ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟ್ ಟೀಕಿಸಿದರು.
ಬೆಳಗಾವಿ (ಜು.15) : ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟ್ ಟೀಕಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕಾಮಕುಮಾರ ನಂದಿ ಮಹಾರಾಜರ ಹತ್ಯೆ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಲಾಭ ಪಡೆಯಲು ಯತ್ನಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ನೇತೃತ್ವದ ತಂಡ ನಂದಿ ಆಶ್ರಮಕ್ಕೆ ರಾಜಕೀಯ ಲಾಭಕ್ಕಾಗಿಯೇ ಭೇಟಿ ನೀಡಿದೆ ಎಂದು ಟೀಕಿಸಿದ ಅವರು, ಜೈನಮಿನಿ ಹತ್ಯೆ ಪ್ರಕರಣ ಸಂಬಂಧ ಬೆಳಗಾವಿ ಪೊಲೀಸರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಜೈನಮುನಿಗಳ ಹತ್ಯೆ ಮಾಡಿದ ಆರೋಪಿಗಳನ್ನು ಕೇವಲ ಆರು ಗಂಟೆಯಲ್ಲೇ ಬಂಧಿಸಿದ್ದಾರೆ. ಜೈನಮುನಿ ಹತ್ಯೆ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡುವುದನ್ನು ಬಿಡಬೇಕು ಎಂದು ಆಗ್ರಹಿಸಿದರು.
ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು ಜೈನಮುನಿ ಹತ್ಯೆ: ಐಸಿಸ್ ಶಂಕೆ..ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ..!
ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಇಡೀ ನಾಗರಿಕರ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಇದು ಖಂಡನೀಯ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಸೇರಿದಂತೆ ರಾಜ್ಯದಲ್ಲಿ ಸರಣಿ ಹತ್ಯೆ ಪ್ರಕರಣ ಮುಂದುವರೆದಿವೆ. ಈ ಹಿಂದಿನ ಬಿಜೆಪಿ ಆಡಳಿತದಲ್ಲಿ ಹದಗೆಟ್ಟಿದ್ದ ಕಾನೂನು ವ್ಯವಸ್ಥೆಯೇ ಮುಂದುವರೆದಿದೆ. ಬಿಜೆಪಿ ಆಡಳಿತದಲ್ಲಿ ದುರಾಡಳಿತದಿಂದ ಬೇಸತ್ತು ಈ ಬಾರಿ ಕಾಂಗ್ರೆಸ್‌ಗೆ ಜನ ಸ್ಪಷ್ಟಬಹುಮತ ನೀಡಿ, ಬೆಂಬಲಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡು ತಿಂಗಳಲ್ಲೇ ರಾಜ್ಯದ ವಿವಿಧೆಡೆ ಕೊಲೆಗಳ ಸರಣಿ ನಡೆಯುತ್ತಿದೆ.
ಜೈನಮುನಿ ಹತ್ಯೆ ಆರೋಪಿಗೆ ಶಿಕ್ಷೆ ಬೇಡ, ಮನಃ ಪರಿವರ್ತನೆಯಾಗಲಿ - ಗುಣಧರನಂದಿ ಮಹಾರಾಜ್
ವಾಮಮಾರ್ಗದಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿಯ ಆಡಳಿತದಲ್ಲಿ ಹದಗೆಟ್ಟಿದ್ದ ಕಾನೂನು ಸುವ್ಯವಸ್ಥೆ ಕಾಂಗ್ರೆಸ್ ಸರ್ಕಾರದಲ್ಲಿಯೂ ಮುಂದುವರೆದಿದೆ. ಬೆಳಗಾವಿಯಲ್ಲಿ ಜೈನಮುನಿ ಹತ್ಯೆ, ಕೋಲಾರದಲ್ಲಿ ಯುವತಿಯ ಮರ್ಯಾದೆ ಹತ್ಯೆ, ಮೈಸೂರಿನ ವೇಣುಗೋಪಾಲ ಹತ್ಯೆ, ಬೆಂಗಳೂರಿನ ಜೋಡಿ ಕೊಲೆ ಹೀಗೆ ಸರಣಿ ಕೊಲೆ ನಡೆಯುತ್ತಿವೆ. ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಎಸ್‌ಡಿಪಿಐ ಮುಖಂಡರಾದ ಮಕ್ಸೂದ ಮಕಾನದಾರ, ಜಾಕೀರ್ ನಾಯಕವಾಡಿ ಮೊದಲಾದರು ಉಪಸ್ಥಿತರಿದ್ದರು.