ಸ್ವಾತಂತ್ರ್ಯದ ‘ಅಮೃತ ಗಳಿಗೆ’ಗೆ ಸಾಕ್ಷಿಯಾದ ಕೊಪ್ಪಳ

By Suvarna NewsFirst Published Aug 15, 2022, 10:16 PM IST
Highlights

ಕೊಪ್ಪಳ  ಜಿಲ್ಲಾದ್ಯಂತ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ದೇಶಾಭಿಮಾನ ಬೆಳೆಸಿಕೊಳ್ಳಿ ಎಂದ ಸಚಿವೆ ಶಶಿಕಲಾ ಜೊಲ್ಲೆ, 

 ಕೊಪ್ಪಳ (ಆ.15): ದೇಶದ ಅಭಿವೃದ್ಧಿಗಾಗಿ ಯುವಕರು ಪ್ರಾಮಾಣಿಕ ಮನೋಭಾವ ಹಾಗೂ ದೇಶಾಭಿಮಾನದಿಂದ ಪ್ರಗತಿಯೆಡೆಗೆ ಹೆಜ್ಜೆ ಹಾಕಬೇಕು ಮತ್ತು ಪ್ರತಿಯೊಬ್ಬರೂ ದೇಶಾಭಿಮಾನ ಮೈಗೂಡಿಸಿಕೊಳ್ಳಬೇಕು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಸೋಮವಾರ ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಸ್ವಾತಂತ್ರ್ಯ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗದೆ, ನಮಗೆ ಸ್ವಾತಂತ್ರ್ಯ ದೊರಕಿಸಿಕೊಡಲು ಬಲಿದಾನ ಮಾಡಿದ ಮಹನೀಯರಂತೆ ಯುವಕರು ದೇಶಾಭಿಮಾನ ಬೆಳೆಸಿಕೊಳ್ಳಬೇಕು. ಇಂದಿನ ಮಕ್ಕಳೇ ಭವಿಷ್ಯದ ಪ್ರಜೆಗಳಾಗಿರುವುದರಿಂದ ಮಕ್ಕಳಲ್ಲಿ ಈಗಿಂದಲೇ ರಾಷ್ಟ್ರದ ಬಗ್ಗೆ ಅಭಿಮಾನ ಮೂಡಿಸುವ ಕಾರ್ಯವನ್ನು ಶೈಕ್ಷಣಿಕ ಸಂಸ್ಥೆಗಳಲ್ಲಿ ಹಾಗೂ ಸಮಾಜದಲ್ಲಿ ಅಳವಡಿಸಬೇಕು. ಪ್ರತಿ ಕಾರ್ಯದಲ್ಲೂ ನಿಷ್ಠೆ ಹಾಗೂ ಪ್ರಾಮಾಣಿಕತೆ ಇರಬೇಕು. ಮುಂದಿನ ದಿನಗಳಲ್ಲಿ ಎಂಥದ್ದೇ ಸಮಸ್ಯೆ, ಸಂಕಷ್ಟಎದುರಾದರೂ ಧೈರ್ಯವಾಗಿ ಎದುರಿಸುವ ಗಟ್ಟಿತನವನ್ನು ಬೆಳೆಸಿಕೊಳ್ಳಬೇಕು. ಯುವಕರು ರಾಷ್ಟ್ರಪ್ರೇಮದಿಂದ ಅಭಿವೃದ್ಧಿಯೆಡೆಗೆ ಸಾಗಬೇಕು. ಸಮೃದ್ಧ ಭಾರತದ ಗುರಿ ನಮ್ಮದಾಗಬೇಕು ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಇಲಾಖೆಗಳ ಮುಖಾಂತರ ಹಲವಾರು ಅಭಿವೃದ್ಧಿ ಪರ ಯೋಜನೆಗಳನ್ನು ಜಾರಿಗೆ ತಂದಿದೆ. ಆರ್ಥಿಕ ಚಟುವಟಿಕೆಗಳಿಗೆ ಪುನಶ್ಚೇತನ ನೀಡಿವೆ. ಜಿಲ್ಲೆಯ ಅಂಜನಾದ್ರಿ ಬೆಟ್ಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರ .120 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಅದರಂತೆ ಮುಜರಾಯಿ ಇಲಾಖೆಯಿಂದ ಪ್ರತಿವರ್ಷ ಕಾಶಿ ಯಾತ್ರೆಗೆ ತೆರಳುವ ಕರ್ನಾಟಕದ 30 ಸಾವಿರ ಯಾತ್ರಾರ್ಥಿಗಳಿಗೆ .5000 ಸಬ್ಸಿಡಿ ನೀಡಲಾಗುತ್ತಿದೆ ಎಂದರು.

ಪಥಸಂಚಲನ, ಸನ್ಮಾನ: ಸ್ವಾತಂತ್ರ್ಯೋತ್ಸವದ ದಿನಾಚರಣೆ ಅಂಗವಾಗಿ ಪೊಲೀಸ್‌, ಎನ್‌ಸಿಸಿ, ಸೇವಾದಳ, ಭಾರತ ಸ್ಕೌಟ್ಸ್‌ ಗೈv್ಸ…, ಅರಣ್ಯ ಇಲಾಖೆ ಹಾಗೂ ಗೃಹರಕ್ಷಕ ದಳ ಸೇರಿದಂತೆ ಒಟ್ಟು 16 ತಂಡಗಳಿಂದ ಪಥಸಂಚಲನ, ಗೌರವ ರಕ್ಷೆ ಸ್ವೀಕಾರ ಕಾರ್ಯಕ್ರಮ ನಡೆಯಿತು. ಜ್ಞಾನಬಂಧು ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳು ಹಾಗೂ ನಿವೇದಿತಾ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ಪಥಸಂಚಲನದಲ್ಲಿ ಭಾಗವಹಿಸಿದ್ದ ಕಾಳಿದಾಸ ಪ್ರೌಢಶಾಲೆಯ ಸೇವಾದಳ ತಂಡಕ್ಕೆ ಪ್ರಥಮ ಬಹುಮಾನ, ಎಸ್‌ಎಫ್‌ಎಸ್‌ ಶಾಲೆಯ ಗೈಡ್‌್ಸ ತಂಡಕ್ಕೆ ದ್ವಿತೀಯ ಬಹುಮಾನ ಹಾಗೂ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ತೃತೀಯ ಬಹುಮಾನ ನೀಡಲಾಯಿತು. ಸ್ವಾತಂತ್ರ್ಯ ಹೋರಾಟಗಾರರಾದ ಸುಮಂತರಾವ್‌ ಪಟವಾರಿ, ಹನುಮಂತಗೌಡ ಪಿ. ಪಾಟೀಲ, ಕೃಷ್ಣಾಚಾರ ಹಾಗೂ ಗಿರಿಜಮ್ಮ ಗುರುಲಿಂಗಯ್ಯಸ್ವಾಮಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಸಚಿವರು ಸನ್ಮಾನಿಸಿದರು.

ಎಸ್‌ಎಸ್‌ಎಲ್ಸಿ‌ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಜಿಲ್ಲೆಯ ನಾಗರತ್ನ ರೇವಣಸಿದ್ದಪ್ಪ ಅಂಗಡಿ, ಗುರುಲಿಂಗಮ್ಮ ರಾಮಣ್ಣ ಗದ್ದಿ, ಮಹೇಶ್ವರಿ ಶರಣಪ್ಪ ಟೆಂಗುಂಟಿ, ನೀಲಮ್ಮ ರಮೇಶ ಶೆಟ್ಟರ್‌, ಶಿಲ್ಪ ಹನುಮಪ್ಪ ವಡಗೇರಿ, ಸ್ವಾತಿ ಮಾಣಿಕ್‌ ಬೊಮ್ಮಾನಿ ಅವರಿಗೆ ಪ್ರೋತ್ಸಾಹದಾಯಕವಾಗಿ ಲ್ಯಾಪ್‌ಟಾಪ್‌ ವಿತರಿಸಲಾಯಿತು.

ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ನೀಡಿದ ಕಾರಟಗಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಶಕುಂತಲಾ ಪಾಟೀಲ್, ಗಂಗಾವತಿಯ ಮಲ್ಲಿಕಾರ್ಜುನ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ನಿರ್ದೇಶಕ ಡಾ. ನಾಗರಾಜ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ವ್‌ ಬೆಂಗಳೂರು ಇವರಿಂದ ಆಯುಷ್ಮಾನ್‌ ಭಾರತ್‌ ಪ್ರಧಾನ ಮಂತ್ರಿ ಜನ ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ರಮಾಣಪತ್ರಗಳನ್ನು ನೀಡಿ ಸನ್ಮಾನಿಸಲಾಯಿತು.

ಅಧ್ಯಕ್ಷತೆಯನ್ನು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್‌ ಅವರು ವಹಿಸಿದ್ದರು. ಸಂಸದ ಕರಡಿ ಸಂಗಣ್ಣ, ವಿಧಾನಪರಿಷತ್‌ ಸದಸ್ಯೆ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷೆ ಶಿವಗಂಗಾ ಭೂಮಕ್ಕನವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್‌. ಪಾಟೀಲ…, ಜಿಲ್ಲಾಧಿಕಾರಿ ಎಂ. ಸುಂದರೇಶ್‌ ಬಾಬು, ಜಿಪಂ ಸಿಇಒ ಬಿ. ಗೌಜಿಯಾ ತರನ್ನುಮ…, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ, ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ತಹಸೀಲ್ದಾರ್‌ ವಿಠ್ಠಲ್‌ ಚೌಗಲಾ ಇತರರು ಇದ್ದರು.

ಸಚಿವರ ಅನುಪಸ್ಥಿಯತಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಚಿಕ್ಕಮಗಳೂರು ಜಿಲ್ಲಾಧಿಕಾರಿ

ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆ: ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನದ ಅಂಗವಾಗಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರು ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಧ್ವಜ ಅವರೋಹಣ ಬಳಿಕ ಏನು ಮಾಡಬೇಕು, ಜಮಖಂಡಿ ನಗರಸಭೆ ವಿಡಿಯೋ ಸಂದೇಶ

ಸಂಸದ ಕರಡಿ ಸಂಗಣ್ಣ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ವಿಧಾನಪರಿಷತ್‌ ಸದಸ್ಯೆ ಹೇಮಲತಾ ನಾಯಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ್‌ ಎಸ್‌. ಪಾಟೀಲ…, ಜಿಲ್ಲಾಧಿಕಾರಿ ಎಂ. ಸುಂದರೇಶ್‌ ಬಾಬು, ಜಿಪಂ ಸಿಇಒ ಬಿ. ¶ೌಜಿಯಾ ತರನ್ನುಮ…, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ, ಸಹಾಯಕ ಆಯುಕ್ತ ಬಸವಣಪ್ಪ ಕಲಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೆಶ ಮರಬನಳ್ಳಿ ಇತರರು ಇದ್ದರು.

click me!