ಚಾಮರಾಜನಗರ (ಸೆ.06): ಕೊಳ್ಳೆಗಾಲ ಶಾಸಕ ಎನ್. ಮಹೇಶ್ ಅವರಿಗೆ ಪತ್ನಿ ವಿಯೋಗವಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಪತ್ನಿ ವಿಜಯಾ(66) ಭಾನುವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
undefined
'ಕಾಂಗ್ರೆಸ್ ಬಳಿ ಸುಳಿಯಲು ಬಿಡದ ಕಾರಣ ಬಿಜೆಪಿ ಸೇರಿದ ಮಹೇಶ್' : ರಾಜೀನಾಮೆಗೆ ಒತ್ತಡ
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವಿಜಯ ಅವರಿಗೆ ಕಳೆದ ಒಂದೂವರೆ ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ನಿಧನರಾದರು.
ವಿಜಯ ಅವರು ಬ್ಯಾಂಕ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸಿದ್ದು ಕಳೆದ ಕೆಲ ವರ್ಷಗಳ ಹಿಂದೆ ನಿವೃತ್ತರಾಗಿದ್ದರು.
ವಿಜಯ ಅವರು ಓರ್ವ ಪುತ್ರ ಹಾಗೂ ಪತಿಯನ್ನು ಅಗಲಿದ್ದಾರೆ.