ಗ್ರಾಮ ಪಂಚಾಯಿತಿ ಕಚೇರಿಯಲ್ಲಿಯೇ ಸಿಬ್ಬಂದಿಯ ಖುಲ್ಲಂ ಖುಲ್ಲಾ ಕಿಸ್ಸಿಂಗ್; ದಾಖಲಾಯ್ತು ಕೇಸ್

By Sathish Kumar KH  |  First Published May 14, 2024, 3:02 PM IST

ಕೋಲಾರ ಜಿಲ್ಲೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಕೆಲಸ ಮಾಡುವ ಕಚೇರಿಯಲ್ಲಿ ಖುಲ್ಲಂ ಖುಲ್ಲಾ ಕಿಸ್ಸಿಂಗ್ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.


ಕೋಲಾರ (ಮೇ 14): ಇಡೀ ರಾಜ್ಯಾದ್ಯಂತ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲಿಯೇ ಕೋಲಾರದ ಜಿಲ್ಲೆಯ ಗ್ರಾಮ ಪಂಚಾಯಿತಿ ಸಿಬ್ಬಂದಿ ಕಚೇರಿ ಕೆಲಸದ ಅವಧಿಯಲ್ಲಿ ಖುಲ್ಲಂ, ಖುಲ್ಲಾ ಕಿಸ್ಸಿಂಗ್ ಮಾಡಿ ಅದನ್ನು ಸೆಲ್ಫಿ ತೆಗೆದುಕೊಂಡಿದ್ದಾರೆ. ಈಗ ಮಹಿಳಾ ಉದ್ಯೋಗಿಯಿಂದ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಾಗಿದೆ.

ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ರಾಮಸಾಗರ ಗ್ರಾಮ ಪಂಚಾಯತಿ  ಸಿಬ್ಬಂದಿಯ ಕಿಸ್ಸಿಂಗ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಕೆಲಸ ಮಾಡುವ ಸ್ಥಳ ದೇವಸ್ಥಾನದಂತೆ ಎಂಬ ನಂಬಿಕೆಯಿದ್ದರೂ ಇಲ್ಲಿನ ಸಿಬ್ಬಂದಿ ಮಾತ್ರ ತಾವು ಕೆಲಸ ಮಾಡುವ ಗ್ರಾಮ ಪಂಚಾಯತಿ ಸಿಬ್ಬಂದಿ ಮಾತ್ರ ಕಾಮಚೇಷ್ಟೆ ಕುಟೀರ ಮಾಡಿಕೊಂಡಿದ್ದಾರೆ. ಪಂಚಾಯಿತಿ ಕಾರ್ಯಾಲಯದಲ್ಲಿಯೇ ಖುಲ್ಲಂ ಖುಲ್ಲಾ ಕಿಸ್‌ ಮಾಡುತ್ತಾ ಫೋಟೋಗಳನ್ನು ತೆಗೆದುಕೊಂಡಿದ್ದಾರೆ. ಈಗ ಈ ಫೋಟೋಗಳು ವೈರಲ್ ಆಗಿದ್ದು, ಮಹಿಳೆಯಿಂದ ಲೈಂಗಿಕ ಕಿರಿಕುಳದ ಕೇಸ್ ದಾಖಲಾಗಿದೆ.

Tap to resize

Latest Videos

ರಾಹುಕಾಲದ ಮೊದಲೇ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬಂದ ಮಾಜಿ ಸಚಿವ ಹೆಚ್.ಡಿ. ರೇವಣ್ಣ

ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ಹಾಗೂ ಮಹಿಳಾ ಉದ್ಯೋಗಿ ಜೊತೆಗಿರುವ ಖಾಸಗಿ ಫೋಟೋಗಳು ವೈರಲ್ ಆಗುತ್ತಿವೆ. ಇನ್ನು ಆರೋಪಿ ಅರ್ಜುನ್ ಹರಿಕೃಷ್ಣ ಗ್ರಾಮ ಪಂಚಾಯಿತಿ ಕಾರ್ಯಾರಲಯದ ಮೊದಲ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಯ ಬಳಿ ಹೋಗಿ ಕಾಮಚೇಷ್ಟೆ ಮಾಡಿದ್ದಾರಂತೆ. ಅದನ್ನು ವಿರೋಧ ಮಾಡಿದ್ದಕ್ಕೆ ನಿನ್ನ ಗಂಡನಿಗೆ ಗ್ರಾಮ ಪಂಚಾಯಿತಿಯಲ್ಲಿ ಜಲಗಾರ ಕೆಲಸ ಕೊಡಿಸುತ್ತೇನೆ. ಜೊತೆಗೆ, ನಿಮಗೆ ವಾಸಕ್ಕೆಂದು ಪಂಚಾಯಿತಿಯಿಂದ ಉಚಿತ ಸರ್ಕಾರಿ ಮನೆ ಕಟ್ಟಿಸಿಕೊಡುತ್ತೇನೆ ಎಂದು ಆಮಿಷ ಒಡ್ಡಿದ್ದಾನೆ. ಆಗ ತನಗೆ ಮುತ್ತಿಡುವುದಕ್ಕೆ ಬಲವಂತವಾಗಿ ಪ್ರೇರೇಪಿಸಿ ಅದನ್ನು ತನ್ನ ಮೊಬೈಲ್‌ನಲ್ಲಿ ಸೆಲ್ಫಿ ಫೋಟೋ ತೆಗೆದುಕೊಂಡಿದ್ದಾನೆ.

ನಂತರದ ದಿನಗಳಲ್ಲಿ ತನ್ನೊಂದಿಗೆ ನೀವು ಲೈಂಗಿಕವಾಗಿ ಸಹಕರಿಸಬೇಕು ಎಂದು ಬೆದರಿಕೆ ಹಾಕಿದ್ದಾನೆ. ಇದಕ್ಕೆ ಒಪ್ಪದಿದ್ದಾಗ ನಿಮ್ಮನ್ನು ಕೆಲಸದಿಂದ ತೆಗೆದು ಹಾಕುತ್ತೇನೆ. ಜೊತೆಗೆ, ನೀನು ಮುತ್ತು ಕೊಡುವುದು ಹಾಗೂ ನನ್ನೊಂದಿಗೆ ಖಾಸಗಿಯಾಗಿ ಕಳೆದ ಕ್ಷಣಗಳ ಫೋಟೋ ವೈರಲ್ ಮಾಡುತ್ತೇನೆ ಎಂದು ಬೆದರಿಸಿದ್ದಾನೆ. ಆತನ ಕಿರುಕುಳದಿಂದ ನನ್ನ ಸಂಸಾರ ಹಾಗೂ ಜೀವನಕ್ಕೆ ಮುಳುವಾಗಿದೆ. ಈಗ ಒಂದು ಹೆಜ್ಜೆ ಮುಂದೆ ಹೋಗಿ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

ಅಮೃತಧಾರೆ ನಟಿ ಛಾಯಾಸಿಂಗ್‌ಗೆ 66 ಗ್ರಾಂ ಗೋಲ್ಡ್, 159 ಗ್ರಾಂ ಬೆಳ್ಳಿ ಕೊಟ್ಟ ಬೆಂಗಳೂರು ಪೊಲೀಸ್ ಕಮಿಷನರ್

ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ಅವರ ವಿರುದ್ಧ ಲೈಂಕಿಗ ಕಿರುಕುಳ, ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಗೆ ಮುಜುಗರ, ಖಾಸಗಿ ಕ್ಷಣಗಳ ಫೋಟೋ ಹಂಚಿಕೆ ಹಾಗೂ ಬೆದರಿಕೆ ಒಡ್ಡಿದ್ದಾರೆಂದು ಕೋಲಾರ ಜಿಲ್ಲೆ ಬೇತಮಂಗಲ ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದಾರೆ. ಇನ್ನು ಬೇತಮಂಗಲ ಪೊಲೀಸರು ಆರೋಪಿ ಅರ್ಜುನ ಹರಿಕೃಷ್ಣನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಪಡೆದಿದ್ದಾರೆ. ಇನ್ನಷ್ಟು ಮಾಹಿತಿಗಳು ವಿಚಾರಣೆ ಬಳಿಕ ಹೊರ ಬರಬೇಕಿದೆ.

click me!