ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದ್ದು, ಜಿಲ್ಲೆಯ ಎಲ್ಲಾ ನದಿ ತೊರೆಗಳು ಭೋರ್ಗರೆದು ಹರಿಯುತ್ತಿವೆ. ಮತ್ತೊಂದೆಡೆ ಜಲಪಾತಗಳು ಧುಮ್ಮಿಕ್ಕಿ ಅತಿಭಯಾನಕವಾಗಿ ಹರಿಯುತ್ತಿವೆ.
ವರದಿ: ರವಿ.ಎಸ್.ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು
ಕೊಡಗು (ಜು.24): ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದ್ದು, ಜಿಲ್ಲೆಯ ಎಲ್ಲಾ ನದಿ ತೊರೆಗಳು ಭೋರ್ಗರೆದು ಹರಿಯುತ್ತಿವೆ. ಮತ್ತೊಂದೆಡೆ ಜಲಪಾತಗಳು ಧುಮ್ಮಿಕ್ಕಿ ಅತಿಭಯಾನಕವಾಗಿ ಹರಿಯುತ್ತಿವೆ. ಜಲಪಾತ ನೋಡಲೆಂದು ಸೋಮವಾರಪೇಟೆ ತಾಲ್ಲೂಕಿನ ಮಲ್ಲಳ್ಳಿ ಜಲಪಾತಕ್ಕೆ ಹೋಗಿದ್ದ ಪ್ರವಾಸಿಗರು ಪ್ರವಾಹದಲ್ಲಿ ಸಿಲುಕಿದ್ದರು. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸೋಮವಾರಪೇಟೆ ಅಗ್ನಿಶಾಮಕ ದಳದ ಸಿಬ್ಬಂದಿ ಪ್ರವಾಹದಲ್ಲಿ ಸಿಲುಕಿದ್ದ ಪ್ರವಾಸಿಗರನ್ನು ರಕ್ಷಣೆ ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ. ಮಾಡಿದ್ದಾರೆ.
undefined
ಇನ್ನು ಮಡಿಕೇರಿ ಕುಶಾಲನಗರ ಭಾಗದಲ್ಲೂ ಭಾರೀ ಮಳೆ ಸುರಿಯುತ್ತಿದ್ದು ಕುಶಾಲನಗರ ತಾಲ್ಲೂಕಿನ ಹಾರಂಗಿ ಜಲಾಶಯಕ್ಕೆ ಭಾರೀ ಪ್ರಮಾಣದ ನೀರಿನ ಒಳಹರಿವು ಇದೆ. ಜಲಾಶಯಕ್ಕೆ 15 ಸಾವಿರದಿಂದ 20 ಸಾವಿರದವರೆಗೆ ನೀರು ಹರಿದು ಬರುತ್ತಿದ್ದು 2858 ಅಡಿ ಎತ್ತರದ ಜಲಾಶಯ ಭರ್ತಿಯಾಗಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದಿಂದ 30 ಸಾವಿರದಿಂದ 35 ಸಾವಿರ ಕ್ಯೂಸೆಕ್ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಪರಿಣಾಮ ಜಲಾಶಯದ ತಳಭಾಗದಲ್ಲಿರುವ ಹುಲಗುಂದ, ಕೂಡಿಗೆ, ಕೂಡುಮಂಗಳೂರು ಸೇರಿದಂತೆ ಹಲವು ಗ್ರಾಮಗಳು ಪ್ರವಾಹದ ಪರಿಸ್ಥಿತಿ ಎದುರಿಸುತ್ತಿವೆ.
ಚಿಕ್ಕಬಳ್ಳಾಪುರ ವೈದ್ಯಕೀಯ ಕಾಲೇಜಿಗೆ ‘ರಾಜಕೀಯ ಗ್ರಹಣ’: ಕಾಮಗಾರಿ ಇನ್ನೂ ಅಪೂರ್ಣ
ಮತ್ತೊಂದೆಡೆ ತಲಕಾವೇರಿ ಹಾಗೂ ಬ್ರಹ್ಮಗಿರಿ ತಪ್ಪಲಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಕಾವೇರಿ ನದಿ ಪ್ರವಾಹ ರೂಪ ಪಡೆದಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣ ಮುಳುಗಡೆಯಾಗಿದೆ. ಜೊತೆಗೆ ಭಗಂಡೇಶ್ವರ ದೇವಾಲಯದ ಮೆಟ್ಟಿಲವರೆಗೂ ಪ್ರವಾಹದ ನೀರು ನುಗ್ಗಿದ್ದು, ಯಾರು ಇಲ್ಲಿ ಓಡಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ತೀವ್ರಗೊಂಡಲ್ಲಿ ದೇವಾಲಯಕ್ಕೂ ನೀರು ನುಗ್ಗುವ ಸಾಧ್ಯತೆ ಇದೆ. 2019 ರಲ್ಲಿಯೂ ತೀವ್ರ ಮಳೆಯಿಂದ ಪ್ರವಾಹ ಎದುರಾಗಿ ಭಗಂಡೇಶ್ವರ ದೇವಾಲಯಕ್ಕೆ ನೀರು ನುಗ್ಗಿತ್ತು. ಮಳೆಯ ಆರ್ಭಟಕ್ಕೆ ಮಡಿಕೇರಿ ತಾಲ್ಲೂಕಿನ ಕಾಲೂರು ರಸ್ತೆಯಲ್ಲಿ ಗುಡ್ಡ ಕುಸಿತವಾಗಿದ್ದು, ಸಂಚಾರ ಬಂದ್ ಆಗಿತ್ತು.
ಜನರು ಪರ್ಯಾಯ ಮಾರ್ಗದಲ್ಲಿ ಓಡಾಡುತ್ತಿದ್ದರು. 2018 ರಲ್ಲೂ ಭೀಕರ ಗುಡ್ಡ ಕುಸಿದು ಕಾಲೂರಿನಲ್ಲಿ ಭೀಕರ ಪರಿಸ್ಥಿತಿ ಎದುರಾಗಿತ್ತು. ಮತ್ತೊಂದೆಡೆ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಮಡಿಕೇರಿ ಮಂಗಳೂರು ರಸ್ತೆ ಕರ್ತೋಜಿಯಲ್ಲಿ ಗುಡ್ಡ ಕುಸಿದಿತ್ತು. ಇದರಿಂದ ಎರಡು ಗಂಟೆಗಳ ಕಾಲ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತವಾಗಿತ್ತು. ಬಳಿಕ ಕುಸಿದಿದ್ದ ಮಣ್ಣು ಮತ್ತು ಮರಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಕೊಡಗು ಜಿಲ್ಲೆಯಲ್ಲಿ ಮತ್ತಷ್ಟು ಮಳೆಯ ಸಾಧ್ಯತೆಯಿದ್ದು, ಮಂಗಳವಾರ ಬೆಳಿಗ್ಗೆ 8.30 ವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಹದೇಶ್ವರ ಅಭಿವೃದ್ಧಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಸಚಿವ ವೆಂಕಟೇಶ್
150 ಮಿಲಿ ಮೀಟರ್ ಗೂ ಹೆಚ್ಚು ಮಳೆ ಸುರಿಯುವ ಸಾಧ್ಯತೆಯಿದ್ದು, ಈಗಾಗಲೇ ಸಾಕಷ್ಟು ಮಳೆ ಸುರಿದಿರುವ ಹಿನ್ನೆಲೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿರುವುದರಿಂದ ಜಿಲ್ಲೆಯ ಅಂಗನವಾಡಿ, ಶಾಲಾ ಮತ್ತು ಕಾಲೇಜುಗಳಿಗೆ ಮಂಗಳವಾರವೂ ರಜೆ ನೀಡಲಾಗಿದೆ. ಮಳೆ ಪರಿಸ್ಥಿತಿಯನ್ನು ನೋಡಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ರಜೆ ಘೋಷಿಸಿದ್ದಾರೆ. ನಾಪೋಕ್ಲು ಸಮೀಪದ ಕೂರುಳಿಯಲ್ಲಿ ರಸ್ತೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಸಂಚಾರ ಅಸ್ತವ್ಯಸ್ತವಾಗಿತ್ತು. ಬಳಿಕ ಮರವನ್ನು ಕಡಿದು ತೆರವುಗೊಳಿಸಲಾಗಿದೆ. ಹಲವು ಮನೆಗಳ ಮೇಲೆ ಮರಗಳು ಉರುಳಿ ಬಿದ್ದಿದ್ದು ಮನೆಗಳು ಹಾನಿಗೊಳಗಾಗಿವೆ.