ಕೊಡಗು ಜಿಪಂ ಸಿಇಒ ಪತ್ನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ

By Kannadaprabha NewsFirst Published Aug 6, 2022, 2:30 AM IST
Highlights

ತಮ್ಮ ಪತ್ನಿಯ ಗರ್ಭಿಣಿ ತಪಾಸಣೆ ಹಾಗೂ ಹೆರಿಗೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮಾಡಿಸಿ ಮಾದರಿ ಅಧಿಕಾರಿಯಾದ ವೃತ್ತಿಯಲ್ಲಿ ಐಎಎಸ್‌ ಅಧಿಕಾರಿ ಭನ್ವರ್‌ ಸಿಂಗ್‌ ಮೀನಾ 

ಮಡಿಕೇರಿ(ಆ.06):  ಸರ್ಕಾರಿ ಆಸ್ಪತ್ರೆ ಎಂದೊಡನೆ ಸೌಲಭ್ಯ ಮತ್ತಿತರ ನೆಪಗಳನ್ನು ಮುಂದಿಟ್ಟು ಮೂಗು ಮುರಿಯುವವರೇ ಹೆಚ್ಚು. ಆದರೆ ಕೊಡಗಿನ ಐಎಎಸ್‌ ಅಧಿಕಾರಿಯೊಬ್ಬರ ಪತ್ನಿ ಮಡಿಕೇರಿಯ ಕೊಡಗು ವೈದ್ಯಕೀಯ ಕಾಲೇಜಿನ ಬೋಧಕ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಕೊಡಗು ಜಿಲ್ಲಾ ಪಂಚಾಯಿತಿ ಸಿಇಒ ಭನ್ವರ್‌ ಸಿಂಗ್‌ ಮೀನಾ ಅವರ ಪತ್ನಿ ಕನಿಷ್ಕಾ ಮೀನಾ ಅವರು ಶುಕ್ರವಾರ ಬೆಳಗ್ಗೆ 8.56ಕ್ಕೆ ಶಸ್ತ್ರಚಿಕಿತ್ಸೆ ಮೂಲಕ ಮಗುವಿಗೆ ಜನ್ಮ ಕೊಟ್ಟಿದ್ದಾರೆ.

ಗುರುವಾರ ಕನಿಷ್ಕಾ ಮೀನಾ ಅವರನ್ನು ಆಸ್ಪತ್ರೆಯ ವಿಶೇಷ ಹೆರಿಗೆ ಘಟಕಕ್ಕೆ ದಾಖಲಿಸಲಾಗಿತ್ತು. ಆಸ್ಪತ್ರೆಯ ಸ್ತ್ರೀ ರೋಗ ತಜ್ಞ ಡಾ.ಸೋಮಶೇಖರ್‌, ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ತಾಯಿ-ಮಗು ಆರೋಗ್ಯವಾಗಿದ್ದಾರೆ. ಹೆರಿಗೆ ಸಂಬಂಧಿಸಿದಂತೆ ತಪಾಸಣೆ, ಔಷಧ ಎಲ್ಲವನ್ನೂ ಸರ್ಕಾರಿ ಆಸ್ಪತ್ರೆಯಲ್ಲಿ ಪಡೆದಿದ್ದಾರೆ.

ಮಹತ್ವ ಅರಿತು ಹಬ್ಬಗಳ ಆಚರಣೆಯಿಂದ ಸಂಸ್ಕೃತಿ ರಕ್ಷಣೆ: ಕಾಳಿಮಾಡ ಮೋಟಯ್ಯ

ವೃತ್ತಿಯಲ್ಲಿ ಐಎಎಸ್‌ ಅಧಿಕಾರಿಯಾಗಿದ್ದರೂ ಭನ್ವರ್‌ ಸಿಂಗ್‌ ಮೀನಾ ತಮ್ಮ ಪತ್ನಿಯ ಗರ್ಭಿಣಿ ತಪಾಸಣೆ ಹಾಗೂ ಹೆರಿಗೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮಾಡಿಸಿ ಮಾದರಿ ಅಧಿಕಾರಿಯಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವೆಂಕಟೇಶ್‌ ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ದೊರಕುತ್ತಿದೆ. ಅಲ್ಲದೆ ಖಾಸಗಿ ಆಸ್ಪತ್ರೆಗೆ ಹೋಲಿಸಿದರೆ ಸರ್ಕಾರಿ ಆಸ್ಪತ್ರೆಯ ನುರಿತ ವೈದ್ಯರ ತಂಡ ಹಾಗೂ ಸಿಬ್ಬಂದಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರ ಬಗ್ಗೆ ಯಾವುದೇ ಅನುಮಾನವಿಲ್ಲ. ನಾವು ಮೊದಲಿನಿಂದಲೂ ಕೊಡಗು ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆದುಕೊಂಡು ಬರುತ್ತಿದ್ದೇವೆ. ಈಗಲೂ ಪಡೆದಿದ್ದೇವೆ. ಮುಂದೆಯೂ ಸರ್ಕಾರಿ ಆಸ್ಪತ್ರೆಯಲ್ಲೇ ಪಡೆಯುತ್ತೇವೆ ಅಂತ ಕೊಡಗು ಜಿಪಂ ಸಿಇಒ ಭನ್ವರ್‌ ಸಿಂಗ್‌ ಮೀನಾ ತಿಳಿಸಿದ್ದಾರೆ. 
 

click me!