ಗುಣಮುಖರಾಗಿದ್ದ ಡಿಕೆಶಿಗೆ ಮತ್ತೆ ಜ್ವರ, ಆಸ್ಪತ್ರೆಗೆ ದಾಖಲು

Kannadaprabha News   | Asianet News
Published : Sep 04, 2020, 10:52 AM ISTUpdated : Sep 04, 2020, 11:00 AM IST
ಗುಣಮುಖರಾಗಿದ್ದ ಡಿಕೆಶಿಗೆ ಮತ್ತೆ ಜ್ವರ, ಆಸ್ಪತ್ರೆಗೆ ದಾಖಲು

ಸಾರಾಂಶ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಮತ್ತೆ ಜ್ವರ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರು (ಸೆ.01):  ಕೊರೋನಾ ಸೋಂಕಿನಿಂದ ಗುಣಮುಖರಾಗಿ ಇತ್ತೀಚೆÜಗಷ್ಟೇ ಮನೆಗೆ ವಾಪಸಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಮತ್ತೆ ತೀವ್ರ ಜ್ವರ ಕಾಣಿಸಿಕೊಂಡಿದೆ.

 ಮತ್ತೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಈ ಮೊದಲು ಆಗಸ್ಟ್‌ 25 ರಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಸೋಂಕು ದೃಢಪಟ್ಟಿತ್ತು. ಇದರಿಂದಾಗಿ ರಾಜಾಜಿನಗರದ ಸುಗುಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. 

ಕನಕಪುರ ಬಂಡೆ ಕಣ್ಣು ಸಿಎಂ ಕುರ್ಚಿ ಮ್ಯಾಲೆ..! ..

ಬಳಿಕ ಇತ್ತೀಚೆಗಷ್ಟೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಅವರು ಮನೆಯಲ್ಲಿ ಸ್ವಯಂ ಪ್ರತ್ಯೇಕವಾಗಿ ವಿಶ್ರಾಂತಿಯಲ್ಲಿದ್ದರು. ಈ ನಡುವೆ ಬುಧವಾರ ಮತ್ತೆ ಜ್ವರ ಕಾಣಿಸಿಕೊಂಡಿದೆ. 

ಜ್ವರ ತೀವ್ರವಾಗಿದ್ದ ಹಿನ್ನೆಲೆಯಲ್ಲಿ ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೋನಾ ಸೋಂಕು ಗುಣಮುಖವಾದ ಬಳಿಕ ಜ್ವರ ಏಕೆ ಬಂದು ಎಂಬ ಬಗ್ಗೆ ಪರಿಶೀಲಿಸಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್‌ ಅವರಿಗೆ ಜ್ವರ ಮಾತ್ರ ಕಾಣಿಸಿಕೊಂಡಿದ್ದು ಬೇರೆ ಸಮಸ್ಯೆ ಇಲ್ಲ ಎಂದು ಮೂಲಗಳು ತಿಳಿಸಿವೆ.

PREV
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ರಹಸ್ಯ ರಿವೀಲ್: ಪೊಲೀಸರ ಬಲೆಗೆ ಬಿದ್ದ ಮೂವರು!