ಸಿದ್ದರಾಮಯ್ಯ ವಿರುದ್ಧ ಕೊಡವರ ಸಮುದಾಯದ ಪ್ರತಿಭಟನೆ| ಮಡಿಕೇರಿ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ| ಸಿದ್ದರಾಮಯ್ಯ ವಿರುದ್ದ ಆಕ್ರೋಶ|
ಕೊಡಗು(ಡಿ.21): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯಿಂದ ಕೊಡವ ಸಮುದಾಯಕ್ಕೆ ಅಪಮಾನವಾಗಿದೆ. ಸಿದ್ದರಾಮಯ್ಯ ಈ ಕೂಡಲೇ ಬಹಿರಂಗವಾಗಿ ಕೊಡವರ ಕ್ಷಮೆಯಾಚಿಸಿ, ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಕೊಡವ ಸಮುದಾಯ ಆಗ್ರಹಿಸಿದೆ.
ಕೊಡವರು ಗೋಮಾಂಸ ತಿನ್ನುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಯನ್ನ ಖಂಡಿಸಿದ ಕೊಡವ, ಕೊಡವತಿಯರು ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಸಿದ್ದರಾಮಯ್ಯಗೆ ಕೊಡವರಿಂದ ಖಡಕ್ ವಾರ್ನಿಂಗ್
ಕಾವೇರಿ ಮಾತೆ, ಇಗ್ಗುತ್ತಪ್ಪ, ಕೊಡವ ಕುಲಕ್ಕೆ ಜಯಕಾರ ಹಾಕಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯ ಕೊಡವ ಸಮಾಜ, ಪೊನ್ನಂಪೇಟೆಯ ಕೊಡವ ಸಮಾಜ, ಮಡಿಕೇರಿ ಹಿತ ರಕ್ಷಣಾ ವೇದಿಕೆ ಸೇರಿದಂತೆ ಮತ್ತಿತರ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿ ಸಿದ್ದರಾಮಯ್ಯ ವಿರುದ್ಧ ತಮ್ಮ ಆಕ್ರೋಶವನ್ನ ಹೊರಹಾಕಿದ್ದಾರೆ.