ಬಿಎಸ್‌ವೈ ಸರ್ಕಾರಕ್ಕೆ ಏಳು ವಿಷಯಗಳ ಸವಾಲು ಹಾಕಿದ ಜಾರಕಿಹೊಳಿ

By Kannadaprabha NewsFirst Published Sep 21, 2020, 10:04 AM IST
Highlights

ಸರ್ಕಾರಕ್ಕಿಂದು ಏಳು ವಿಷಯಗಳ ಸವಾಲು| ಅಧಿವೇಶನದಲ್ಲಿ ಏಳು ಗಂಭೀರ ವಿಷಯಗಳ ಬಗ್ಗೆ ಚರ್ಚೆ ನಡೆಸಲು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ| ಕಾಂಗ್ರೆಸ್‌ ಪಕ್ಷದಲ್ಲಿ ಎರಡು ಬಣಗಳಿರುವುದು ಗಮನಕ್ಕೆ ಬಂದಿದೆ| 

ಅಳ್ನಾವರ(ಸೆ.21): ರಾಜ್ಯ ವಿಧಾನ ಮಂಡಲಗಳ ಅಧಿವೇಶನದಲ್ಲಿ ಆಡಳಿತರೂಢ ಬಿಜೆಪಿಗೆ ಏಳು ಗಂಭೀರ ವಿಷಯಗಳನ್ನು ಮುಂದಿಡಲು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಅಳ್ನಾವರ ತಾಲೂಕಿನ ಕಾಶೆನಟ್ಟಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಿವೃಷ್ಟಿ ಪರಿಹಾರದಲ್ಲಿ ಆಗಿರುವ ಲೋಪದೋಷ, ಕೋವಿಡ್‌ ಹೆಸರಲ್ಲಿ ಭ್ರಷ್ಟಾಚಾರ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಸೇರಿದಂತೆ ಪ್ರಮುಖ ವಿಷಯಗಳನ್ನು ಗಂಭೀರವಾಗಿ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ. 

‘ಬೆಂಗಳೂರು ಅಭಿವೃದ್ಧಿ ಕುರಿತು ಮೋದಿಗಿರುವ ಕಲ್ಪನೆ ಅದ್ಭುತ’

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕಲಘಟಗಿ ಮತಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ಎರಡು ಬಣಗಳಿರುವುದು ಗಮನಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಹೈಕಮಾಂಡ್‌ ಇದರ ಬಗ್ಗೆ ಚರ್ಚಿಸಿ ಭಿನ್ನಮತದ ಸಮಸ್ಯೆ ಪರಿಹರಿಸಲಿದೆ. ತಳಮಟ್ಟದಲ್ಲಿ ಸತ್ಯಾಸತ್ಯತೆ ಪರಿಶೀಲಿಸಿ ನಾಯಕತ್ವದ ಕೊರತೆ ನೀಗಿಸಲು ಪ್ರಯತ್ನಿಸಲಾಗುತ್ತದೆ. ಕೆಳಮಟ್ಟದಲ್ಲಿ ಕಾರ್ಯಕರ್ತರಲ್ಲಿ ಬಲ ತುಂಬುವ ಕೆಲಸವನ್ನು ಪಕ್ಷ ಮಾಡಲಿದೆ ಎಂದು ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. 
 

click me!