ಬರದ ಸ್ಥಿತಿ-ಗತಿ ಅರಿತು ಬರ ನಿರ್ವಹಣೆಗೆ ಕ್ರಮ

By Kannadaprabha News  |  First Published Nov 11, 2023, 9:14 AM IST

ಜಿಲ್ಲೆಯ ಬರ ಪರಿಸ್ಥಿತಿ ಅರಿಯಲು ಜಿಲ್ಲೆಯ 5 ತಾಲೂಕುಗಳಿಗೆ ಈಗಾಗಲೇ ಭೇಟಿ ನೀಡಿದ್ದು, ಉಳಿದ 5 ತಾಲೂಕುಗಳಿಗೆ ಭೇಟಿ ನೀಡಿ ಬರದ ಸ್ಥಿತಿ-ಗತಿ ಅರಿತು ಬರ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ ತಿಳಿಸಿದರು.


  ತುಮಕೂರು :  ಜಿಲ್ಲೆಯ ಬರ ಪರಿಸ್ಥಿತಿ ಅರಿಯಲು ಜಿಲ್ಲೆಯ 5 ತಾಲೂಕುಗಳಿಗೆ ಈಗಾಗಲೇ ಭೇಟಿ ನೀಡಿದ್ದು, ಉಳಿದ 5 ತಾಲೂಕುಗಳಿಗೆ ಭೇಟಿ ನೀಡಿ ಬರದ ಸ್ಥಿತಿ-ಗತಿ ಅರಿತು ಬರ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ತಲೆದೋರಿರುವ ಬರಗಾಲ ನಿರ್ವಹಣೆ ವೇಳೆ ಸರ್ಕಾರದ ಆದೇಶ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕಾರಿಗಳಿಗೆ ಸಭೆಯಲ್ಲಿ ನಿರ್ದೇಶನ ನೀಡಲಾಗಿದೆ ಎಂದರು.

Latest Videos

undefined

ಮುಂಬರುವ ಬೇಸಿಗೆಯಲ್ಲಿ ಕುಡಿವ ನೀರು, ಜಾನುವಾರು ಮೇವು, ಜನ ಗುಳೆ ಹೋಗದ ಹಾಗೆ ಅವರಿಗೆ ಕಾಮಗಾರಿ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಬರ ನಿರ್ವಹಣೆ ಸಮರ್ಪಕವಾಗಿ ನಿಭಾಯಿಸಲು ಜಿಲ್ಲಾಡಳಿತದ ಪಿಡಿ ಖಾತೆಯಲ್ಲಿರುವ ೩೩ ಕೋಟಿ ಉಪಯೋಗಿಸಿಕೊಳ್ಳಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದರು.

ರಾಜ್ಯದ ಬರನಿರ್ವಹಣೆಗೆ ನಿಗಧಿಯಾದ ಕೇಂದ್ರದ ಎನ್‌ಡಿಆರ್‌ಎಫ್ ಹಣ ಇದುವರೆಗೂ ವಿನಿಯೋಗವಾಗಿಲ್ಲ. ಬೆಳೆ ನಷ್ಟದ ಪರಿಹಾರ ನೀಡಲು ರಾಜ್ಯದಿಂದ ಪ್ರಸ್ತಾವನೆ ಸಲ್ಲಿಸಿದ್ದರೂ ಈವರೆಗೂ ಪರಿಹಾರ ನೀಡಲು ಕೇಂದ್ರ ಮುಂದಾಗಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.

ಹೈಕೋರ್ಟ್ ಆದೇಶದಂತೆ ರಾಜ್ಯದಲ್ಲಿ ಪಿಎಸ್‌ಐ ಮರು ಪರೀಕ್ಷೆ ನಡೆಸಲಾಗುವುದು. ಎಫ್‌ಡಿಎ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದು, ಹಗರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ರಾಯದುರ್ಗ ಹಾಗೂ ದಾವಣಗೆರೆ ರೈಲು ಮಾರ್ಗ ಕಾಮಗಾರಿಗೆ ಚುರುಕು ನೀಡಲು ಭೂಸ್ವಾಧೀನ ಪ್ರಕ್ರಿಯೆಗೆ ವೇಗ ನೀಡಲಾಗಿದೆ. ಜಿ.ಪಂ. ಯಿಂದ ಸರ್ಕಾರಿ ಶಾಲೆ ಹಾಗೂ ಆಸ್ಪತ್ರೆಯ ಅಭಿವೃದ್ಧಿಗೆ ನರೇಗಾ ಯೋಜನೆಯಡಿ 600 ಕೋಟಿ ವೆಚ್ಚದ ಕ್ರಿಯಾ ಯೋಜನೆ ರೂಪಿಸಲಾಗಿದೆ. ಸರ್ಕಾರದ ಅನುದಾನ ಹಾಗೂ ಸಿಎಸ್‌ಆರ್ ನಿಧಿಯನ್ನೂ ಬಳಸಿಕೊಂಡು ಮುಂದಿನ ಮೂರು ವರ್ಷದೊಳಗಾಗಿ ಪ್ರತಿ ಶಾಲೆಯನ್ನೂ ಅಭಿವೃದ್ಧಿಪಡಿಸಲಾಗುವುದು. ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿಗಳ ವಸತಿ ಗೃಹಗಳ ಹಿಂಭಾಗ ದುಸ್ಥಿತಿಯಲ್ಲಿರುವ ಎಂಆರ್‌ಪಿ ಸರ್ಕಾರಿ ಶಾಲೆ ಅಭಿವೃದ್ಧಿಯ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ಶಾಲಾಭಿವೃದ್ಧಿಗೆ ಈಗಾಗಲೇ ಕ್ರಮಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ಚುನಾವಣಾ ಆಯೋಗವು ಲೋಕಸಭಾ ಸದಸ್ಯರ ಚುನಾವಣೆ ತಯಾರಿ ನಡೆಸುತ್ತಿರುವುದರಿಂದ ಸದ್ಯಕ್ಕೆ ಜಿ.ಪಂ. ತಾ.ಪಂ. ಚುನಾವಣೆ ನಡೆಸುವ ಬಗ್ಗೆ ಚಿಂತನೆ ಇಲ್ಲ ಎಂದು ತಿಳಿಸಿದರು.

ಗಾಯದ ಮೇಲೆ ಬರೆ ಎಳೆದ ಸರ್ಕಾರ

ಚಿಕ್ಕೋಡಿ(ನ.10): ರೈತರು ಸ್ವಂತ ಖರ್ಚಿನಲ್ಲಿ ಕೃಷಿ ಪಂಪಸೆಟ್‌ಗಳಿಗೆ ವಿದ್ಯುತ್ ಪಡೆಯಬೇಕು ಎನ್ನುವ ಸರ್ಕಾರದ ಆದೇಶ ಖಂಡನೀಯ. ಈಗಾಗಲೇ ಬರಗಾಲ ಹಾಗೂ ವಿದ್ಯುತ್‌ ಲೋಡ್‌ ಶೆಡ್ಡಿಂಗ್‌ನಿಂದ ಕಂಗೆಟ್ಟಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಟೀಕಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಪ್ರತಿ ನೀರಾವರಿ ಪಂಪಸೆಟ್‌ಗಳಿಗೆ ಕೇವಲ 24 ಸಾವಿರ ರೂಪಾಯಿ ಶುಲ್ಕ ನಿಗದಿಯಾಗಿತ್ತು. ಆದರೆ, ಸದ್ಯದ ಸರ್ಕಾರದ ಆದೇಶದಿಂದ ಕನಿಷ್ಠ ₹2 ಲಕ್ಷ ನೀಡಿ ವಿದ್ಯುತ್ ಸಂಪರ್ಕ ಪಡೆಯಬೇಕಾದ ಅನಿವಾರ್ಯತೆ ರೈತರಿಗೆ ಎದುರಾಗಿದೆ. ಮಳೆಯ ಅಭಾವದಿಂದ ರಾಜ್ಯದಲ್ಲಿ ಸಂಪೂರ್ಣ ಬರಗಾಲ ಆವರಿಸಿದ್ದು, ಮುಂಗಾರು ಬೆಳೆ ಸಂಪೂರ್ಣ ಹಾಳಾಗಿದೆ. ಹಿಂಗಾರು ಮಳೆಯ ಅಭಾವದಿಂದ ರೈತನ ಬೆಳೆಗಳು ಸಂಪೂರ್ಣ ನಾಶವಾಗಿದೆ. ಸರ್ಕಾರದ ವರದಿಯ ಪ್ರಕಾರ ರಾಜ್ಯದಲ್ಲಿ 223 ತಾಲೂಕುಗಳು ಸಂಪೂರ್ಣ ಬರಪೀಡಿತ ಘೋಷಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸುಮಾರು 200 ಕ್ಕಿಂತಲೂ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, ಇದು ದುರ್ದೈವದ ಮತ್ತು ಅತ್ಯಂತ ಕಳವಳಕಾರಿ ಸಂಗತಿ ಎಂದರು.

2028ರ ಚುನಾವಣೆಗೆ ಸಿಎಂ ಸ್ಥಾನ ಕೇಳುವೆ: ಸತೀಶ್‌ ಜಾರಕಿಹೊಳಿ

ಅಳಿದುಳಿದ ಬೆಳೆ ಉಳಿಸಿಕೊಳ್ಳಲು ರೈತರು ತೆರೆದ ಬಾವಿ, ಕೊಳವೆ ಬಾವಿಗಳ ಮೊರೆ ಹೊಗಿದ್ದಾರೆ. ಆದರೆ, ಹಗಲು ಹೊತ್ತಿನಲ್ಲಿ ಸಮರ್ಪಕ ವಿದ್ಯುತ್ ಸಿಗದೆ ರೈತರು ಬಸವಳಿದಿದ್ದಾರೆ. ಈ ಹಿಂದಿನ ಕಿಸಾನ್ ಸಮ್ಮಾನ್ ನಿಧಿ, ರೈತ ವಿದ್ಯಾನಿಧಿ, ಭೂ ಚೇತನ, ಭೂ ಸಿರಿ, ರೈತ ಶಕ್ತಿ, ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸೇರಿ ಅನೇಕ ರೈತ ಪರ ಯೋಜನೆಗಳನ್ನು ಅನುದಾನದ ಕೊರತೆ ಎಂಬ ನೆಪವೊಡ್ಡಿ ಇಂದಿನ ಸರ್ಕಾರ ರದ್ದು ಮಾಡಿರುವುದು ಖಂಡನೀಯ. ವಿದ್ಯುತ್ ಅಭಾವ, ರೈತರ ಆತ್ಮಹತ್ಯೆ ಹಾಗೂ ಬರ ಪೀಡಿತ ಪ್ರದೇಶದ ರೈತರ ಸಹಾಯಕ್ಕೆ ಬರಬೇಕಾದ ಸರ್ಕಾರ ಮತ್ತು ಉಸ್ತುವಾರಿ ಮಂತ್ರಿಗಳು ಯಾವುದೇ ಜಿಲ್ಲೆಗಳಿಗೆ ಭೇಟಿ ನೀಡಿಲ್ಲ. ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ ಎಂದು ಅಕ್ರೋಶ ವ್ಯಕ್ತಪಡಿಸಿದರು.

ಒಂದು ವೇಳೆ ಈ ಆದೇಶ ಹಿಂಪಡೆಯದಿದ್ದರೇ ರಾಜ್ಯದ ಸುಮಾರು 35 ಲಕ್ಷ ಪಂಪ್ ಸೆಟ್‌ಗಳ ಬಳಕೆದಾರ ರೈತರೊಂದಿಗೆ ಬಿಜೆಪಿ ರೈತ ಮೋರ್ಚಾ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.

click me!