾಮೂಹಿಕ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿಯಿಂದಾಗಿ 10 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ದಾವಣಗೆರೆ ತಾಲೂಕಿನ ಆನಗೋಡು ಈದ್ಗಾ ಮೈದಾನದಲ್ಲಿ ನಡೆದಿದೆ.
12:38 PM (IST) Mar 21
12:23 PM (IST) Mar 21
ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತುಹೋಗಿದ್ದ 10 ಲಕ್ಷ ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗನ್ನು, ಚಾಲಕ ಸಿದ್ದರಾಜು ಮತ್ತು ಕಂಡಕ್ಟರ್ ನಾಗೇಂದ್ರ ಅವರು ಪ್ರಾಮಾಣಿಕವಾಗಿ ಹಿಂತಿರುಗಿಸಿದ್ದಾರೆ. ಹಿರಿಯ ಅಧಿಕಾರಿಗಳ ಮೂಲಕ ವಾರಸುದಾರರಿಗೆ ಸುರಕ್ಷಿತವಾಗಿ ಹಸ್ತಾಂತರಿಸಲಾಯಿತು.
11:49 AM (IST) Mar 21
ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಹಿನ್ನೆಲೆಯಲ್ಲಿ, ಅವರ ಅಭಿಮಾನಿಗಳಿಗಾಗಿ 15 ವರ್ಷಗಳ ಹಿಂದಿನ ಬ್ಲಾಕ್ ಬಸ್ಟರ್ ಚಿತ್ರ 'ಸಾರಥಿ'ಯನ್ನು ಮರು ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ. ಕಾಕತಾಳೀಯವೆಂದರೆ, 2011ರಲ್ಲಿ ಈ ಸಿನಿಮಾ ಬಿಡುಗಡೆಯಾದಾಗಲೂ ದರ್ಶನ್ ಜೈಲಿನಲ್ಲಿದ್ದರು.
11:29 AM (IST) Mar 21
ರಾಜೀನಾಮೆ ನೀಡಲು ಮುಂದಾದ ಸಚಿವ ಜಮೀರ್ ಅಹಮ್ಮದ್, ಕಾಂಗ್ರೆಸ್‌ನಲ್ಲಿ ಹೊಸ ಬಾಂಬ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೆವಾಲ ಮುಂದೆ ಜಮೀರ್ ಅಹಮ್ಮದ್ ಬಾಂಬ್ ಸಿಡಿಸಿದ್ದಾರೆ. ಇದು ಕೋಲಾಹಲಕ್ಕೆ ಕಾರಣವಾಗಿದೆ.
10:56 AM (IST) Mar 21
ಬಲ್ಕ್ ಡೀಸೆಲ್ ಬೆಲೆ 22 ರೂಪಾಯಿ ಏರಿಕೆ, KSRTC, ಬಿಎಂಟಿಸಿ ಟಿಕೆಟ್ ದರ ಏರಿಕೆ ಸಾಧ್ಯತೆ, ಮಧ್ಯಪ್ರಾಚ್ಯ ಯುದ್ಧದಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಇದೀಗ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ ಗೋಚರಿಸುತ್ತಿದೆ.
10:37 AM (IST) Mar 21
10:17 AM (IST) Mar 21
ಬೆಸ್ಕಾಂ ಸಹಾಯಕ ಎಂಜಿನಿಯರ್ ಒಬ್ಬರ ಮೇಲ್ಮನವಿ ವಿಚಾರಣೆ ವೇಳೆ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಸರ್ಕಾರಿ ಅಧಿಕಾರಿಗಳು ಮತ್ತು ಸರ್ಕಾರಿ ಸ್ವಾಮ್ಯದ ಉದ್ಯಮಗಳ ಅಧಿಕಾರಿಗಳ ವರ್ಗಾವಣೆ ಹಾಗೂ ಸ್ಥಳ ನಿಯುಕ್ತಿ ವಿಚಾರಗಳು ಸಂಬಂಧಪಟ್ಟ ಆಡಳಿತ ಇಲಾಖೆಯ ಹಂತದಲ್ಲೇ ಮುಗಿಯಬೇಕು ಎಂದು ಸ್ಪಷ್ಟಪಡಿಸಿದೆ
10:03 AM (IST) Mar 21
ಗ್ಯಾಸ್, ಪೆಟ್ರೋಲ್ ಬೆನ್ನಲ್ಲೇ ಕರೆಂಟ್ ಶಾಕ್, ಮಾ.25ರ ವರೆಗೆ ಬೆಸ್ಕಾಂ ವ್ಯಾಪ್ತಿಯ ವಿವಿದೆಡೆ ವಿದ್ಯುತ್ ಕಡಿತ, ನಾಳೆಯಿಂದಲೇ ವಿದ್ಯುತ್ ಕಡಿತ ಶುರುವಾಗಲಿದೆ. ಎಲ್ಲೆಲ್ಲಾ ವಿದ್ಯುತ್ ಕಡಿತ ನಡೆಯಲಿದೆ, ಯಾವ ಸಮಯಕ್ಕೆ ಕಡಿತಗೊಳ್ಳಲಿದೆ?
08:47 AM (IST) Mar 21
ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆಯನ್ನು ನೀಗಿಸಲು ತುರ್ತು ಕ್ರಮ ಕೈಗೊಳ್ಳಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದಾರೆ.
08:30 AM (IST) Mar 21
ನಿವೃತ್ತಿಗೆ ವಾರ ಇರುವಾಗಲೇ ಸಮಾಜ ಕಲ್ಯಾಣ ಅಧಿಕಾರಿ ಆತ್ಮ*ತ್ಯೆ, ಸಾವಿಗೂ ಮುನ್ನ ವಿಡಿಯೋ ರೆಕಾರ್ಡ್, ತನ್ನ ಸಾವಿಗೆ ಕಾರಣ ಏನು ಅನ್ನೋದು ಬಹಿರಂಗಪಡಿಸಿದ್ದಾರೆ. ಆದರೆ ಅಧಿಕಾರಿ ತಂದೆಯ ಸಾವು ಹಾಗೂ ಈಗಿನ ನಿರ್ಧಾರಗಳು ಕೆಲ ಅನುಮಾನಕ್ಕೆ ಕಾರಣವಾಗಿದೆ.
08:08 AM (IST) Mar 21
ಮೈಸೂರು ರಸ್ತೆಯ ದೀಪಾಂಜಲಿ ನಗರ ಜಂಕ್ಷನ್‌ನಿಂದ ಹೊಸಕೆರೆಹಳ್ಳಿ ಪಿಇಎಸ್ ಕಾಲೇಜು ಸಮೀಪದ ನೈಸ್ ರಸ್ತೆಗೆ ಸಂಪರ್ಕ ಕಲ್ಪಿಸುವ ನಾಲ್ಕು ಪಥದ ಹೊಸ ಲಿಂಕ್ ರಸ್ತೆ ಸಂಚಾರಕ್ಕೆ ಮುಕ್ತಗೊಂಡಿದೆ.
08:02 AM (IST) Mar 21
ಯುದ್ಧದಿಂದ ಜನರು ಕಂಗಾಲು, ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಬಂಕ್‌ನಲ್ಲಿ ಪೆಟ್ರೋಲ್ ಬೆಲೆ ಏರಿಕೆ, ಪ್ರೀಮಿಯಂ ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾಗಿದೆ. ಮೊದಲು ಶೆಲ್ ಪೆಟ್ರೋಲ್ ದರ ಏರಿಕೆಯಾಗಿದ್ದು, ಇದೀಗ ಎಲ್ಲಾ ಬಂಕ್‌ನಲ್ಲಿ ಬೆಲೆ ಏರಿಕೆಯಾಗಿದೆ.
07:59 AM (IST) Mar 21
07:39 AM (IST) Mar 21
ಚಿಕ್ಕಮಗಳೂರು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಸರ್ಕಾರಿ ಬಸ್ ಪಲ್ಟಿ, 8 ಜನರಿಗೆ ಗಾಯ, ಕುಕ್ಕನೂರಿನಿಂದ-ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಅಪಘಾತಗೊಂಡಿದೆ. ಬಸ್‌ನಲ್ಲಿ 40 ಪ್ರಯಾಣಕರಿದ್ದರು.
07:34 AM (IST) Mar 21
ರಾಜ್ಯದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ನಿರೀಕ್ಷೆಯಂತೆ ಬಾಗಲಕೋಟೆಗೆ ವೀರಣ್ಣ ಚರಂತಿಮಠಗೆ ಟಿಕೆಟ್ ನೀಡಲಾಗಿದ್ದು, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ದಾಸಕರಿಯಪ್ಪ ಅವರನ್ನ ಆಯ್ಕೆ ಮಾಡುವ ಮೂಲಕ ಅಚ್ಚರಿ ಮೂಡಿಸಿದೆ.
07:32 AM (IST) Mar 21
ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆಯಿಂದಾಗಿ ನಗರದ ಹೆಸರು ಹಾಳಾಗುತ್ತಿದೆ. ಇದಕ್ಕಾಗಿ ಸೂಕ್ತ ವಾಹನ ನಿಲುಗಡೆ ನೀತಿ ರೂಪಿಸಬೇಕಾಗಿದೆ. ರಸ್ತೆ ಬದಿಯಲ್ಲಿ ಬೇಕಾಬಿಟ್ಟಿಯಾಗಿ ವಾಹನಗಳನ್ನು ನಿಲುಗಡೆ ಮಾಡಿದರೆ ಟೋಯಿಂಗ್ ವ್ಯವಸ್ಥೆ ತರಲು ನಿರ್ಧಾರಿಸಲಾಗಿದೆ
07:15 AM (IST) Mar 21
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಕ್ಷದ ಆಂತರಿಕ ಸಮೀಕ್ಷೆ ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದರು.