ಶೇ.3ರಷ್ಟು ಮೀಸಲಾತಿ ಪಡೆಯಲು ಒಕ್ಕಲಿಗರೇನು ಭಿಕ್ಷುಕರಲ್ಲ: ಡಿಕೆಶಿ

By Kannadaprabha News  |  First Published Dec 27, 2022, 12:17 PM IST

ಒಕ್ಕಲಿಗರಾರೂ ಭಿಕ್ಷುಕರಲ್ಲ. ಅವರು ಒಕ್ಕಲುತನ ಮಾಡಿಕೊಂಡು, ಅನ್ನದಾತರಾಗಿದ್ದಾರೆ. ಒಕ್ಕಲುತನ ಮಾಡುವವರು ಶ್ರಮಪಟ್ಟು ಸಮಾಜಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದಾರೆ. ಶೇ.3ರಷ್ಟು ಮೀಸಲಿಗೆ ಯಾರೂ ಭಿಕ್ಷೆ ಬೇಡುತ್ತಿಲ್ಲ: ಡಿ.ಕೆ. ಶಿವಕುಮಾರ್‌ 


ಹುಬ್ಬಳ್ಳಿ(ಡಿ.27): ಶೇ.3ರಷ್ಟು ಮೀಸಲಾತಿ ಪಡೆಯಲು ಒಕ್ಕಲಿಗರೇನು ಭಿಕ್ಷುಕರಲ್ಲ. ಜನಸಂಖ್ಯೆಗೆ ಅನುಗುಣವಾಗಿ ಈ ಸಮುದಾಯಕ್ಕೆ ಶೇ.12ರಷ್ಟು ಮೀಸಲಾತಿ ಸಿಗಬೇಕು. ಬೇರೆ ಸಮುದಾಯದವರು ತಮ್ಮ ಹಕ್ಕು ಕೇಳುವುದರಲ್ಲಿ ತಪ್ಪಿಲ್ಲ. ನಾವು ಅದನ್ನು ವಿರೋಧಿಸುವುದೂ ಇಲ್ಲ. ಆದರೆ ಒಕ್ಕಲಿಗರಿಗೆ ಸಿಗಬೇಕಾದ ಹಕ್ಕನ್ನು ನೀಡುವಂತೆ ನಾವು ಆಗ್ರಹಿಸುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಒಕ್ಕಲಿಗರಾರೂ ಭಿಕ್ಷುಕರಲ್ಲ. ಅವರು ಒಕ್ಕಲುತನ ಮಾಡಿಕೊಂಡು, ಅನ್ನದಾತರಾಗಿದ್ದಾರೆ. ಒಕ್ಕಲುತನ ಮಾಡುವವರು ಶ್ರಮಪಟ್ಟು ಸಮಾಜಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದಾರೆ. ಶೇ.3ರಷ್ಟು ಮೀಸಲಿಗೆ ಯಾರೂ ಭಿಕ್ಷೆ ಬೇಡುತ್ತಿಲ್ಲ. ನಮ್ಮ ಸಮುದಾಯದ ಸ್ವಾಮೀಜಿಗಳ ನೇತೃತ್ವದಲ್ಲಿ ಕಂದಾಯ ಸಚಿವ ಅಶೋಕ್‌ಗೆ ಮನವಿ ಸಲ್ಲಿಸಿದ್ದೇವೆ. ಸಮುದಾಯದ ಜನಸಂಖ್ಯೆ ಶೇ.15-16 ರಷ್ಟು ಇದ್ದರೂ ನಾವು ಶೇ.12ರಷ್ಟು ಮೀಸಲಾತಿ ಕೇಳಿದ್ದೇವೆ. ಬೇರೆಯವರ ಮೀಸಲಾತಿ ಕಿತ್ತುಕೊಂಡು ನಮಗೆ ಮೀಸಲಾತಿ ನೀಡುವುದು ಬೇಡ. ಬೇರೆಯವರಿಗೆ ಅನ್ಯಾಯ ಮಾಡಲು ನಾವು ಬಯಸುವುದಿಲ್ಲ ಎಂದರು.

Tap to resize

Latest Videos

ಸಂಪುಟ, ಮೀಸಲಾತಿ: ಸಿಎಂ, ಅಮಿತ್‌ ಶಾ 2.5 ತಾಸು ಚರ್ಚೆ

ಅಲ್ಪಸಂಖ್ಯಾತರು, ವೀರಶೈವರು, ಪಂಚಮಸಾಲಿಗಳು, ಬ್ರಾಹ್ಮಣರು, ಪರಿಶಿಷ್ಟ ಜಾತಿ ಹಾಗೂ ಪಂಗಡ, ಹಿಂದುಳಿದ ವರ್ಗಗಳಿಗೆ ಏನು ಸಿಗಬೇಕೊ ಸಿಗಲಿ. ಅದಕ್ಕೆ ನಮ್ಮ ತಕರಾರಿಲ್ಲ. ನಮ್ಮ ಸಮಾಜದ ಜನಸಂಖ್ಯೆ ಆಧಾರದಲ್ಲಿ ನಾವು ಶೇ.12ರಷ್ಟು ಕೇಳಿದ್ದು, ಸಚಿವರು ಸರ್ಕಾರಕ್ಕೆ ತಿಳಿಸಿ ಅದನ್ನು ನೀಡುವುದಾಗಿ ಹೇಳಿದ್ದರು. ಈಗ ಶೇ.3ರಷ್ಟುಮೀಸಲಾತಿ ಪಡೆಯಲು ನಾವೇನು ಭಿಕ್ಷುಕರಲ್ಲ. ಶೇ.12ರಷ್ಟುಮೀಸಲಾತಿ ನಮ್ಮ ಹಕ್ಕು ಅದಕ್ಕೆ ನಾವು ಸರ್ಕಾರವನ್ನು ಆಗ್ರಹಿಸುತ್ತೇವೆ ಎಂದರು.

ಅಧಿಕಾರಿಗಳ ಜತೆಗೆ ಚರ್ಚಿಸಿದ್ದು ಯಾಕೆ?: ಡಿಕೆಶಿ

ಅವಧಿಪೂರ್ವ ಚುನಾವಣೆಯನ್ನು ಬಿಜೆಪಿ ತಳ್ಳಿಹಾಕಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಹಾಗಿದ್ದರೆ ಈ ವಿಚಾರವನ್ನು ಬಿಜೆಪಿಯವರು ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದು ಯಾಕೆ? ಅಧಿಕಾರಿಗಳ ಜತೆ ಅವರು ಏನು ಚರ್ಚೆ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಸ್ಥಳೀಯ ನಾಯಕರಿಗೆ ಡಿ.31ರ ಒಳಗಾಗಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಸಭೆ ಮುಕ್ತಾಯಗೊಳಿಸುವಂತೆ ಹೇಳಿದ್ದೇವೆ. ನಂತರ ಪರಿಷ್ಕೃತ ಪಟ್ಟಿನಮ್ಮ ಕೈ ಸೇರಲಿದೆ. ನಂತರ ಚುನಾವಣಾ ಸಮಿತಿ ಸಭೆ ಮಾಡಿ ಚರ್ಚೆ ಮಾಡಲಾಗುವುದು. ಅಭ್ಯರ್ಥಿಗಳ ಪಟ್ಟಿ ಪ್ರಕಟಕ್ಕೆ ಜ.15ರ ಗುರಿ ಇಟ್ಟುಕೊಂಡಿದ್ದು, ಅಷ್ಟರೊಳಗೆ ಅಭ್ಯರ್ಥಿ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.

click me!