‘ಸಿದ್ದರಾಮಯ್ಯ ಸಮನ್ವಯ ಸಮಿತಿಗೆ ರಾಜೀನಾಮೆ ನೀಡಲಿ’

By Kannadaprabha News  |  First Published Jul 16, 2018, 9:53 AM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮನ್ವಯ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ’ ಎಂದು ಬಿಜೆಪಿ ಮುಖಂಡ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.


ಕಲಬುರಗಿ: ಜೆಡಿಎಸ್‌ಗೆ ಕಾಂಗ್ರೆಸ್ ಮತ್ತು ಕಾಂಗ್ರೆಸ್‌ಗೆ ಜೆಡಿಎಸ್ ಪಕ್ಷ ಸರೆಂಡರ್ (ಶರಣು) ಆಗಿವೆ ಎಂದು ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದರು. 

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ, ರಾಹುಲ್ ಗಾಂಧಿ ನಾಯಕತ್ವಕ್ಕೆ ಅಭ್ಯಂತರವಿಲ್ಲ ಎಂಬ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಹೇಳಿಕೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು. ಸ್ವತಃ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ರಾಹುಲ್ ಗಾಂಧಿ ಅವರಿಗೆ ಪುಣ್ಯಾತ್ಮ ಎಂದು ಕರೆದಿದ್ದಾರೆ. 

Tap to resize

Latest Videos

ಆ  ಪುಣ್ಯಾತ್ಮನ ಋಣ ಹೇಗೆ ತೀರಿಸಲಿ ಎಂದು ಹೇಳಿದ್ದಾರೆ. ಹೀಗಾಗಿ ದೇವೇಗೌಡರು ಹೇಳಿಕೆಯಲ್ಲಿ ವಿಶೇಷವೇನಿಲ್ಲ ಎಂದರು. ಪದೇ ಪದೆ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಪತ್ರ ಬರೆದು ಉತ್ತರ ಕುಮಾರನಂತೆ ವರ್ತಿಸುತ್ತಿರುವ ಸಿದ್ದರಾಮಯ್ಯ ಕೂಡಲೇ ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದರು. 

click me!