ನೂರು ಅಡಿ ತಲುಪಿದ ಕೆಆರ್‌ಎಸ್‌ ಮಟ್ಟ

Kannadaprabha News   | Asianet News
Published : Jul 21, 2021, 07:44 AM IST
ನೂರು ಅಡಿ ತಲುಪಿದ ಕೆಆರ್‌ಎಸ್‌ ಮಟ್ಟ

ಸಾರಾಂಶ

ಕಳೆದ ಕೆಲ ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಚುರುಕು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ100 ಅಡಿ 

ಮಂಡ್ಯ (ಜು.21): ಕಳೆದ ಕೆಲ ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ100 ಅಡಿ ತಲುಪಿದೆ.

 ಕಳೆದ ಕೆಲ ದಿನಗಳ ಮಳೆಯಿಂದಾಗಿ  ಜಲಾಶಯಕ್ಕೆ 12 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬರುತ್ತಿದೆ. 

'KRS ಅಣೆಕಟ್ಟೆಯಲ್ಲಿ ನೀರಿನ ಸೋರಿಕೆ ಆರಂಭ'

124.80 ಅಡಿಗೆ ಗರಿಷ್ಠ ಮಟ್ಟ ಹೊಂದಿರುವ ಜಲಾಶಯದಲ್ಲಿ ಮಂಗಳವಾರ ಸಂಜೆ 6 ಗಂಟೆ ವೇಳೆ 100.05 ಅಡಿ ನೀರು ಸಂಗ್ರಹವಾಗಿತ್ತು. 

ಇನ್ನು ಕೆಆರ್‌ಎಸ್‌ ಬಿರುಕು ಬಿಟ್ಟಿದೆ ಎನ್ನುವ ವಿಚಾರವೂ ಇತ್ತೀಚೆಗೆ ಸಾಕಷ್ಟು ಸದ್ದಾಗುತ್ತಿದ್ದು,ಈ ಬಗ್ಗೆ ವಿಶೇಷ ಪರಿಶೀಲನೆಯೂ ನಡೆಯುತ್ತಿದೆ. 

PREV
click me!

Recommended Stories

ದಾವಣಗೆರೆ ಮಹಿಳೆಯನ್ನ ಕಚ್ಚಿಕೊಂದ 2 ರಾಟ್‌ವೀಲರ್ ನಾಯಿಗಳು ಜನರ ಹಲ್ಲೆಯಿಂದ ಸಾವು; ಶ್ವಾನಗಳ ಮಾಲೀಕ ಬಂಧನ
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ