ನಾಲ್ಕೈದು ದಿನದಲ್ಲಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ

Kannadaprabha News   | Asianet News
Published : Jan 16, 2020, 07:40 AM IST
ನಾಲ್ಕೈದು ದಿನದಲ್ಲಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ

ಸಾರಾಂಶ

ಸಂಕ್ರಾಂತಿ ಹಬ್ಬ ಕಳೆದು ನಾಲ್ಕೈದು ದಿವಸದ ಬಳಿಕ ಕೆಪಿಸಿಸಿ ಅಧ್ಯಕ್ಷರ ನೇಮಕವಾಗುವ ಸುಳಿವನ್ನು ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನೀಡಿದ್ದಾರೆ.

ತುಮಕೂರು(ಜ.16): ಸಂಕ್ರಾಂತಿ ಹಬ್ಬ ಕಳೆದು ನಾಲ್ಕೈದು ದಿವಸದ ಬಳಿಕ ಕೆಪಿಸಿಸಿ ಅಧ್ಯಕ್ಷರ ನೇಮಕವಾಗುವ ಸುಳಿವನ್ನು ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಹಾಗೂ ಕೆಪಿಸಿಸಿ ಕಾರಾರ‍ಯಧ್ಯಕ್ಷ ಈಶ್ವರ ಖಂಡ್ರೆ ನೀಡಿದ್ದಾರೆ.

ಅವರು ಬುಧವಾರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂ.ಡಾ.ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ಭೇಟಿ ನೀಡಿ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

ಅಂಬಾದೇವಿ ರಥೋತ್ಸವಕ್ಕೆ ಸ್ವಾಗತ ಕೋರುವವರು 'ಶ್ರೀಮತಿ ಸನ್ನಿ ಲಿಯೋನ್ ಯುವಕ ಮಂಡಳಿ'

ಕಾಂಗ್ರೆಸ್‌ ಹೈಕಮಾಂಡ್‌ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಮಾಹಿತಿಯಿದ್ದು, ನಾಲ್ಕೈದು ದಿವಸದಲ್ಲಿ ಒಂದು ಒಳ್ಳೆ ತೀರ್ಮಾನವಾಗುತ್ತದೆ. ಪಕ್ಷದ ಹೈಕಮಾಂಡ್‌ ಯಾರನ್ನೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೇಮಿಸಿದರೂ ಅದನ್ನು ನಾವೆಲ್ಲರೂ ಒಪ್ಪಿಕೊಳ್ಳುವುದಾಗಿ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷದ ಪ್ರಬಲ ನಾಯಕರು. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಪಕ್ಷದ ಹಿತದೃಷ್ಟಿಯಿಂದ ಪ್ರಸ್ತಾವನೆ ಸಲ್ಲಿಸುತ್ತಾರೆ. ಒಂದು ವೇಳೆ ತಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸುವುದಾಗಿ ತಿಳಿಸಿದ್ದಾರೆ. ತಮ್ಮ 57ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವೈಕ್ಯ ಶ್ರೀಗಳ ಗದ್ದುಗೆಗೆ ದರ್ಶನ ಮಾಡಿದರು.

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!