ಮುಂದುವರೆದ ವರ್ಗಾವಣೆ: ಸಿಎಂ ತವರಿಗೆ ಹೊಸ ಜಿಲ್ಲಾಧಿಕಾರಿ!

Published : Aug 07, 2019, 11:57 AM IST
ಮುಂದುವರೆದ ವರ್ಗಾವಣೆ: ಸಿಎಂ ತವರಿಗೆ ಹೊಸ ಜಿಲ್ಲಾಧಿಕಾರಿ!

ಸಾರಾಂಶ

ಮುಖ್ಯಮಂತ್ರಿಗಳ ತವರು ಜಿಲ್ಲೆಯ ಜಿಲ್ಲಾಧಿಕಾರಿ ಸೇರಿದಂತೆ ಮೂರು ಮಂದಿ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ| ಸಿಎಂ ತವರಿಗೆ ಹೊಸ ಜಿಲ್ಲಾಧಿಕಾರಿ ನೇಮಕ

ಶಿವಮೊಗ್ಗ[ಆ.07]: ರಾಜ್ಯ ಸರ್ಕಾರದಲ್ಲಿ ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದ್ದು, ಮುಖ್ಯಮಂತ್ರಿಗಳ ತವರು ಜಿಲ್ಲೆಯ ಜಿಲ್ಲಾಧಿಕಾರಿ ಸೇರಿದಂತೆ ಮೂರು ಮಂದಿ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರನ್ನು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯದ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಇದರಿಂದ ತೆರವಾದ ಶಿವಮೊಗ್ಗ ಜಿಲ್ಲಾಧಿಕಾರಿ ಹುದ್ದೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ಸೇವೆಗಳು) ಜಂಟಿ ಕಾರ್ಯದರ್ಶಿ ಕೆ.ಬಿ. ಶಿವಕುಮಾರ್‌ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

ಉಳಿದಂತೆ ರಾಮನಗರ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಎಂ.ಪಿ. ಮುಲ್ಲೈ ಮುಹಿಲನ್‌ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವೆಗಳು) ಸರ್ಕಾರದ ಉಪ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

PREV
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC