ಗುದ್ದಲಿ ಪೂಜೆ ನೆರವೇರಿಸಿ 3 ತಿಂಗಳಾದರೂ ಶುರುವಾಗದ ರಾಮಸಾಗರ ಸೇತುವೆ: ಅಸಲಿ ಕಾರಣವೇನು?

Published : Oct 11, 2026, 08:22 AM IST
Ramasagara Gollaguruvenahalli Bridge

ಸಾರಾಂಶ

ರಾಮಸಾಗರ ಮತ್ತು ಗೊಲ್ಲಗುರುವೇನಹಳ್ಳಿ ಸಂಪರ್ಕಿಸುವ ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮೂರು ತಿಂಗಳಾದರೂ ಕಾಮಗಾರಿ ಆರಂಭವಾಗಿಲ್ಲ. ಶಾಸಕಿ ರೂಪಕಲಾ ಶಶಿಧರ್ ಆರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದ್ದರು. ಕಾಮಗಾರಿ ವಿಳಂಬದಿಂದಾಗಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಶೀಘ್ರವೇ ಕಾಮಗಾರಿ ಆರಂಭಿಸಲು ಆಗ್ರಹಿಸಿದ್ದಾರೆ.

ಆರ್.ಪುರುಷೋತ್ತಮ ರೆಡ್ಡಿ

ಕನ್ನಡಪ್ರಭ ವಾರ್ತೆ ಬೇತಮಂಗಲ: ರಾಮಸಾಗರದಿಂದ ಗೊಲ್ಲಗುರುವೇನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದ ಮಧ್ಯದಲ್ಲಿರುವ ರಾಮಸಾಗರ ಪಾಲಾರ್ ಕೆರೆಯ ಕೋಡಿ ಮೇಲೆ ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮೂರು ತಿಂಗಳು ಕಳೆದರೂ ಕಾಮಗಾರಿ ಆರಂಭವಾಗಿಲ್ಲದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಶಾಸಕಿ ರೂಪಕಲಾ ಶಶಿಧರ್ ಗುದ್ದಲಿ ಪೂಜೆ

ಈ ಸೇತುವೆ ನಿರ್ಮಾಣದಿಂದ ರೈತರು, ವಾಹನ ಸವಾರರು ಸೇರಿದಂತೆ ನಿತ್ಯ ಸಂಚರಿಸುವ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂಬ ನಿರೀಕ್ಷೆ ಇತ್ತು. ಈ ಹಿನ್ನೆಲೆಯಲ್ಲಿ ಶಾಸಕಿ ರೂಪಕಲಾ ಶಶಿಧರ್ (MLA Roopakala Shashidhar) ಗುದ್ದಲಿ ಪೂಜೆ ನೆರವೇರಿಸಿ ಆರು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವ ಭರವಸೆ ನೀಡಿದ್ದರು.

ಆದರೆ ಸ್ಥಳದಲ್ಲಿ ಇದುವರೆಗೂ ಯಾವುದೇ ಕಾಮಗಾರಿ ಆರಂಭವಾಗಿಲ್ಲ. ಕೆರೆ ಕೋಡಿ ಹರಿಯುವ ಸಂದರ್ಭದಲ್ಲಿ ನೀರಿನ ಹರಿವು ಹೆಚ್ಚಾಗಿ ಸಂಚಾರಕ್ಕೆ ತೊಂದರೆಯಾಗುತ್ತದೆ. ಸೇತುವೆಯಾದರೆ ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುತ್ತದೆ ಎಂಬುದು ಗ್ರಾಮಸ್ಥರ ನಿರೀಕ್ಷೆಯಾಗಿತ್ತು.

ಕಾಮಗಾರಿ ವಿಳಂಬಕ್ಕೆ ಕಾರಣವೇನು? ಆರಂಭ ಯಾವಾಗ?

ಕಾಮಗಾರಿ ಯಾವಾಗ ಆರಂಭವಾಗಲಿದೆ, ಆರು ತಿಂಗಳಲ್ಲಿ ಪೂರ್ಣಗೊಳ್ಳುತ್ತದೆಯೇ, ವಿಳಂಬಕ್ಕೆ ಕಾರಣವೇನು ಎಂಬ ಪ್ರಶ್ನೆಗಳು ಸಾರ್ವಜನಿಕರಲ್ಲಿ ಮೂಡಿವೆ. ಅನುದಾನ ಬಿಡುಗಡೆಯಾಗಿದೆಯೇ, ಗುತ್ತಿಗೆ ಪ್ರಕ್ರಿಯೆ ಪೂರ್ಣಗೊಂಡಿದೆಯೇ, ತಾಂತ್ರಿಕ ಮತ್ತು ಆಡಳಿತಾತ್ಮಕ ಅನುಮೋದನೆ ದೊರೆತಿದೆಯೇ ಎಂಬ ಬಗ್ಗೆ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಗುದ್ದಲಿ ಪೂಜೆ ಮಾತ್ರವಲ್ಲ, ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಂಡು ಜನರ ಬಳಕೆಗೆ ಬರುವುದು ಮುಖ್ಯವಾಗಿದೆ. ಶೀಘ್ರ ಕಾಮಗಾರಿ ಆರಂಭಿಸಿ ರಾಮಸಾಗರ-ಗೊಲ್ಲಗುರುವೇನಹಳ್ಳಿ ಭಾಗದ ಬಹುದಿನದ ಸಂಚಾರ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

PREV
Read more Articles on
click me!

Recommended Stories

ಗುಡ್ ನ್ಯೂಸ್: ಕರ್ನಾಟಕದ ಈ ಜಿಲ್ಲೆಯಲ್ಲಿ 5 ಸಾವಿರ ಜನರಿಗೆ ಉದ್ಯೋಗ, ಶೀಘ್ರದಲ್ಲೇ ಜವಳಿ ಪಾರ್ಕ್ ನಿರ್ಮಾಣ!
ಗಂಡನ ಸಾವಿನ ಆಘಾತಕ್ಕೆ ಪತ್ನಿಯೂ ಸಾವು - ಹಿರೇಹಳ್ಳಿ ಗ್ರಾಮದಲ್ಲಿ ಒಂದೇ ದಿನ ದಂಪತಿ ನಿಧನ