ಸರ್ಕಾರಿ ಕಾರ್ಯಕ್ರಮ ಉದ್ಘಾಟನೆಗೆ ಬಿಜೆಪಿ ಕಾರ್ಯಕರ್ತರು, ಕೈ ಶಾಸಕ ಗರಂ

By Suvarna News  |  First Published Dec 16, 2019, 12:34 PM IST

ಸರ್ಕಾರಿ ಕಾರ್ಯಕ್ರಮಗಳನ್ನು ಬಿಜೆಪಿ ಕಾರ್ಯಕರ್ತರಿಂದ ಉದ್ಘಾಟಿಸುವ ಬಗ್ಗೆ ಕೋಲಾರ ಕಾಂಗ್ರೆಸ್ ಶಾಸಕ ಎಸ್‌. ಎನ್‌. ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದಲ್ಲಿ ಶಾಸಕರನ್ನೂ ಆಹ್ವಾನಿಸದೆ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.


ಕೋಲಾರ(ಡಿ.16): ಸರ್ಕಾರಿ ಕಾರ್ಯಕ್ರಮಗಳನ್ನು ಬಿಜೆಪಿ ಕಾರ್ಯಕರ್ತರಿಂದ ಉದ್ಘಾಟಿಸುವ ಬಗ್ಗೆ ಕೋಲಾರದ ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್‌. ಎನ್‌. ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದಲ್ಲಿ ಶಾಸಕರನ್ನೂ ಆಹ್ವಾನಿಸದೆ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಕೋಲಾರ ಜಿಲ್ಲಾ ಪಂಚಾಯತ್‌ನಲ್ಲಿ ಕೆಡಿಪಿ ಸಭೆ ನಡೆದಿದ್ದು, ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್. ನಾಗೇಶ್ ಅಧ್ಯಕ್ಷತೆ ವಹಿಸಿದ್ದಾರೆ. ಈ ಸಂದರ್ಭ ಸಭೆಯನ್ನು ಬಹಿಷ್ಕರಿಸುವುದಾಗಿ ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್ಎನ್ ನಾರಾಯಣಸ್ವಾಮಿ ಬೆದರಿಕೆ ಹಾಕಿದ್ದಾರೆ.

Tap to resize

Latest Videos

ಚಾಮರಾಜನಗರ ಜಿಲ್ಲೆಯಲ್ಲಿ 117 ಹೆಕ್ಟೇರ್‌ಗೂ ಅಧಿಕ ಬಾಳೆ ನಾಶ

ತನ್ನ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರನ್ನು ಕರೆಯದೆ ಪಂಚಾಯತಿ ಕಟ್ಟಡ ಉದ್ಘಾಟನೆ ಮಾಡಿದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಶಾಸಕ, ಬಿಜೆಪಿ ಆಡಳಿತದಲ್ಲಿ ವಿರೋಧ ಪಕ್ಷದ ಶಾಸಕರನ್ನು ಕಡೆಗಣಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಕಾರ್ಯಕ್ರಮಗಳನ್ನು ಬಿಜೆಪಿ ಕಾರ್ಯಕರ್ತರಿಂದ ಉದ್ಘಾಟನೆ ಮಾಡಲಾಗುತ್ತಿದೆ ಎಂದು ಆರೋಪಿಸಿದ ಅವರು, ಪ್ರೋಟೋಕಾಲ್ ಕಡೆಗಣಿಸಿದ ಆಧಿಕಾರಿಗಳ ವಿರುದ್ಧ ಈಗಲೇ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಸಭೆ ಬಹಿಷ್ಕರಸುವುದಾಗಿ ಶಾಸಕ ಎಸ್. ಎನ್. ನಾರಾಯಣಸ್ವಾಮಿ ಬೆದರಿಕೆ ಹಾಕಿದ್ದಾರೆ. ಸಭೆಯಲ್ಲಿ ಡಿಸಿ ಜೆ.ಮಂಜುನಾಥ್, ಶಾಸಕರಾದ ಕೆ.ಶ್ರೀನಿವಾಸಗೌಡ, ವೈಎನ್ ನಾರಾಯಣಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಆಧಿಕಾರಿಗಳು ಭಾಗಿಯಾಗಿದ್ದಾರೆ.

'ರೇಷನ್ ಶಾಪ್‌ನಲ್ಲಿ ಈರುಳ್ಳಿ, ಬೆಳ್ಳುಳ್ಳಿಯನ್ನೂ ಕೊಡಿ'..!

click me!