
ಹಾಸನ (ಏ.11): ಮನೆ ಖಾಲಿ ಮಾಡುವಂತೆ ಮೇಲಾಧಿಕಾರಿಗಳು ಒತ್ತಡ ಹೇರಿದ ಹಿನ್ನೆಲೆಯಲ್ಲಿ ಮುಷ್ಕರ ನಿರತ ಸಾರಿಗೆ ಇಲಾಖೆಯ ನೌಕರರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸಾರಿಗೆ ನೌಕರರ ಮೇಲೆ ಮತ್ತಷ್ಟು ಕಠಿಣ ಕ್ರಮ!
ಸಕಲೇಶಪುರ ಡಿಪೋದಲ್ಲಿ ಚಾಲಕರಾಗಿದ್ದ ಸುಧಾಕರ್(52) ಮೃತಪಟ್ಟಚಾಲಕ. ಸುಧಾಕರ್ ಅವರ ಪತ್ನಿ ಜಯಂತಿ ಸಹ ಹಾಸನ ಡಿಪೋದಲ್ಲಿ ಕೆಲಸ ಮಾಡುತ್ತಿದ್ದು, ದಂಪತಿ ಹಾಸನದಲ್ಲಿರುವ ಕೆಎಸ್‌ಆರ್‌ಟಿಸಿ ವಸತಿ ಗೃಹದಲ್ಲಿ ವಾಸವಿದ್ದರು.
ಮುಷ್ಕರದ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಗೈರಾಗಿದ್ದ ಕಾರಣ, ಮನೆ ಖಾಲಿ ಮಾಡುವಂತೆ ಅಧಿಕಾರಿಗಳು ಒತ್ತಡ ಹೇರಿದ್ದು, ಇದರಿಂದಲೇ ಅವರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.