ಹುಬ್ಬಳ್ಳಿಯಲ್ಲಿ ಕಾಲೇಜು ಯುವತಿ ನೇಹಾ ಕೊಲೆ ಪ್ರಕರಣದ ಬೆನ್ನಲ್ಲಿಯೇ ರಾಜ್ಯದಲ್ಲಿ ಎಲ್ಲ ಮಹಿಳೆಯರಿಗೆ ಆತ್ಮರಕ್ಷಣೆ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಮಹಿಳೆಯರು ಕಿರುಗತ್ತಿ, ಚಾಕು ಹೊಂದಲು ಅನುಮತಿ ಕೊಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.
ದಕ್ಷಿಣ ಕನ್ನಡ (ಏ.20): ಹುಬ್ಬಳ್ಳಿಯಲ್ಲಿ ಕಾಲೇಜು ಯುವತಿ ನೇಹಾ ಕೊಲೆ ಪ್ರಕರಣದ ಬೆನ್ನಲ್ಲಿಯೇ ರಾಜ್ಯದಲ್ಲಿ ಎಲ್ಲ ಮಹಿಳೆಯರಿಗೆ ಆತ್ಮರಕ್ಷಣೆ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಮಹಿಳೆಯರು ಕಿರುಗತ್ತಿ, ಚಾಕು ಹೊಂದಲು ಅನುಮತಿ ಕೊಡಬೇಕು ಎಂದು ವಿಶ್ವ ಹಿಂದೂ ಪರಿಷತ್‌ನ (ವಿಹಿಂಪ) ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಆಗ್ರಹ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಪ್ರಕರಣದ ಸಂಬಂಧಿಸಿದಂತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಹೆಣ್ಮಕ್ಕಳಿಗೆ ಆತ್ಮರಕ್ಷಣೆಗಾಗಿ ಕಿರುಕತ್ತಿ ಹಿಡಿದುಕೊಳ್ಳಲು ಅವಕಾಶ ಕೊಡಬೇಕೆಂಬ ಒತ್ತಾಯ ಮಾಡಿದರು. ಈ ಕುರಿತು ಸರ್ಕಾರಕ್ಕೆ ವಿಶ್ವ ಹಿಂದೂ ಪರಿಷತ್, ಭಜರಂಗದಳದಿಂದ ಮನವಿ ಸಲ್ಲಿಕೆ ಮಾಡಲಾಗುವುದು. ನಮ್ಮ ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆಯ ಅವಶ್ಯಕತೆ ಹೆಚ್ಚಾಗುದೆ. ಪಂಜಾಬ್ ನಲ್ಲಿ ಸಿಖ್ ಮಹಿಳೆಯರಿಗೆ ತಮ್ಮ ರಕ್ಷಣೆಗೆ ಕಿರುಕತ್ತಿ ಹಿಡಿದುಕೊಳ್ಳಲು ಅವಕಾಶವಿದೆ. ಅದೇ ರೀತಿ ಕರ್ನಾಟಕದಲ್ಲಿಯೂ ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆಗಾಗಿ ಕಿರುಗತ್ತಿ ಹಿಡಿದುಕೊಳ್ಳಲು ಸರ್ಕಾರ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹಂತಕ ಫಯಾಜ್ ಮತ್ತೊಂದು ಕರಾಳ ಮುಖ ಅನಾವರಣ
ರಾಜ್ಯದಲ್ಲಿ ಕಿರುಕತ್ತಿ ಬಳಕೆ ಬಗ್ಗೆ ಮಹಿಳೆಯರಿಗೆ ತರಬೇತಿ ಶಿಬಿರ ಆಯೋಜಿಸಲು ರಾಜ್ಯ ಸರ್ಕಾರ ವ್ಯವಸ್ಥೆ ಮಾಡಬೇಕು. ನೇಹಾ ಎಂಬ ಯುವತಿಯನ್ನು ಇಸ್ಲಾಮಿಕ್ ಭಯೋತ್ಪಾದಕ ಫಯಾಜ್ ಬರ್ಬರ ಹತ್ಯೆ ಮಾಡಿದ್ದಾನೆ. ಈ ಘಟನೆಯನ್ನು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ. ಹುಡುಗಿಯ ತಂದೆ ಇದೊಂದು ಲವ್ ಜಿಹಾದ್ ಕೃತ್ಯ ಎಂದಿದ್ದಾರೆ. ನಾವು ಇದನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಇದರ ಹಿಂದೆ ಮುಸ್ಲಿಂ ಸಂಘಟನೆಗಳ ಕೈವಾಡವಿರಬಹುದು. ರಾಷ್ಟ್ರೀಯ ತನಿಖಾ ಆಯೋಗದಿಂದ (NIA) ಈ ಪ್ರಕರಣದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ನನ್ನ ಮಗ ಮಾಡಿದ ತಪ್ಪಿಗೆ ಕ್ಷಮೆಯಾಚಿಸುವೆ, ಯಾವ ಮಕ್ಕಳು ತಪ್ಪು ಮಾಡಿದ್ರೂ ತಪ್ಪೇ: ಫಯಾಜ್ ತಾಯಿ ಮಮ್ತಾಜ್
ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕರ್ನಾಟಕದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ, ಹಲ್ಲೆ ನಡೆಯುತ್ತಿದೆ. ಸರ್ಕಾರದ ಮುಸ್ಲಿಂ ತುಷ್ಟೀಕರಣದ ನೀತಿಯನ್ನು ಬಲವಾಗಿ ಖಂಡಿಸುತ್ತಿದ್ದೇವೆ. ಹಿಂದೂಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು, ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸುತ್ತಿದ್ದೇವೆ ಎಂದು ಮಂಗಳೂರಿನಲ್ಲಿ ವಿಹೆಚ್‌ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ ಹೇಳಿದರು.