ಮೈಸೂರು: JDS ಮುಖಂಡ BJPಗೆ ಸೇರ್ಪಡೆ

By Kannadaprabha News  |  First Published Dec 24, 2019, 8:42 AM IST

ಜಡಿಎಸ್‌ ಮುಖಂಡರು ಬಿಜೆಪಿ ಸೇರುವ ಬಗ್ಗೆ ಮಾತುಗಳು ಕೇಳಿ ಬರುತ್ತಿರುವ ನಡುವೆಯೇ ಮೈಸೂರಿನ ಕೆ.ಆರ್‌. ನಗರದ ಜೆಡಿಎಸ್‌ ಅಧ್ಯಕ್ಷ ಬಿಜೆಪಿ ಸೇರ್ಪಡೆಯಾಗಿದ್ದಾರೆ. 12 ವರ್ಷಗಳಿಂದ ಜೆಡಿಎಸ್‌ನಲ್ಲಿದ್ದ ಡಿ. ಸಿ. ಮಂಜುನಾಥ್‌ ಜೆಡಿಎಸ್‌ ತೊರೆದು ಬಿಜೆಪಿ ಸೇರಿದ್ದಾರೆ.


ಮೈಸೂರು(ಡಿ.24): ಜಡಿಎಸ್‌ ಮುಖಂಡರು ಬಿಜೆಪಿ ಸೇರುವ ಬಗ್ಗೆ ಮಾತುಗಳು ಕೇಳಿ ಬರುತ್ತಿರುವ ನಡುವೆಯೇ ಮೈಸೂರಿನ ಕೆ.ಆರ್‌. ನಗರದ ಜೆಡಿಎಸ್‌ ಅಧ್ಯಕ್ಷ ಬಿಜೆಪಿ ಸೇರ್ಪಡೆಯಾಗಿದ್ದಾರೆ. 12 ವರ್ಷಗಳಿಂದ ಜೆಡಿಎಸ್‌ನಲ್ಲಿದ್ದ ಡಿ. ಸಿ. ಮಂಜುನಾಥ್‌ ಜೆಡಿಎಸ್‌ ತೊರೆದು ಬಿಜೆಪಿ ಸೇರಿದ್ದಾರೆ.

ಕೆ.ಆರ್‌. ನಗರ ಜೆಡಿಎಸ್‌ ಅಧ್ಯಕ್ಷ ಡಿ.ಸಿ. ಮಂಜುನಾಥ್‌ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಳೆದ 12 ವರ್ಷಗಳಿಂದ ಕೆ.ಆರ್‌. ನಗರ ಪಟ್ಟಣ ಘಟಕದ ಜೆಡಿಎಸ್‌ ಅಧ್ಯಕ್ಷರಾಗಿದ್ದ ಅಖಿಲ ಭಾರತ ವೀರಶೈವ ಮಹಾಸಭಾದ ನಗರ ಘಟಕದ ಮಾಜಿ ಅಧ್ಯಕ್ಷರೂ ಆಗಿರುವ ಡಿ.ಸಿ. ಮಂಜುನಾಥ್‌ ಪಕ್ಷ ತೊರೆದಿರುವುದ ಜೆಡಿಎಸ್‌ಗೆ ಹಿನ್ನಡೆಯಾಗಿದೆ.

Latest Videos

undefined

ಮಂಗಳೂರು ಗಲಭೆ: ವಿಡಿಯೋ ಇದ್ರೆ ಕಳಿಸಿ ಎಂದ ಕಮಿಷನರ್ ಹರ್ಷ

ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆಯುವ ಮೂಲಕ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿರುವ ಅವರು ಶೀಘ್ರದಲ್ಲಿಯೆ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಅವರ ಸಮ್ಮುಖದಲ್ಲಿ ತಮ್ಮ ನೂರಾರು ಬೆಂಬಲಿಗರೊಂದಿಗೆ ಬಿಜೆಪಿ ಸೇರುವರು.

ಜೆಡಿಎಸ್‌ ತೊರೆದು ಬಿಜೆಪಿ ಸೇರ್ಪಡೆಯಾದ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಸಿ. ಮಂಜುನಾಥ್‌, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಭಿವೃದ್ಧಿ ಹಾಗೂ ಯುವ ನಾಯಕ ಬಿ.ವೈ. ವಿಜಯೇಂದ್ರ ಅವರ ಸಂಘಟನಾ ಚಾತುರ್ಯವನ್ನು ಮೆಚ್ಚಿ ಪಕ್ಷಕ್ಕೆ ಸೇರಿರುವುದಾಗಿ ಅವರು ಹೇಳಿದ್ದಾರೆ.

ಬಿಗ್‌ ಬಜಾರ್‌ ಬಂಪರ್: 10 ವರ್ಷ ಹಿಂದಿನ ಬೆಲೆಯಲ್ಲಿ ವಸ್ತುಗಳ ಮಾರಾಟ

ಶೀಘ್ರದಲ್ಲಿಯೆ ಕೆ.ಆರ್‌. ನಗರಕ್ಕೆ ಬಿ.ವೈ. ವಿಜಯೇಂದ್ರ ಮತ್ತು ಪಕ್ಷದ ಇತರ ನಾಯಕರನ್ನು ಕರೆಯಿಸಿ ಸಮಾವೇಶ ಮಾಡಿ ಆ ಸಂದರ್ಭದಲ್ಲಿ ಇತರ ನೂರಾರು ಮಂದಿ ಮುಖಂಡರನ್ನು ಬಿಜೆಪಿಗೆ ಸೇರ್ಪಡೆಗೊಳಿಸುವುದಾಗಿ ಅವರು ತಿಳಿಸಿದರು.

click me!