Karnataka Politics : ಜೆಡಿಎಸ್‌ಗೆ ಗುಬ್ಬಿ ಶಾಸಕ ರಾಜಿನಾಮೆ!

By Kannadaprabha News  |  First Published Mar 27, 2023, 7:28 AM IST

ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌. ಆರ್‌. ಶ್ರೀನಿವಾಸ್‌ ಅವರು ಮಾಚ… 27ರ ಸೋಮವಾರದಂದು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ.


 ತುಮಕೂರು :  ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌. ಆರ್‌. ಶ್ರೀನಿವಾಸ್‌ ಅವರು ಮಾಚ… 27ರ ಸೋಮವಾರದಂದು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ.

ಸೋಮವಾರ ಬೆಂಗಳೂರಿಗೆ ತೆರಳಿ ಸ್ಪೀಕರ್‌ಗೆ ರಾಜಿನಾಮ ಪತ್ರವನ್ನು ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್‌ನಿಂದ ಟಿಕೆಚ್‌ ಸಿಗುವುದು ಖಚಿತವಾಗಿರುವ ಹಿನ್ನೆಲೆಯಲ್ಲಿ ಗುಬ್ಬಿ ಕ್ಷೇತ್ರದಿಂದಲೇ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.ಕಳೆದ ಹಲವಾರು ತಿಂಗಳಿನಿಂದ ಜೆಡಿಎಸ್‌ ಜೊತೆಗೆ ಅಂತರ ಕಾಯ್ದುಕೊಂಡಿದ್ದರು. ಅಲ್ಲದೇ ಈಗಾಗಲೇ ಜೆಡಿಎಸ್‌ ಗುಬ್ಬಿಗೆ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ.

Tap to resize

Latest Videos

ಭಾರತ ಜೋಡೋ ಯಾತ್ರೆ ಸಂದರ್ಭದಲ್ಲಿ ಗುಬ್ಬಿ ವಿಧಾನಸಭಾ ಕ್ಷೇತ್ರದ ಮೂಲಕ ರಾಹುಲ್‌ ಗಾಂಧಿ ಹೋದಾಗ ಅವರನ್ನು ಶ್ರೀನಿವಾಸ್‌ ಸ್ವಾಗತಿಸಿದ್ದರು. ಇದು ಚರ್ಚೆಗೆ ಗ್ರಾಸವಾಗಿದ್ದನ್ನು ಸ್ಮರಿಸಬಹುದು.

ಕಾಂಗ್ರೆಸ್ ಯುವನಿಧಿ

ಬೆಳಗಾವಿ (ಮಾ.20):  ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್ಲ ನಿರುದ್ಯೋಗಿಗಳಿಗೆ 3 ಸಾವಿರ ರೂ. ನಿರುದ್ಯೋಗ ಭತ್ಯೆ ನೀಡಲಾಗುವುದು ಎಂದು ಕಾಂಗ್ರೆಸ್‌ 4ನೇ ಗ್ಯಾರಂಟಿಯನ್ನು ರಾಹುಲ್‌ಗಾಂಧಿ ಘೋಷಣೆ ಮಾಡಿದರು.

ಬೆಳಗಾವಿಯಲ್ಲಿ ನಡೆಯುತ್ತಿರುವ ಯುವಕ್ರಾಂತಿ ಸಮಾವೇಶದಲ್ಲಿ ಕಾಂಗ್ರೆಸ್‌ 4ನೇ ಗ್ಯಾರಂಟಿ ಕಾರ್ಡ್‌ ಹಿಡಿದುಕೊಂಡು ಪ್ರದರ್ಶನ ಮಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ 4ನೇ ಗ್ಯಾರಂಟಿ 'ಯುವನಿಧಿ' ಕಾರ್ಯಕ್ರಮ ಘೋಷಣೆ ಮಾಡಲಾಯಿತು. ನಿರುದ್ಯೋಗ ಯುವಕ, ಯುವತಿಯರಿಗೆ ಮಾಸಿಕ ನಿರುದ್ಯೋಗ ಭತ್ಯೆ ನೀಡಲಾಗುವುದು. ಡಿಪ್ಲೋಮಾ ಆದವರಿಗೆ 1500 ರೂ., ಪದವೀಧರರಿಗೆ 3000 ರೂ. ನಿರುದ್ಯೋಗ ಭತ್ಯೆ ಕೊಡಲಾಗುವುದು. ಕಾಂಗ್ರೆಸ್ ಪಕ್ಷದಿಂದ ನಾಲ್ಕನೇ ಗ್ಯಾರಂಟಿ ಘೋಷಣೆ ಮೂಲಕ ಯುವಕರನ್ನು ಸೆಳೆಯಲಾಗಿದೆ. ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರಿಂದ ನಾಲ್ಕನೇ ಗ್ಯಾರಂಟಿ ಅನಾವರಣ ಮಾಡಿದರು.

ರಾಜ್ಯ ರಾಜಕಾರಣಕ್ಕೆ ರಮ್ಯಾ ರೀ ಎಂಟ್ರಿ: ಎರಡು ಕ್ಷೇತ್ರದಲ್ಲಿ ಸ್ಪರ್ಧೆ ನಿರೀಕ್ಷಿತ

ಹಿಂದಿನ ಮೂರು ಗ್ಯಾರಂಟಿಗಳು: ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್‌ ಮೊದಲನೇ ಗ್ಯಾರಂಟಿ ಆಗಿ ಗೃಹ ಜ್ಯೋತಿ ಕಾರ್ಯಕ್ರಮದಡಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವುದು. 2ನೇ ಗ್ಯಾರಂಟಿಯಾಗಿ ಎಲ್ಲ ಮಹಿಳೆಯರಿಗೆ ಗೃಹಲಕ್ಷ್ಮೀ ಕಾರ್ಯಕ್ರಮದಡಿ 2 ಸಾವಿರ ರೂ. ಮಾಸಿಕ ಸಹಾಯಧನ ನೀಡುವುದು. 3ನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್‌ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನಿಡಲಾಗುತ್ತದೆ. ಈಗ ಕಾಂಗ್ರೆಸ್‌ 4ನೇ ಗ್ಯಾರಂಟಿಯಾಗಿ ನಿರುದ್ಯೋಗಿ ಯುವಜನರಿಗೆ 3 ಸಾವಿರ ರೂ. ನಿರುದ್ಯೋಗ ಭತ್ಯೆ ನೀಡುವುದಾಗಿ ಘೋಷಣೆ ಮಾಡಿದೆ.

ಎಲ್ಲ ವರ್ಗದವರ ರಕ್ಷಣೆಯೇ ಕಾಂಗ್ರೆಸ್‌ ಗುರಿ: ಬೆಳಗಾವಿಯ ಯುವಕ್ರಾಂತಿ ಸಮಾವೇಶದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಮಹಾತ್ಮಗಾಂಧಿ ಕಾಂಗ್ರೆಸ್ ಅಧ್ಯಕ್ಷರಾದ ಪುಣ್ಯ ಭೂಮಿಯಿಂದ ಸಮಾವೇಶ ಆರಂಭಿಸಲಾಗಿದೆ. ಕಾಂಗ್ರೆಸ್ ಶಕ್ತಿ, ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ -ಈ ದೇಶದ ಇತಿಹಾಸವಾಗಿದೆ. ಎಲ್ಲ ವರ್ಗದ ಜನರ ರಕ್ಷಣೆ ಮಾಡಬೇಕಿರೋದು ನಮ್ಮ ನಿಮ್ಮೆಲ್ಲರ ಕರ್ತವ್ಯ. ಯುವಕರಿಗೆ ರಕ್ಷಣೆ ನೀಡಲು ಇಂದು ರಾಹುಲ್ ಗಾಂಧಿ ಇಲ್ಲಿ ಬಂದಿದ್ದಾರೆ ಎಂದರು. 

ನಾನು ಸಾವರ್ಕರ್‌ ಅಲ್ಲ ರಾಹುಲ್‌: ಪೊಲೀಸ್‌ ನೋಟಿಸ್‌ಗೆ ರಾಗಾ ಗರಂ

click me!