ಕೈ ಮುಖಂಡ ಕೆ.ಎನ್‌. ರಾಜಣ್ಣ ಅಳಿಯ ಚಿತ್ರದುರ್ಗ ಹೊಸ ಎಸ್ಪಿ

Kannadaprabha News   | Asianet News
Published : Jan 02, 2020, 12:02 PM IST
ಕೈ ಮುಖಂಡ ಕೆ.ಎನ್‌. ರಾಜಣ್ಣ ಅಳಿಯ ಚಿತ್ರದುರ್ಗ ಹೊಸ ಎಸ್ಪಿ

ಸಾರಾಂಶ

ತುಮಕೂರು ಕಾಂಗ್ರೆಸ್ ಮುಖಂಡ ಕೆ ಎನ್ ರಾಜಣ್ಣ ಅಳಿಯ ಎಸ್ ಗಿರೀಶ್ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. 

ಚಿತ್ರದುರ್ಗ [ಜ.02]:  ಮಧುಗಿರಿ ಕ್ಷೇತ್ರದ ಮಾಜಿ ಶಾಸಕ, ಹಿರಿಯ ಕಾಂಗ್ರೆಸ್‌ ನಾಯಕ ಕೆ.ಎನ್‌. ರಾಜಣ್ಣ ಅಳಿಯ ಸೇರಿದಂತೆ ಆರು ಮಂದಿ ಐಪಿಎಸ್‌ ಅಧಿಕಾರಿಗಳನ್ನು ಬುಧವಾರ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಮಾಜಿ ಶಾಸಕರ ಅಳಿಯ ಎಸ್‌.ಗಿರೀಶ್‌ ಅವರಿಗೆ ಚಿತ್ರದುರ್ಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹುದ್ದೆ ನೀಡಲಾಗಿದೆ. ಇದಕ್ಕೂ ಮುನ್ನ ಅವರನ್ನು ಬೆಂಗಳೂರು ನಗರದ ಪಶ್ಚಿಮ ವಿಭಾಗದ ಡಿಸಿಪಿ ಸ್ಥಾನಕ್ಕೆ ನಿಯೋಜಿಸಲಾಗಿತ್ತು. 

ಅವರು ತಮ್ಮನ್ನು ಅವಧಿ ಪೂರ್ವ ವರ್ಗಾವಣೆ ಮಾಡಲಾಗಿದೆ ಎಂದು ಆಕ್ಷೇಪಿಸಿ ಪಶ್ಚಿಮ ವಿಭಾಗದ ಹಾಲಿ ಡಿಸಿಪಿ ರಮೇಶ್‌, ನ್ಯಾಯಾಲಯದ ಮೊರೆ ಹೋಗಿದ್ದರು. ಕೊನೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದ ಪರಿಣಾಮ ಗಿರೀಶ್‌ ಅವರ ವರ್ಗಾವಣೆ ಆದೇಶ ರದ್ದುಗೊಂಡಿತ್ತು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಚಿತ್ರದುರ್ಗ ಎಸ್ಪಿ ಆಗಿದ್ದ ಅರುಣ್‌ ಅವರಿಗೆ ಗಿರೀಶ್‌ ಅವರಿಂದ ತೆರವಾದ ಕೆಎಸ್‌ಆರ್‌ಪಿ ಕಮಾಂಡೆಂಟ್‌ ಹುದ್ದೆ ಕೊಡಲಾಗಿದೆ. 

PREV
click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು