ಕೊಡಗಿನ ಯೋಧ ಕೇರಳದಲ್ಲಿ ಬಲಿ

By Kannadaprabha NewsFirst Published Sep 25, 2020, 7:12 AM IST
Highlights

ಕೊಡಗಿನ ಯೋಧರೋರ್ವರು ಕೇರಳದಲ್ಲಿ ಮೃತಪಟ್ಟಿದ್ದಾರೆ. ಅಲ್ಲಿನ ಬಿ ಎಸ್‌ ಎಫ್ ಪಡೆಯಲ್ಲಿ ಅವರು ಕಾರ್ಯನಿರ್ವಹಿಸುತ್ತಿದ್ದರು.

ಮಡಿಕೇರಿ (ಸೆ.25): ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ಯೋಧ ಕೇರಳದ ತಿರುವವನಂತಪುರ ಮೆಡಿಕಲ್‌ ಕಾಲೇಜಿನಲ್ಲಿ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಕೊಡಗಿನ ನಲ್ವತ್ತೊಕ್ಲು ನಿವಾಸಿ ದುದ್ದಿಯಂಡ ಎ. ಮಜೀದ್‌(50) ಮೃತ ಯೋಧ. ಮೃತರಿಗೆ ತಾಯಿ, ಪತ್ನಿ, ಇಬ್ಬರು ಗಂಡು ಮಕ್ಕಳು, ಐವರು ಸಹೋದರರು ಮತ್ತು ಮೂವರು ಸಹೋದರಿಯರು ಇದ್ದಾರೆ. ಬಿಎಸ್‌ಎಫ್‌ನಲ್ಲಿ 30 ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿರುವ ಮಜೀದ್‌ ಅವರಿಗೆ ಸೆಪ್ಟೆಂಬರ್‌ ಮೊದಲ ವಾರ ಕೊರೋನಾ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಕೇರಳದ ತಿರುವನಂತಪುರ ಮೆಡಿಕಲ್‌ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

PFIನಿಂದ 1269 ಕೋವಿಡ್‌ ಬಾಧಿತ ಮೃತದೇಹಗಳ ಅಂತ್ಯಸಂಸ್ಕಾರ ...

ನಾಲ್ಕು ವರ್ಷಗಳಿಂದ ಕೇರಳದ ತಿರುವನಂತಪುರಂನಲ್ಲಿ ಕರ್ತವ್ಯದಲ್ಲಿದ್ದ ಮಜೀದ್‌ ಅವರಿಗೆ ಸೆಪ್ಟೆಂಬರ್‌ ಮೊದಲ ವಾರದಲ್ಲಿ ಕೋವಿಡ್‌-19 ಸೋಂಕು ದೃಢಪಟ್ಟಿದ್ದು, ತಿರುವನಂತಪುರಂನ ಮೆಡಿಕಲ್‌ ಕಾಲೇಜಿನಲ್ಲಿರುವ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಪ್ಲಾಸ್ಮಾ ಥೆರಪಿಯಿಂದ ಚೇತರಿಸಿಕೊಳ್ಳುವ ಹಂತದಲ್ಲಿದ್ದ ಮಜೀದ್‌ ಅವರು ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ.
 

click me!