Temple Development: ಕರ್ನಾಟಕದ  ದೇಗುಲ ಅಭಿವೃದ್ಧಿಗೆ ‘ದೈವ ಸಂಕಲ್ಪ’ ಯೋಜನೆ, ಏನು ವಿಶೇಷ?

By Kannadaprabha News  |  First Published Feb 5, 2022, 3:05 AM IST

* ದೇಗುಲ ಅಭಿವೃದ್ಧಿಗೆ ‘ದೈವ ಸಂಕಲ್ಪ’ ಯೋಜನೆ

* 25 ಪ್ರಮುಖ ದೇಗುಲ ಸಮಗ್ರ ಅಭಿವೃದ್ಧಿಗೆ ಶೀಘ್ರ ಚಾಲನೆ: ಸಚಿವೆ ಶಶಿಕಲಾ ಜೊಲ್ಲೆ

* ಯಾತ್ರಿಗಳಿಗೆ ಪ್ರೋತ್ಸಾಹಧನ


ಬೆಂಗಳೂರು(ಫೆ. 05)  ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಯ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ರಾಜ್ಯದ 25 ಪ್ರಮುಖ ದೇವಾಲಯಗಳ (Temple) ಸಮಗ್ರ ಅಭಿವೃದ್ಧಿಗೆ ‘ದೈವ ಸಂಕಲ್ಪ’ ಎಂಬ ನೂತನ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ(Shashikala Annasaheb Jolle)  ತಿಳಿಸಿದ್ದಾರೆ.

ಶುಕ್ರವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ಹೆಚ್ಚು ಭಕ್ತರು ಭೇಟಿ ನೀಡುವ ಎ ದರ್ಜೆಯ 25 ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌ ರೂಪಿಸುವ ಯೋಜನೆ ಇದಾಗಿದೆ ಎಂದು ಹೇಳಿದರು.

Tap to resize

Latest Videos

ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಅಭಿವೃದ್ಧಿಗೊಳಿಸುವುದು ಮಹತ್ವದ ಕನಸಾಗಿದ್ದು, ಯೋಜನೆಯ ಮೊದಲ ಹಂತದ ಅಂದಾಜು ವೆಚ್ಚ 1140 ಕೋಟಿ ರು. ಆಗಿದೆ. ಇನ್ನು, ಕಡಿಮೆ ಆದಾಯ ಇರುವ ಸಿ ದರ್ಜೆಯ ದೇವಾಲಯಗಳ ಅಭಿವೃದ್ಧಿ ಸರಿಯಾಗಿ ಆಗುತ್ತಿಲ್ಲ ಎಂಬ ದೂರುಗಳಿವೆ. ರಾಜ್ಯದಲ್ಲಿ 34,217 ಸಿ ದರ್ಜೆಯ ದೇವಾಲಯಗಳಿದ್ದು, ಪ್ರತಿವರ್ಷ ಅಭಿವೃದ್ಧಿಗೆ ಅನುದಾನ ನೀಡಲಾಗುತ್ತಿದೆ. ಆದರೂ ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

Vijayanagara: ಹೆಣ್ಣು ಒಲಿದರೆ ನಾರಿ, ಮುನಿದರೆ ಮಾರಿ: ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ಕೊಟ್ಟ ಜೊಲ್ಲೆ

ದೇವಾಲಯಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ 119 ಕೋಟಿ ರು. ಅನುದಾನ ನೀಡಲಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ದೇವಾಲಯಗಳ ಅಭಿವೃದ್ಧಿಗೆ 168 ಕೋಟಿ ರು. ವಿಶೇಷ ಅನುದಾನ ನೀಡಿದ್ದಾರೆ. ಒಟ್ಟು ಈವರೆಗೆ 287 ಕೋಟಿ ರು. ಅನುದಾನ ನೀಡಲಾಗಿದೆ. ಅಲ್ಲದೇ, ದೇಶದ ವಿವಿಧ ಭಾಗದಲ್ಲಿನ 12 ಜ್ಯೋತಿರ್ಲಿಂಗ ಮತ್ತು ಅಷ್ಟವಿನಾಯಕ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುವುದು ಬಹಳ ಪುಣ್ಯವಾದ ಕೆಲಸ ಎನ್ನುವುದು ಹಿಂದುಗಳ ನಂಬಿಕೆ. ಈ ನಿಟ್ಟಿನಲ್ಲಿ ಕೈಲಾಸ ಮಾನಸ ಸರೋವರ ಮತ್ತು ಚಾರ್‌ಧಾಮ್‌ ಯಾತ್ರೆಗೆ ಪ್ರೋತ್ಸಾಹ ಧನ ನೀಡುವಂತೆ ಇವುಗಳಿಗೂ ಪ್ರೋತ್ಸಾಹ ಧನ ನೀಡುವ ಯೋಜನೆಯನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದ್ದು, ಈ ಬಗ್ಗೆ ಪ್ರಸ್ತಾವನೆ ಸಿದ್ಧವಾಗಿದೆ ಎಂದು ವಿವರಿಸಿದರು.

ಶ್ರೀಶೈಲದಲ್ಲಿ ಕರ್ನಾಟಕ ಛತ್ರ ನಿರ್ಮಾಣ: ರಾಜ್ಯದಿಂದ ಬಹುಸಂಖ್ಯೆಯಲ್ಲಿ ಭಕ್ತರು ತೆರಳುವ ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಮುಜರಾಯಿ ಇಲಾಖೆ ಒಡೆತನದಲ್ಲಿನ ಭೂಮಿಯಲ್ಲಿ ರಾಜ್ಯದ ಛತ್ರ ನಿರ್ಮಿಸಲು 85 ಕೋಟಿ ರು. ವಿಶೇಷ ಅನುದಾನವನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. 45 ಕೋಟಿ ರು. ವೆಚ್ಚದಲ್ಲಿ ಮೊದಲ ಹಂತದ ಯೋಜನೆಯನ್ನು ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿಗಳು ಹೇಳಿದ್ದಾರೆ. ಅಂತೆಯೇ ಆಯೋಧ್ಯೆಯಲ್ಲಿ ರಾಜ್ಯದ ಛತ್ರವನ್ನು ನಿರ್ಮಿಸಬೇಕು ಎನ್ನುವ ನಿಟ್ಟಿನಲ್ಲಿ ಈಗಾಗಲೇ ಪತ್ರ ವ್ಯವಹಾರ ನಡೆಸಲಾಗಿದೆ ಎಂದರು.

ತಸ್ತೀಕ್‌ ಹೆಚ್ಚಳಕ್ಕೆ ಪ್ರಸ್ತಾವ: ರಾಜ್ಯದಲ್ಲಿನ ಸಿ ದರ್ಜೆಯ ದೇವಾಲಯಗಳಿಗೆ ವಾರ್ಷಿಕವಾಗಿ 48 ಸಾವಿರ ರು. ತಸ್ತೀಕ್‌ ಹಣವನ್ನು ನೀಡಲಾಗುತ್ತಿದೆ. ಹೆಚ್ಚಿನ ಆದಾಯವಿಲ್ಲದ ದೇವಸ್ಥಾನಗಳ ಅರ್ಚಕರು ಮತ್ತು ಮೊಕ್ತೇಸರರು ಹಣವನ್ನು ಹೆಚ್ಚು ಮಾಡುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ತಸ್ತೀಕ್‌ ಹಣವನ್ನು ಹೆಚ್ಚಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ  ಎಂದು ಜೊಲ್ಲೆ  ತಿಳಿಸಿದ್ದಾರೆ.

 

click me!