ಸಿದ್ದರಾಮಯ್ಯ ರಾಜಕಾರಣ ಮಾಡುತ್ತಿದ್ದಾರೆ. ರೈತರ ಹಿತರಕ್ಷಣೆ ಸಂಪೂರ್ಣವಾಗಿ ಮರೆತಿದ್ದಾರೆ. ಎರಡು ಬಾರಿ ಮುಖ್ಯಮಂತ್ರಿಯಾದರೂ ಸಿದ್ದರಾಮಯ್ಯ ಅವರಿಗೆ ಆಡಳಿತ ನಡೆಸಲು ಬರುತ್ತಿಲ್ಲ ಎಂದು ದೂರಿದ ನಳಿನ್ ಕುಮಾರ್ ಕಟೀಲ್
ವಿಜಯಪುರ(ನ.05): ಸಿದ್ದರಾಮಯ್ಯ ರಾಜಕಾರಣ ಮಾಡುತ್ತಿದ್ದಾರೆ. ರೈತರ ಹಿತ ರಕ್ಷಣೆ ಮಾಡುತ್ತಿಲ್ಲ. ಕುರ್ಚಿ ಹಿತ ರಕ್ಷಣೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.
ತಿಕೋಟಾ ತಾಲೂಕಿನ ಜಾಲಗೇರಿ ಗ್ರಾಮದಲ್ಲಿ ಬರ ಅಧ್ಯಯನ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ರಾಜಕಾರಣ ಮಾಡುತ್ತಿದ್ದಾರೆ. ರೈತರ ಹಿತರಕ್ಷಣೆ ಸಂಪೂರ್ಣವಾಗಿ ಮರೆತಿದ್ದಾರೆ. ಎರಡು ಬಾರಿ ಮುಖ್ಯಮಂತ್ರಿಯಾದರೂ ಸಿದ್ದರಾಮಯ್ಯ ಅವರಿಗೆ ಆಡಳಿತ ನಡೆಸಲು ಬರುತ್ತಿಲ್ಲ ಎಂದು ದೂರಿದರು.
ಬರದ ವಿಷಯದಲ್ಲಿ ಕೇಂದ್ರ ಸರ್ಕಾರ ರಾಜಕಾರಣ ಮಾಡಿಲ್ಲ: ನಳಿನ್ ಕುಮಾರ ಕಟೀಲ್
ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅತಿವೃಷ್ಟಿ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಪರಿಹಾರ ಹಣಕ್ಕೆ ಕಾಯದೇ, ಎನ್‌ಡಿಆರ್‌ಎಫ್ ಮಾರ್ಗಸೂಚಿ ಮೀರಿ ತಕ್ಷಣ ಸಂತ್ರಸ್ತ ರೈತರಿಗೆ ಪರಿಹಾರ ಕೊಟ್ಟಿದ್ದರು. ಕೂಡಲೇ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದ ಅವರು, ಸಚಿವರು ಇದುವರೆಗೂ ರೈತರ ಅಹವಾಲು ಆಲಿಸಿಲ್ಲ. ಬರದಿಂದ ಇದುವರೆಗೆ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ನೀಡಿಲ್ಲ ಎಂದರು.