ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ ನೋಂದಣಿ ಆರಂಭ

By Kannadaprabha NewsFirst Published Dec 30, 2023, 10:19 AM IST
Highlights

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ದೇಶದಲ್ಲಿಯೇ ಮೊದಲ ಬಾರಿಗೆ ಜಾರಿಯಾಗಿದ್ದು, ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು. ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ / ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯವಾಗುತ್ತದೆ. ಯೋಜನೆಯು ಸಂಪೂರ್ಣ ಉಚಿತ, ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆ ಇರುವುದಿಲ್ಲ.

  ಮೈಸೂರು :  ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ದೇಶದಲ್ಲಿಯೇ ಮೊದಲ ಬಾರಿಗೆ ಜಾರಿಯಾಗಿದ್ದು, ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು. ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ / ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯವಾಗುತ್ತದೆ. ಯೋಜನೆಯು ಸಂಪೂರ್ಣ ಉಚಿತ, ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆ ಇರುವುದಿಲ್ಲ.

ಸ್ವಿಗ್ಗಿ, ಜೊಮಾಟೋಗಳಂತಹ ಸಂಸ್ಥೆಗಳಲ್ಲಿ ಫುಡ್‌ ಡೆಲಿವರಿ ಮಾಡುವ ಹಾಗೂ ಸಂಸ್ಥೆಗಳಾದ ಅಮೆಜಾನ್, ಪ್ಲಿಫ್ಕಾರ್ಟ್, ಬಿಗ್ಬಾಸ್ಕೆಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಟೋ, ಬಿಗ್ ಬಾಸ್ಕೆಟ್, ಡಾಮಿನೋಜ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿಕೊಂಡ ಎಲ್ಲಾ ಅಸಂಘಟಿತ ಗಿಗ್ ಕಾರ್ಮಿಕರು ಈ ಯೋಜನೆ ನೋಂದಣಿಗೆ ಅರ್ಹ ಕಾರ್ಮಿಕರಾಗಿತ್ತಾರೆ.

Latest Videos

ಅಪಘಾತದಿಂದ ಮರಣ ಹೊಂದಿದಲ್ಲಿ ಪರಿಹಾರ 2 ಲಕ್ಷ ಹಾಗೂ ಜೀವ ವಿಮೆ 2 ಲಕ್ಷ ಸೇರಿ ಒಟ್ಟು 4 ಲಕ್ಷ, ಅಪಘಾದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ .2 ಲಕ್ಷಗಳವರೆಗೆ, ಆಸ್ಪತ್ರೆ ವೆಚ್ಚ ಮರುಪಾವತಿ 1.00 ಲಕ್ಷದವರೆಗೆ (ಅಪಘಾತ ಪ್ರಕರಣಗಳಿಗೆ ಮಾತ್ರ), ಜೀವ ವಿಮಾ 2 ಲಕ್ಷ ಸೌಲಭ್ಯ ದೊರೆಯುತ್ತದೆ.

ನೋಂದಣಿಗೆ ಅರ್ಹತೆ: 18 ರಿಂದ 60 ವಯೋಮಾನದವರು. ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಭವಿಷ್ಯನಿಧಿ ಹಾಗೂ ಇ.ಎಸ್.ಐ ಫಲಾನುಭವಿಯಾಗಿರಬಾರದು. ಕರ್ನಾಟಕದಲ್ಲಿ ಗಿಗ್ ವೃತ್ತಿ (ಡೆಲಿವರಿ ಕಾರ್ಯ) ನಿರ್ವಹಿಸುತ್ತಿರುವವರು ಮಾತ್ರ ನೋಂದಾಯಿಸಿಕೊಳ್ಳಬಹುದು.

ಅವಶ್ಯಕ ದಾಖಲೆಗಳು:-ಆಧಾರ್ ಸಂಖ್ಯೆ, ವೃತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳು ವಿತರಿಸಿದ ಗುರುತಿನ ಚೀಟಿ, ಇ-ಶ್ರಮ್ ನೋಂದಣಿ ಸಂಖ್ಯೆ (ಇಲ್ಲವಾದಲ್ಲಿ www.eshram.gov.in ಅಲ್ಲಿ ನೋಂದಾಯಿಸಿ ಪಡೆದುಕೊಳ್ಳುವುದು).

ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214 (24*7), ಕಾರ್ಮಿಕ ಇಲಾಖೆ, ಕಾರ್ಮಿಕ ಅಧಿಕಾರಿಗಳು ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು/ ಕಾರ್ಮಿಕ ನಿರೀಕ್ಷಕರ ಕಛೇರಿಗಳನ್ನು ಸಂಪರ್ಕಿಸಬಹುದು ಎಂದು ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

click me!