ನ್ಯಾಷನಲ್ ಹೆರಾಲ್ಡ್ ಪ್ರಕರಣ ಕಾಂಗ್ರೆಸ್‌ನ ಗಾಂಧಿ ಕುಟುಂಬಕ್ಕೆ ಕುಣಿಕೆಯಾಗಿ ಸುತ್ತಿಕೊಂಡಿರುವ ಹೊತ್ತಿನಲ್ಲಿ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೂ ದೆಹಲಿ ಪೊಲೀಸರು ಇದಕ್ಕೆ ಸಂಬಂಧಿಸಿದಂತೆ ಹಣಕಾಸು ವಿನಿಮಯದ ಮಾಹಿತಿಗಳನ್ನು ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ಅವರಿಗೆ ಮಾಹಿತಿ ಇರಬಹುದು ಎಂಬ ಶಂಕೆಯ ಮೇಲೆ ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ ನ.29ರಂದು ಈ ನೋಟಿಸ್ ಕಳಿಸಿದೆ. ಅದರಲ್ಲಿ, ಡಿ.19ರ ಒಳಗೆ ತನ್ನೆದುರು ಹಾಜರಾಗಿ ವೈಯಕ್ತಿಕ ಹಿನ್ನೆಲೆ, ಕಾಂಗ್ರೆಸ್ ಪಕ್ಷದೊಂದಿಗಿನ ಒಡನಾಟ, ಅವರು ಅಥವಾ ಅವರಿಗೆ ಸೇರಿದ ಸಂಸ್ಥೆಗಳಿಂದ ಯಂಗ್ ಇಂಡಿಯಾಗೆ ವರ್ಗಾವಣೆಯಾದ ಹಣದ ಬಗ್ಗೆ ಮಾಹಿತಿ ನೀಡಲು ನಿರ್ದೇಶಿಸಲಾಗಿದೆ. ಜತೆಗೆ, ಆ ವ್ಯವಹಾರಕ್ಕೆ ಸಂಬಂಧಿಸಿದ ಆದಾಯ ತೆರಿಗೆ ದಾಖಲೆ, ಹಣಕಾಸು ಹೇಳಿಕೆ ಮತ್ತು ದೇಣಿಗೆಯ ಪ್ರಮಾಣಪತ್ರಗಳನ್ನೂ ಸಲ್ಲಿಸುವಂತೆ ಸೂಚಿಸಿದೆ .

09:29 AM (IST) Dec 06
Chikkamagaluru Congress leader murder: ಚಿಕ್ಕಮಗಳೂರು ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಬಜರಂಗದಳದ ಕಾರ್ಯಕರ್ತರ ಮೇಲೆ ಶಂಕೆ ವ್ಯಕ್ತವಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ನಾಲ್ಕು ವಿಶೇಷ ತಂಡ ರಚಿಸಿ ತನಿಖೆ ನಡೆಸುತ್ತಿದ್ದಾರೆ.
08:47 AM (IST) Dec 06
Belagavi MES Protest: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ, ಎಂಇಎಸ್ ಆಯೋಜಿಸುವ ಮಹಾಮೇಳಾವ್‌ಗೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಈ ನಿರ್ಧಾರದಿಂದ ಕೆರಳಿರುವ ಮಹಾರಾಷ್ಟ್ರದ ಶಿವಸೇನೆ (ಠಾಕ್ರೆ ಬಣ) ಕಾರ್ಯಕರ್ತರು, ಕರ್ನಾಟಕ ಸರ್ಕಾರಕ್ಕೆ ಗೊಡ್ಡು ಬೆದರಿಕೆ ಹಾಕಿದ್ದಾರೆ.
08:13 AM (IST) Dec 06
Actress Jaya Bachchan News: ಅಮಿತಾಭ್ ಬಚ್ಚನ್ ಪತ್ನಿಯೂ ಆಗಿರುವ ನಟಿ ಜಯಾ ಬಚ್ಚನ್ ಅವರು ಪಾಪರಾಜಿಗಳ ಬಗ್ಗೆ ಮಾತನಾಡಿದ್ದಾರೆ. ಪಾಪರಾಜಿಗಳ ಸಂಸ್ಕೃತಿ ಬಗ್ಗೆ ಅವರು ಪ್ರಶ್ನೆ ಮಾಡಿದ್ದಾರೆ. ಇದನ್ನು ಫೋಟೋಗ್ರಾಫರ್ಸ್ ಖಂಡಿಸಿದ್ದು, ಬ್ಯಾನ್ ಮಾಡುವ ಆಲೋಚನೆ ಹೊಂದಿದ್ದಾರೆ.
08:11 AM (IST) Dec 06
2026ರಲ್ಲಿ ನಡೆಯಲಿರುವ ಫಿಫಾ ವಿಶ್ವಕಪ್‌ನ ವೇಳಾಪಟ್ಟಿ ಪ್ರಕಟಗೊಂಡಿದ್ದು, ಡ್ರಾ ಮೂಲಕ ತಂಡಗಳನ್ನು ವಿವಿಧ ಗುಂಪುಗಳಾಗಿ ವಿಂಗಡಿಸಲಾಗಿದೆ. ಅರ್ಜೆಂಟೀನಾ 'ಜೆ' ಗುಂಪಿನಲ್ಲಿ ಮತ್ತು ಬ್ರೆಜಿಲ್ 'ಸಿ' ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ 48 ತಂಡಗಳು ಟೂರ್ನಿಯಲ್ಲಿ ಭಾಗವಹಿಸುತ್ತಿವೆ.
07:57 AM (IST) Dec 06
ರಾಯಚೂರಿನ ಉಡಮಗಲ್-ಖಾನಾಪುರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ವಾರ್ಡನ್ ಮತ್ತು ಸಿಬ್ಬಂದಿ ಮಕ್ಕಳ ಮೇಲೆ ದೈಹಿಕ ಹಲ್ಲೆ ನಡೆಸುತ್ತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಮಕ್ಕಳು ಭಯದಲ್ಲಿ ದಿನ ಕಳೆಯುತ್ತಿದ್ದಾರೆ. ಆದರೆ, ವಾರ್ಡನ್ ಈ ಎಲ್ಲಾ ಆರೋಪ ಸುಳ್ಳು ಎಂದು ತಳ್ಳಿಹಾಕಿದ್ದಾರೆ.
07:38 AM (IST) Dec 06
ಕನ್ನಡ ಕಿರುತೆರೆಗೆ ಇನ್ನೊಂದು ಸೀರಿಯಲ್ ಸೇರ್ಪಡೆ ಆಗಲಿದೆ. ರಜನೀಶ್, ಆಶಾ ಅಯ್ಯನರ್ ನಟನೆಯ ಆದಿ ಲಕ್ಷ್ಮೀ ಪುರಾಣ ಧಾರಾವಾಹಿ ಪ್ರಸಾರ ಆಗಲಿದೆ. ಈ ಧಾರಾವಾಹಿ ತಂಡದಲ್ಲಿ ದೊಡ್ಡ ತಾರಾ ಬಳಗವೇ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.