
ಚಿತ್ರದುರ್ಗ (ಅ.05): KSRTC ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸಾವಿಗೀಡಾಗಿದ್ದಾರೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದ ಬಳಿ ಅಪಘಾತವಾಗಿದ್ದು, ಮೂವರು ಸ್ಥಳದಲ್ಲಿಯೇ ಸಾವಗೀಡಾಗಿ, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಈ ಸಂಬಂಧ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.