Kodagu Rain : ಜಿಲ್ಲೆಯಲ್ಲಿ ಇಂದಿನ ಮಳೆ ಪ್ರಮಾಣ; ಇಲ್ಲಿದೆ ವಿವರ

By Ravi NayakFirst Published Sep 1, 2022, 4:38 PM IST
Highlights

ಜಿಲ್ಲೆಯಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಗುಡ್ಡ ಕುಸಿತ, ಸಾವು ನೋವಿನ ಪ್ರಮಾಣ ಅಷ್ಟು ಇಲ್ಲವಾದರೂ ಅತಿ ಹೆಚ್ಚು ಮಳೆ ಸುರಿದಿದೆ. ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 6.35 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.42 ಮಿ.ಮೀ. ಮಳೆಯಾಗಿತ್ತು

ಮಡಿಕೇರಿ (ಸೆ.1) : ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 6.35 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.42 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2863.75 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2087.52 ಮಿ.ಮೀ ಮಳೆಯಾಗಿತ್ತು.  ಮಡಿಕೇರಿ(Madikeri) ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 18.90 ಮಿ.ಮೀ. ಕಳೆದ ವರ್ಷ ಇದೇ ದಿನ 2.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 4161.76 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2932.71 ಮಿ.ಮೀ. ಮಳೆಯಾಗಿತ್ತು.

Heavy Rain: ಎರಡೇ ಎರಡು ತಾಸು ಸುರಿದ ಮಳೆಗೆ ಕಾಫಿನಾಡು ತತ್ತರ

ವಿರಾಜಪೇಟೆ(Veerajpete): ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 7.27 ಮಿ.ಮೀ.  ಜನವರಿಯಿಂದ ಇಲ್ಲಿಯವರೆಗಿನ ಮಳೆ 2169.25 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1680.49 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ : ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.17 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2260.26 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1649.38 ಮಿ.ಮೀ. ಮಳೆಯಾಗಿತ್ತು. 

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ನಾಪೋಕ್ಲು 60.20, ಸಂಪಾಜೆ 3, ಭಾಗಮಂಡಲ 12.40, ಶಾಂತಳ್ಳಿ 1 ಮಿ.ಮೀ. ಮಳೆಯಾಗಿದೆ. 2 ತಿಂಗಳಲ್ಲಿ ಮಳೆ ಅನಾಹುತಕ್ಕೆ 96 ಬಲಿ, 7,548 ಕೋಟಿ ನಷ್ಟ

ಹಾರಂಗಿ ಜಲಾಶಯದ ನೀರಿನ ಮಟ್ಟ 

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2857.36 ಅಡಿಗಳು. ಕಳೆದ ವರ್ಷ ಇದೇ ದಿನ 2858.16 ಅಡಿಗಳು. ಇಂದಿನ ನೀರಿನ ಒಳಹರಿವು 3333 ಕ್ಯುಸೆಕ್, ಕಳೆದ ವರ್ಷ ಇದೇ ದಿನ 2471 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 900 ಕ್ಯುಸೆಕ್. ನಾಲೆಗೆ 600 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 758 ಕ್ಯುಸೆಕ್. ನಾಲೆಗೆ 1050 ಕ್ಯುಸೆಕ್.

click me!