ಎಐಸಿಸಿ ಅಧ್ಯಕ್ಷರಾಗಿ ಖರ್ಗೆ ಆಯ್ಕೆ; ಕಾಂಗ್ರೆಸ್‌ ಕಾರ್ಯಕರ್ತರ ಸಂಭ್ರಮ

By Kannadaprabha News  |  First Published Oct 20, 2022, 4:32 AM IST

ಅಖಿಲ ಭಾರತೀಯ ಕಾಂಗ್ರೆಸ್‌ ಅಧ್ಯಕ್ಷರಾಗಿ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.


  ತುಮಕೂರು (ಅ.20):  ಅಖಿಲ ಭಾರತೀಯ ಕಾಂಗ್ರೆಸ್‌ ಅಧ್ಯಕ್ಷರಾಗಿ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂಭ್ರಮಾಚರಣೆ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್‌ (Congress)  ಅಧ್ಯಕ್ಷ ಆರ್‌. ರಾಮಕೃಷ್ಣ, ಎಐಸಿಸಿ (AICC)  ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾಗಿರುವುದು ಕರ್ನಾಟಕಕ್ಕೆ ತುಂಬಾ ಹೆಮ್ಮೆ ತಂದಿದೆ. ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾಗಿದ್ದು, 2ನೇ ಕನ್ನಡಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮುಂಬರುವ ದಿನಗಳಲ್ಲಿ ಖರ್ಗೆಯವರ ನಾಯಕತ್ವದಲ್ಲಿ ಕಾಂಗ್ರೆಸ್‌ ಪಕ್ಷ ಇಡೀ ದೇಶದಲ್ಲಿ ಜಯಭೇರಿ ಭಾರಿಸಲಿ ಎಂಬುದು ನಮ್ಮ ಆಶಯವಾಗಿದೆ ಎಂದರು.

Tap to resize

Latest Videos

ಕರ್ನಾಟಕ ಸೇರಿದಂತೆ ದೇಶದ ಎಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್‌ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ಭ್ರಷ್ಟಬಿಜೆಪಿ ಸರ್ಕಾರವನ್ನು ತೊಲಗಿಸಲು ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೇವರು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಖರ್ಗೆ ಅವರು 9 ಬಾರಿ ಶಾಸಕರಾಗಿ, 2 ಬಾರಿ ಸಂಸದರಾಗಿ ಕಾರ್ಯನಿರ್ವಹಿಸಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ, ಶಿಸ್ತಿನ ಸಿಪಾಯಿ ಆಗಿ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಇವರ ಸುದೀರ್ಘ ಪಕ್ಷ ನಿಷ್ಠೆ ಸೇವೆಗೆ ಪಕ್ಷದ ಅತ್ಯುನ್ನತ ಸ್ಥಾನವಾದ ಎಐಸಿಸಿ ಅಧ್ಯಕ್ಷ ಪಟ್ಟದೊರೆತಿದೆ. ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದರೆ ಎಲ್ಲರಿಗೂ ಒಂದಲ್ಲಾ ಒಂದು ಹುದ್ದೆ ಸಿಕ್ಕೇ ಸಿಗುತ್ತದೆ ಎನ್ನುವುದಕ್ಕೆ ಖರ್ಗೆ ಅವರೇ ಉದಾಹರಣೆ ಎಂದು ಹೇಳಿದರು.

ನಗರ ಕಾಂಗ್ರೆಸ್‌ ಅಧ್ಯಕ್ಷ ಮೆಹಬೂಬು ಪಾಷ ಮಾತನಾಡಿ, ಖರ್ಗೆಯವರು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ವಿಶೇಷವಾಗಿ ತುಮಕೂರು ಜಿಲ್ಲೆಗೆ ತುಂಬಾ ಸಂತಸ ತಂದಿದೆ. ಸುದೀರ್ಘ ರಾಜಕಾರಣದಲ್ಲಿ ಯಾವುದೇ ಜಾತಿ, ಭೇದ ಇಲ್ಲದೆ ರಾಜಕಾರಣ ಮಾಡಿಕೊಂಡು ಎಲ್ಲರಿಗೂ ಸಮಾನತೆ ನೀಡುತ್ತಿರುವ ಹಿರಿಯ ನಾಯಕರು ಖರ್ಗೆ ಅವರು ಎಂದರು.

ಕೇಂದ್ರ ಮತ್ತು ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುತ್ತಾ ಇದುವರೆಗೂ ಯಾವುದೇ ಕಾರ್ಯಕರ್ತರಿಗಾಗಲೀ, ನಾಯಕರಿಗಾಗಲೀ ಕಿಂಚಿತ್ತೂ ನೋವು ಆಗದಂತೆ ಎಲ್ಲರನ್ನೂ ಸಮಾನರಾಗಿ ಕಾಣುತ್ತಾ ಪಕ್ಷದ ಸಂಘಟನೆಗೆ ಶ್ರಮಿಸುತ್ತಿರುವ ಖರ್ಗೆ ಅವರಿಗೆ ಎಐಸಿಸಿ ಅಧ್ಯಕ್ಷ ಸ್ಥಾನ ದೊರೆತಿರುವುದು ರಾಷ್ಟ್ರದಲ್ಲಿ ಮುಂದಿನ ಚುನಾವಣೆಗಳ ಗೆಲುವಿನ ರಹದಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ನಯಾಜ್‌ ಅಹಮದ್‌, ನಗರಸಭೆ ಮಾಜಿ ಸದಸ್ಯ ಅಸ್ಲಾಂಪಾಷ, ಮೆಹಬೂಬು ಪಾಷ, ಅಫ್ತಾಬ್‌, ಪುಟ್ಟರಾಜು, ನಾಸೀರಬಾನು, ಮಂಜುನಾಥ್‌, ನಟರಾಜಶೆಟ್ಟಿ, ಪ್ರಕಾಶ್‌, ಶಿವಪ್ರಸಾದ್‌ ಮತ್ತಿತರರು ಭಾಗವಹಿಸಿದ್ದರು.

ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆಯವರು ಆಯ್ಕೆಯಾಗಿರುವುದು ನಮಗೆಲ್ಲ ತುಂಬಾ ಸಂತಸ ತಂದಿದೆ. ಮುಂಬರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಗೆಲುವಿಗೆ ಖರ್ಗೆಯವರ ಆಯ್ಕೆ ದಿಕ್ಸೂಚಿಯಾಗಲಿದೆ.

ಜೆ. ಕುಮಾರ್‌ ಪಾಲಿಕೆ ವಿರೋಧ ಪಕ್ಷದ ನಾಯಕ

ಮಲ್ಲಿಕಾರ್ಜುನ ಖರ್ಗೆ ಆಯ್ಕೆಗೆ ಸಂತಸ

ಮಲ್ಲಿಕಾರ್ಜುನ ಖರ್ಗೆ ಆಯ್ಕೆಗೆ ಸಂತಸ

ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಸಿಹಿ ಹಂಚಿ ಸಂಭ್ರಮಿಸಿದ ಮುಖಂಡರು, ಕಾರ್ಯಕರ್ತರು

ಕಾಂಗ್ರೆಸ್ ವಿಜಯೋತ್ಸವ : 

ದಾವಣಗೆರೆ :  ಕಾಂಗ್ರೆಸ್‌ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆ ಆದ ಕಾಂಗ್ರೆಸ್‌ನ ಅನುಭವಿ ಹಾಗೂ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಆಯ್ಕೆಗೆ ಜಿಲ್ಲಾ ಕಾಂಗ್ರೆಸ್‌ ಪಕ್ಷದ ಮುಖಂಡರು ಮಹಾನಗರ ಪಾಲಿಕೆಯ ಮುಂಭಾಗದಲ್ಲಿ ಪಟಾಕಿ ಸಿಡಿಸಿ, ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ವಕ್ತಾರ ಡಿ.ಬಸವರಾಜ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ ಪಕ್ಷದಲ್ಲಿ ಕಳೆದ 55 ವರ್ಷದಿಂದ ನಿಷ್ಠಾವಂತ ಜನನಾಯಕರಾಗಿ ಸೇವೆ ಸಲ್ಲಿಸಿದ ಮುತ್ಸದಿ ನಾಯಕರು. ಖರ್ಗೆ ಲೋಕಸಭೆ, ರಾಜ್ಯಸಭೆಯಲ್ಲಿ ವಿಪಕ್ಷನಾಯಕರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದಾರೆ. ವಿರೋಧಪಕ್ಷದ ನಾಯಕ, ಕೆಪಿಸಿಸಿ ಅಧ್ಯಕ್ಷ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾಗಿ ಅಪಾರ ಅನುಭವ ಹೊಂದಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಕರ್ನಾಟಕ ಮತ್ತು ಕನ್ನಡಿಗರ ಹೆಮ್ಮೆ ಎಂದು ಹೇಳಿದರು.

ಮಹಾನಗರ ಪಾಲಿಕೆಯ ಸದಸ್ಯಕೆ. ಚಮನ್‌ ಸಾಬ್‌ ಮಾತನಾಡಿ ಮಲ್ಲಿಕಾರ್ಜುನ್‌ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್‌ ಬಲವರ್ಧನೆಗೊಳ್ಳಲಿದೆ ಎಂದು ಆಶಯ ವ್ಯಕ್ತಪಡಿಸಿದರು.

ಈ ಸಂಭ್ರಮಾಚರಣೆಯಲ್ಲಿ ಪಾಲಿಕೆ ಸದಸ್ಯಎ.ನಾಗರಾಜ,ಬಸಾಪುರದ ಕೊಟ್ರಯ್ಯಸ್ವಾಮಿ, ಜಿಲ್ಲಾ ಕಾಂಗ್ರೆಸ್‌ ಇನ್‌ಟೆಕ್‌ ವಿಭಾಗದ ಅಧ್ಯಕ್ಷ ಕೆ.ಎಂ.ಮಂಜುನಾಥ, ಎಂ.ಬಿ.ಸಮೀವುಲ್ಲಾ, ಮಹ್ಮದ್‌ ಜಿಕ್ರಿಯಾ, ಮುಖಂಡರುಗಳಾದ ಬಿ.ಎನ್‌.ವಿನಾಯಕ, ಅಲೆಕ್ಸಾಂಡರ್‌ ಜಾನ್‌, ಎನ್‌.ಎಸ್‌.ವೀರಭದ್ರಪ್ಪ, ಜಿ.ಇ.ರುದ್ರಮುನಿ, ಡಿ.ಶಿವಕುಮಾರ, ಫಯಾಜ್‌, ಗಾಂಧಿನಗರ ಟಿ.ರಂಗನಾಥ, ತಣ್ಣಿಗೆರೆ ಅಣ್ಣಪ್ಪ, ಬಿ.ಎಚ್‌.ಉದಯ್‌ ಕುಮಾರ್‌, ಆವರಗೆರೆ ದಾದಾಪೀರ್‌, ಮುಜೀಬ್‌ವುಲ್ಲಾ, ಸಾಧಿಕ್‌, ಗಾಂಧಿನಗರದ ಅಂಜಿನಪ್ಪ, ಅವರಗೆರೆ ಎಚ್‌.ಅಣ್ಣಪ್ಪ, ಮುಬಾರಕ್‌, ರಂಗನಾಥ್‌, ಜಾಹಿದ್‌, ಎಚ್‌.ಹರೀಶ್‌ ಇತರರಿದ್ದರು..........

click me!