ಶಿವಮೊಗ್ಗದಲ್ಲಿ ಮತ್ತೆ ಮೂವರಿಗೆ ಮಂಗನ ಕಾಯಿಲೆ

By Kannadaprabha NewsFirst Published Feb 13, 2020, 11:11 AM IST
Highlights

ದಿನ ಕಳೆದಂತೆ ಮಂಗನಕಾಯಿಲೆ (ಕೆಎಫ್‌ಡಿ) ಸೋಂಕು ಉಲ್ಬಣಿಸುತ್ತಿದ್ದು, ತೀರ್ಥಹಳ್ಳಿ ತಾಲೂಕಿನಲ್ಲಿ ಮತ್ತೆ ಮೂವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ತೀರ್ಥಹಳ್ಳಿ ತಾಲೂಕೊಂದರಲ್ಲೇ ಇದುವರೆಗೂ 28 ಮಂದಿಯಲ್ಲಿ ಸೋಂಕು ಪತ್ತೆಯಾದಂತಾಗಿದೆ.

ಶಿವಮೊಗ್ಗ(ಫೆ.13): ದಿನ ಕಳೆದಂತೆ ಮಂಗನಕಾಯಿಲೆ (ಕೆಎಫ್‌ಡಿ) ಸೋಂಕು ಉಲ್ಬಣಿಸುತ್ತಿದ್ದು, ತೀರ್ಥಹಳ್ಳಿ ತಾಲೂಕಿನಲ್ಲಿ ಮತ್ತೆ ಮೂವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ತೀರ್ಥಹಳ್ಳಿ ತಾಲೂಕೊಂದರಲ್ಲೇ ಇದುವರೆಗೂ 28 ಮಂದಿಯಲ್ಲಿ ಸೋಂಕು ಪತ್ತೆಯಾದಂತಾಗಿದೆ.

ತೀರ್ಥಹಳ್ಳಿ ತಾಲೂಕಿನ ಬೆಟ್ಟಬಸವಾನಿ ಸಮೀಪದ ಸವಿತಾ (32), ಕನ್ನಂಗಿಯ ರಮೇಶ್‌ (40) ಮತ್ತು ಕಣಬೂರಿನ ಬಿಂದು (18) ಎಂಬುವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸವಿತಾ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದರೆ, ರಮೇಶ್‌ ಮತ್ತು ಬಿಂದು ತೀರ್ಥಹಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Latest Videos

ತಾಲೂಕಿನಲ್ಲಿ ತೀವ್ರ ಜ್ವರದಿಂದ ಬಳಲುತ್ತಿದ್ದ ಹಲವರ ರಕ್ತದ ಮಾದರಿಯನ್ನು ಶಿವಮೊಗ್ಗದ ಕೆಎಫ್‌ಡಿ ವೈರಾಣು ರಕ್ತ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಇದರಲ್ಲಿ ಈ ಮೂವರ ರಕ್ತದ ಮಾದರಿಯಲ್ಲಿ ವೈರಾಣು ಪತ್ತೆಯಾಗಿದೆ.

ಕಾಫಿನಾಡಿಗೂ ಲಗ್ಗೆ ಇಟ್ಟ ಮಂಗನ ಕಾಯಿಲೆ : ಪಾಸಿಟಿವ್ ಪತ್ತೆ !

ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ವ್ಯಾಪ್ತಿಯ ಗಾಂಧಿನಗರದಲ್ಲಿ ಮಂಗವೊಂದು ಮೃತಪಟ್ಟಿರುವ ಘಟನೆ ನಡೆದಿದ್ದು, ಗ್ರಾಮಸ್ಥರಲ್ಲಿ ಮಂಗನ ಕಾಯಿಲೆ ಹರಡುವ ಭೀತಿ ಎದುರಾಗಿದೆ. ಗ್ರಾಮದ ನಿವಾಸಿ ಯರೇಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ರಮೇಶ್‌ ಮಂಗ ಮೃತಪಟ್ಟಿರುವ ಮಾಹಿತಿಯನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶರ್ಮಿಳಾ ಅವರ ಗಮನಕ್ಕೆ ತಂದಿದ್ದಾರೆ. ತಕ್ಷಣ ಅಂತರಗಂಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಪಶು ವೈದ್ಯಾಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳದಲ್ಲಿಯೇ ಮೃತದೇಹದ ಪರೀಕ್ಷೆ ನಡೆಸಿ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳಿಸಿಕೊಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳ ನಿರ್ದೇಶನದ ಮೇರೆಗೆ ಮೃತದೇಹವನ್ನು ಸುಟ್ಟುಹಾಕಲಾಗಿದೆ. ಅರಣ್ಯಾಧಿಕಾರಿ ಟೀಕೇಶ್‌, ಪಶು ವೈದ್ಯಾಧಿಕಾರಿ ಮಧುಕುಮಾರ್‌, ಪ್ರಾಥಮಿಕ ಆರೋಗ್ಯಾಧಿಕಾರಿ ಡಾ.ಗಿರೀಶ್‌ ಗ್ರಾಮಸ್ಥರು ಉಪಸ್ಥಿತರಿದ್ದರು.

ಇನ್ನಿಬ್ಬರಲ್ಲಿ ಕೆಎಫ್‌ಡಿ ವೈರಾಣು ಪತ್ತೆ : ಹೆಚ್ಚಿದ ಆತಂಕ

ಇತ್ತೀಚೆಗೆ ಭದ್ರಾ ಅಭಯಾರಣ್ಯ ವ್ಯಾಪ್ತಿಯ ಎನ್‌.ಆರ್‌.ಪುರದಲ್ಲಿ ಮಂಗಗಳು ಸಾವು ಕಂಡಿದ್ದು, ರೋಗಾಣುಗಳು ಪತ್ತೆಯಾಗಿವೆ. ಅಲ್ಲದೇ, ಕೆಲವರಿಗೆ ಸೋಂಕು ತಗುಲಿದೆ. ಸಾಗರ ತಾಲೂಕಿನಲ್ಲಿ ಪುನಃ ಮಂಗನಕಾಯಿಲೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಕಳೆದ ಸುಮಾರು 1 ವರ್ಷದ ಹಿಂದೆ ಇದೇ ರೀತಿ ಮಂಗಗಳು ಮೃತಪಟ್ಟಿದ್ದವು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಅರಣ್ಯ ವ್ಯಾಪ್ತಿಯ ಗ್ರಾಮಸ್ಥರಿಗೆ ಚುಚ್ಚುಮದ್ದುಗಳನ್ನು ನೀಡಲಾಗಿತ್ತು.KFD Virus found in three patients at shivamogga

click me!