ಕಾಲ್ನಡಿಗೆ ಮೂಲಕ ಪ್ರಚಾರಕ್ಕಿಳಿದ ಬಿಜೆಪಿ ಅಭ್ಯರ್ಥಿ

By Suvarna News  |  First Published Dec 4, 2019, 2:32 PM IST

ಮಂಗಳವಾರ ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆ ಬಿದ್ದಿರುವ ಹಿನ್ನೆಲೆಯಲ್ಲಿ ಮಂಡ್ಯದ ಕೆ. ಆರ್. ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಕಾಲ್ನಡಿಗೆ ಮೂಲಕ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ್ದಾರೆ.


ಮಂಡ್ಯ(ಡಿ.04): ಮಂಗಳವಾರ ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆ ಬಿದ್ದಿರುವ ಹಿನ್ನೆಲೆಯಲ್ಲಿ ಮಂಡ್ಯದ ಕೆ. ಆರ್. ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಕಾಲ್ನಡಿಗೆ ಮೂಲಕ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ್ದಾರೆ.

ಈಗಾಗಲೇ ಕ್ಷೇತ್ರದಲ್ಲಿ ಮಸ್ಟರಿಂಗ್ ಆರಂಭವಾಗಿದ್ದು, ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ. ಬಹಿರಂಗ ಪ್ರಚಾರ ಕೊನೆಗೊಂಡ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಸಿ. ನಾರಾಯಣ ಗೌಡ ಅವರು ಮನೆ ಮನೆಗೆ ತೆರಳಿ ಬಿಜೆಪಿಗೆ ಮತ ನೀಡುವಂತೆ ಕೇಳಿಕೊಂಡಿದ್ದಾರೆ.

Tap to resize

Latest Videos

ಮಂಡ್ಯ: 450 ಹೋಂ ಗಾರ್ಡ್, 600 ಸಿವಿಲ್ ಪೊಲೀಸ್ ಸೇರಿ ಹೆಚ್ಚಿನ ಭದ್ರತೆ

ಕೆ.ಆರ್.ಪೇಟೆ ಬಿಜೆಪಿ ಅಭ್ಯರ್ಥಿಯಿಂದ ಮನೆ ಮನೆ ಪ್ರಚಾರ ಭರ್ಜರಿಯಾಗಿ ಸಾಗಿದ್ದು, ಬಹಿರಂಗ ಪ್ರಚಾರ ಅಂತ್ಯ ಹಿನ್ನಲೆ ನಾರಾಯಣ ಗೌಡ ಖುದ್ದು ಕಾಲ್ನಡಿಗೆ ಮೂಲಕ ಪ್ರಚಾರಕ್ಕಿಳಿದಿದ್ದಾರೆ.

ಕೆ.ಆರ್.ಪೇಟೆ ಪಟ್ಟಣದ ನ್ಯಾಯಾಲಯದ ಆಚರಣದಲ್ಲಿ ವಕೀಲರ ಬಳಿ ಮತಯಾಚನೆ ಮಾಡಿದ ನಾರಾಯಣ ಗೌಡ ಅವರು, ಉಪ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ಕ್ಷೇತ್ರದ ಜನರ ಆಶೀರ್ವಾದದಿಂದ ಗೆಲ್ಲುತ್ತೇನೆ ಎಂದು ನಾರಾಯಣ ಗೌಡ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಡ್ಯ: ಮಾಜಿ ಸಚಿವ ರೇವಣ್ಣ ಪುತ್ರನ ವಿರುದ್ಧ FIR

click me!