ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಜಾನುವಾರು ಸಾಗಣೆ ಸಮಯದಲ್ಲಿ ವಶಪಡಿಸಿಕೊಂಡ ವಾಹನಗಳನ್ನು ಬ್ಯಾಂಕ್ ಖಾತರಿ ಬದಲು ನಷ್ಟ ಭರ್ತಿ ಮುಚ್ಚಳಿಕೆ (ಇಂಡೆಮ್ನಿಟಿ ಬಾಂಡ್) ನೀಡಿ ಬಿಡಿಸಿಕೊಳ್ಳಲು ಅನುವಾಗುವಂತೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ- 2020ಕ್ಕೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಈಗ ಇರುವ ನಿಯಮದ ಪ್ರಕಾರ ಜಾನುವಾರುಗಳ ಅನಧಿಕೃತ ಸಾಗಣೆ ವೇಳೆ ಸಿಕ್ಕಿಬಿದ್ದ ವಾಹನಗಳನ್ನೂ ಬ್ಯಾಂಕ್ ಗ್ಯಾರಂಟಿ ನೀಡಿ ಮಾತ್ರ ಬಿಡಿಸಿಕೊಳ್ಳಬೇಕು. 3 ರಿಂದ 5 ಲಕ್ಷ ರು. ಅಥವಾ ಅದಕ್ಕಿಂತ ಹೆಚ್ಚಿನ ಮೌಲ್ಯದ ಬ್ಯಾಂಕ್ ಖಾತರಿ ನೀಡುವುದು ಕಡ್ಡಾಯವಾಗಿತ್ತು. ಇದರಿಂದ ಸಣ್ಣಪುಟ್ಟ ವಾಹನ ಮಾಲೀಕರಿಗೆ ಸಮಸ್ಯೆಯಾಗುತ್ತಿತ್ತು. ವಾಹನಗಳ ಬಾಡಿಗೆಯಿಂದಲೇ ಜೀವನ ನಡೆಸುತ್ತಿರುವ ಕುಟುಂಬಗಳಿಗೆ ಕಷ್ಟವಾಗುತ್ತದೆ ಎಂಬ ಕಾರಣದಿಂದ ವಿಧೇಯಕಕ್ಕೆ ತಿದ್ದುಪಡಿ ತರಲು ಸಂಪುಟದಲ್ಲಿ ತೀರ್ಮಾನಿಸಲಾಗಿದೆ.

09:07 AM (IST) Dec 05
Bandigani math Daneshwara seer passes away: ಬಾಗಲಕೋಟೆಯ ಬಂಡಿಗಣಿ ಮಠದ 'ದಾಸೋಹ ಚಕ್ರವರ್ತಿ' ಖ್ಯಾತಿಯ ದಾನೇಶ್ವರ ಸ್ವಾಮೀಜಿ (75) ಅನಾರೋಗ್ಯದಿಂದ ಲಿಂಗೈಕ್ಯ. ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ನಿಧನರಾದ ಶ್ರೀಗಳ ಅಂತ್ಯಸಂಸ್ಕಾರವು ವೀರಶೈವ ಲಿಂಗಾಯತ ವಿಧಿವಿಧಾನಗಳ ಪ್ರಕಾರ ನಡೆಯಲಿದೆ.
08:11 AM (IST) Dec 05
KSRTC Bus Turns Bar; ಕೊಡಗಿನ ಕುಶಾಲನಗರದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ಸಿನಲ್ಲಿ ಮೂವರು ಪ್ರಯಾಣಿಕರು ಸಾರ್ವಜನಿಕವಾಗಿ ಮದ್ಯ ಸೇವನೆ ಮಾಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
07:43 AM (IST) Dec 05
ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಮಂಡಿಸಬಹುದಾದ ಅವಿಶ್ವಾಸ ನಿರ್ಣಯವನ್ನು ಒಗ್ಗಟ್ಟಾಗಿ ಎದುರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರ ಸಭೆ ನಡೆಸಿದರು. ಸರ್ಕಾರದ ಸಾಧನೆಗಳನ್ನು ಮುಂದಿಟ್ಟು ಸಮರ್ಥವಾಗಿ ಎದುರಿಸಲು, ನಾಯಕತ್ವದ ಬಗ್ಗೆ ಯಾವುದೇ ಗೊಂದಲ ಬೇಡವೆಂದು ಸಭೆಯಲ್ಲಿ ನಿರ್ಧರಿಸಲಾಯಿತು.
07:32 AM (IST) Dec 05
ದ್ವೇಷ ಭಾಷಣ, ದ್ವೇಷ ಹರಡುವಿಕೆ ಅಥವಾ ಹಿಂಸೆಗೆ ಪ್ರಚೋದಿಸುವವರಿಗೆ ಒಂದು ಲಕ್ಷ ರು.ವರೆಗೆ ದಂಡ ಹಾಗೂ 2 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸುವ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ನಿಯಂತ್ರಣ ವಿಧೇಯಕ-2025’ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ
07:27 AM (IST) Dec 05
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಧರಿಸಿರುವ ದುಬಾರಿ ಕಾರ್ಟಿಯರ್ ವಾಚ್ ಅನ್ನು ಚುನಾವಣಾ ಅಫಿಡವಿಟ್‌ನಲ್ಲಿ ಘೋಷಿಸಿಲ್ಲ ಎಂದು ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಸುಮಾರು ₹43 ಲಕ್ಷ ಮೌಲ್ಯದ ಈ ವಾಚ್‌ನ ಖರೀದಿ ದಾಖಲೆಗಳನ್ನು ಬಿಡುಗಡೆ ಮಾಡುವಂತೆ ಆಗ್ರಹ.
07:12 AM (IST) Dec 05
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಒತ್ತಾಯಿಸಿ ತುಮಕೂರಿನಲ್ಲಿ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೇನೆ ಪ್ರತಿಭಟನೆ ದಲಿತ ಸಮುದಾಯಕ್ಕೆ ಅವಕಾಶ ನೀಡಬೇಕೆಂದು ಆಗ್ರಹಿಸಿ, ಕಾರ್ಯಕರ್ತರು ರಕ್ತದಲ್ಲಿ ಸಹಿ ಸಂಗ್ರಹಿಸಿ ಎಐಸಿಸಿಗೆ ಮನವಿ ರವಾನಿಸಿದ್ದಾರೆ.