ವಿಷ ಪ್ರಸಾದ: ಮೃತರ ಕುಟುಂಬಕ್ಕೆ ಸಹಾಯ ಹಸ್ತ ಚಾಚಿದ ಕಾಂಗ್ರೆಸ್‌

By Web DeskFirst Published Dec 15, 2018, 3:09 PM IST
Highlights

ಚಾಮರಾಜನಗರದ ಸುಳ್ವಾಡಿ ಗ್ರಾಮದ ಕಿಚ್ಚಗತ್ತಿ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಮೃತರಾದ ಕುಟುಂಬಕ್ಕೆ ಕರ್ನಾಟಕ ರಾಜ್ಯ ಕಾಂಗ್ರೆಸ್‌ ಸಹಾಯ ಹಸ್ತ ಚಾಚಿದೆ.

ಮೈಸೂರು, (ಡಿ.15): ಚಾಮರಾಜನಗರದ ಸುಳ್ವಾಡಿ ಗ್ರಾಮದ ಕಿಚ್ಚಗತ್ತಿ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಮೃತರಾದ ಕುಟುಂಬಕ್ಕೆ ರಾಜ್ಯ ಕಾಂಗ್ರೆಸ್‌ ವತಿಯಿಂದ ತಲಾ ಒಂದು ಲಕ್ಷ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ.

 ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರು ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಮಾರಮ್ಮನ ಪ್ರಸಾದಕ್ಕೆ 10 ಮಂದಿ ಬಲಿ: ವಿಷವಿಕ್ಕಿದ ಇಬ್ಬರ ಬಂಧನ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್,  ವೈದ್ಯರೊಂದಿಗೆ ಮಾತನಾಡಿದ್ದೇವೆ, ಸರ್ಕಾರವು ಪರಿಹಾರ ಘೋಷಿಸಿದೆ ಜೊತೆಗೆ ಕೆಪಿಸಿಸಿ ಸಹ ಪರಿಹಾರ ನೀಡುತ್ತದೆ ಎಂದರು.

ಇದೇ ಸಿದ್ದರಾಮಯ್ಯ ಮಾತನಾಡಿ, ಇದು ಕೇವಲ ಫುಡ್‌ ಪಾಯ್ಸನ್‌ನಿಂದ ಆಗಿರುವ ಘಟನೆ ಅಲ್ಲವೆಂದು ವೈದ್ಯರು ಹೇಳುತ್ತಿದ್ದಾರೆ. 

ಯಾರೋ ಪಾತಕಿಗಳು ಉದ್ದೇಶಪೂರ್ವಾಕವಾಗಿ ವಿಷ ಬೆರೆಸಿರುವ ಅನುಮಾನ ಇದೆ, ಸರ್ಕಾರ ಈಗಾಗಲೆ ತನಿಖೆ ನಡೆಸುತ್ತಿದೆ ಎಂದು ಅವರು ಹೇಳಿದರು.

ನಾನು ಕೂಡ ಸಿಎಂ ಬಳಿ ಮಾತನಾಡಿ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸುತ್ತೇನೆ. ಈ ಕೃತ್ಯ ಎಸಗಿದ ಪಾತಕಿಗೆ ಕಠಿಣ ಶಿಕ್ಷೆ ಆಗಲೇ ಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದರು.

ಈಗಾಗಲೇ ಮೃತ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಘೋಷಿಸಿದ್ದು, ಆಸ್ಪತ್ರೆ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.    
 

click me!