ಕೊಪ್ಪಳ ಜಿಲ್ಲೆಯ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೊಪ್ಪಳ (ಜೂ.05): ರಾಜ್ಯದ ಬಡತನದ ಜಿಲ್ಲೆಯೆಂದು ಖ್ಯಾತಿಯಾದ ರಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದ ದುರ್ಘಟನೆ ಮಾಸುವ ಮುನ್ನವೇ ಈಗ ಕೊಪ್ಪಳ ಜಿಲ್ಲೆಯ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ ದುರ್ಘಟನೆ ಸೋಮವಾರ ನಡೆದಿದೆ. ಜೊತೆಗೆ, 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಾಯಚೂರಿನ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ನೆರೆಯ ಜಿಲ್ಲೆ ಕೊಪ್ಪಳದಲ್ಲಿ ಅಂತಹದ್ದೇ ಕಲುಷಿತ ನೀರು ಸೇವನೆಗೆ ಮಹಿಳೆ ಬಲಿಯಾಗಿರುವ ಘಟನೆ ನಡೆದಿದೆ. ಈ ಬಗ್ಗೆ ಸರ್ಕಾರದಿಂದ ಕಠಿಣ ಕ್ರಮವನ್ನು ಕೈಗೊಳ್ಳುತ್ತಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಇಂತಹ ಘಟನೆಗಳಿಗೆ ಕೊನೆಯೇ ಇಲ್ಲದಂತಾಗಿದೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಲುಷಿತ ನೀರು ಸೇವಿಸಿ ಓರ್ವ ವೃದ್ಧೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಹೊನ್ನಮ್ಮ ಶಿವಪ್ಪ (65) ಎಂದು ಗುರುತಿಸಲಾಗಿದೆ. ಇನ್ನು 10 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ.
undefined
ರಾಯಚೂರು: ಕಲುಷಿತ ನೀರು ಸೇವನೆಗೆ 5 ವರ್ಷದ ಮಗು ಸಾವು, 30ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥ!
ಸರ್ಕಾರಿ, ಖಾಸಗಿ ಆಸ್ಪತ್ರೆಗಳಿಗೆ ಅಸ್ವಸ್ಥರ ದಾಖಲು: ಕಲುಷಿತ ನೀರು ಸೇವನೆಯಿಂದ ಬಸರಿಹಾಳ ಗ್ರಾಮದ ಜನರು ಸುಮಾರು ಮೂರು ದಿನಗಳಿಂದ ವಾಂತಿ- ಬೇದಿಯಿಂದ ಬಳಲುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಗ್ರಾಮಸ್ಥರ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಸ್ವಸ್ಥರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಲುಷಿತ ನೀರು ಪೂರೈಕೆ ಮಾಡಿದ ಗ್ರಾಮ ಪಂಚಾಯತ್ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಬಾರದ ಜಿಲ್ಲಾಡಳಿತ: ಇನ್ನು ಮಹಿಳೆ ಸಾವಿನ ಬಳಿಕ ದಿನದಿಂದ ದಿನಕ್ಕೆ ಗ್ರಾಮದಲ್ಲಿ ಅಸ್ವಸ್ಥಗೊಳ್ಳುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಕಳೆದ ಮೂರು ದಿನಗಳ ಹಿಂದೆ ವೃದ್ಧೆ ಸಾವನ್ನಪ್ಪಿದ್ದರೂ, ಆರೋಗ್ಯ ಇಲಾಖೆಯಾಗಲೀ ಅಥವಾ ಜಿಲ್ಲಾಡಳಿತದ ಅಧಿಕಾರಿಗಳಲೀ ಇಲ್ಲಿಗೆ ಬಂದು ಪರಿಶೀಲನೆ ಮಾಡಿ ಸ್ಥಳೀಯ ಅಧಿಕಾರಿಗಳ ಮೇಲೆ ಕ್ರಮವಹಿಸಿಲ್ಲ. ಜೊತೆಗೆ, ಗ್ರಾಮಕ್ಕೆ ಶುದ್ಧ ಕುಡಿಯುವ ಪೂರೈಕೆಗೂ ವ್ಯವಸ್ಥೆ ಮಾಡಿಲ್ಲ. ಇನ್ನು ಅಸ್ವಸ್ಥಗೊಂಡವರ ಪ್ರಕರಣ ಹೆಚ್ಚಾಗುತ್ತಿದ್ದಂತೆ ತಾಲೂಕು ಆಡಳಿತ ಎಚ್ಚೆತ್ತುಕೊಂಡಿದ್ದು, ಸರ್ಕಾರಿ ಆಸ್ಪತ್ರೆಗಲ್ಲಿ ಅಸ್ವಸ್ಥಗೊಂಡವರ ಚಿಕಿತ್ಸೆಗೆ ವ್ಯವಸ್ಥೆ ಮಾಡುತ್ತಿದೆ. ಇನ್ನು ಅಸ್ವಸ್ಥರ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ ಪ್ರಕರಣ ತೀವ್ರ ಸ್ವರೂಪ ಬೆಳಕಿಗೆ ಬಂದಿದೆ. ಆದರೂ, ಆರೋಗ್ಯ ಇಲಾಖೆಯ ಗಮನಕ್ಕೆ ತಾರದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಲಾಗಿದೆ.
ಕಲುಷಿತ ನೀರು ಸೇವನೆಯಿಂದ ರಾಯಚೂರಲ್ಲಿ ಮತ್ತೆ 38 ಮಂದಿ ಅಸ್ವಸ್ಥ:
ರಾಯಚೂರು(ಮೇ.30): ಜಿಲ್ಲೆಯ ದೇವದುರ್ಗ ಸಮೀಪದ ಅರಕೇರಾ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಬಾಲಕನೊಬ್ಬ ಮೃತಪಟ್ಟ ಘಟನೆ ಮಾಸುವ ಮುನ್ನವೇ, ಇದೀಗ ಲಿಂಗಸುಗೂರು ತಾಲೂಕಿನಲ್ಲಿ ಇದೇ ರೀತಿಯ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 38ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಲಿಂಗಸಗೂರು ತಾಲೂಕಿನ ಗೊರೇಬಾಳ ಗ್ರಾಮದಲ್ಲಿ 30 ಹಾಗೂ ತಾಲೂಕಿನ ಜೂಲಗುಡ್ಡದಲ್ಲಿ 8 ಮಂದಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಗೋರೆಬಾಳ ಗ್ರಾಮಕ್ಕೆ ಜಿಲ್ಲಾ ಪಂಚಾಯ್ತಿ ಅಧಿಕಾರಿಗಳು ಭೇಟಿ ನೀಡಿದ್ದು, ಮೂರು ದಿನಗಳಲ್ಲಿ ವಿಷಪೂರಿತ ಆಹಾರ ಮತ್ತು ಕಲುಷಿತ ಕುಡಿಯುವ ನೀರು ಸೇವನೆಯಿಂದ ಸಂಭವಿಸಿದೆ ಎನ್ನಲಾದ ಪ್ರಕರಣಗಳ ಕುರಿತು ಪರೀಶೀಲನೆ ನಡೆಸಲಾಗಿದೆ.
ಕಲುಷಿತ ನೀರು: ರಾಯಚೂರಲ್ಲಿ ಮತ್ತೆ 38 ಮಂದಿ ಅಸ್ವಸ್ಥ
5 ವರ್ಷದ ಮಗು ಸಾವು: ಗ್ರಾಮದಲ್ಲಿ ತಾತ್ಕಾಲಿಕ ಆರೋಗ್ಯ ಚಿಕಿತ್ಸಾ ಕೇಂದ್ರವನ್ನೂ ಸ್ಥಾಪಿಸಲಾಗಿದೆ. ಈಗಾಗಲೇ 10 ರೋಗಿಗಳನ್ನು ಲಿಂಗಸುಗೂರಿನ ಸಾರ್ವಜನಿಕ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಮೇ.26 ರಂದು ನಡೆದಿತ್ತು. ಕಲುಷಿತ ನೀರು ಸೇವಿಸಿ 5 ವರ್ಷದ ಮಗು ಸಾವನ್ನಪ್ಪಿತ್ತು.