ಒತ್ತಾಯ ಪೂರ್ವಕವಾಗಿ ಕೆಲಸಕ್ಕೆ ಹಾಜರ್‌: ಕರ್ತವ್ಯ ವೇಳೆ ಸಾರಿಗೆ ಸಿಬ್ಬಂದಿ ಸಾವು

Suvarna News   | Asianet News
Published : Dec 12, 2020, 03:03 PM IST
ಒತ್ತಾಯ ಪೂರ್ವಕವಾಗಿ ಕೆಲಸಕ್ಕೆ ಹಾಜರ್‌: ಕರ್ತವ್ಯ ವೇಳೆ ಸಾರಿಗೆ ಸಿಬ್ಬಂದಿ ಸಾವು

ಸಾರಾಂಶ

ಔರಾದ್‌ನಿಂದ ಮಹಾರಾಷ್ಟ್ರದ ನಾಂದೇಡ್‌ಗೆ ಬಸ್ ಓಡಿಸಿದ್ದ ಚಾಲಕ| ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಾರಿಗೆ ಸಿಬ್ಬಂದಿ| ಒತ್ತಾಯದ ಮೇಲೆ ಕರ್ತವ್ಯಕ್ಕೆ ಹಾಜರಾದ ಡ್ರೈವರ್‌ ಸಾವು| 

ಬೀದರ್(ಡಿ.12): ಕರ್ತವ್ಯದ ವೇಳೆ ಸಾರಿಗೆ ಸಂಸ್ಥೆಯ ಚಾಲಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಗರದಲ್ಲಿ ಇಂದು(ಶನಿವಾರ) ನಡೆದಿದೆ. ಮಹಿಬೂಬ್ ಎಂಬುವರೇ ಮೃತಪಟ್ಟ ಚಾಲಕರಾಗಿದ್ದಾರೆ. 

ಇಂದು ಬೆಳಿಗ್ಗೆ ಜಿಲ್ಲೆಯ ಔರಾದ್‌ನಿಂದ ಮಹಾರಾಷ್ಟ್ರದ ನಾಂದೇಡ್‌ಗೆ ಬಸ್ ಓಡಿಸಿದ್ದರು. ಆದರೆ, ಒತ್ತಾಯ ಪೂರ್ವಕವಾಗಿ ಮಹಿಬೂಬ್ ಅವರು ಕರ್ತವ್ಯಕ್ಕೆ ಹಾಜರಾಗಿದ್ದರು ಎಂಬ ಆರೋಪವೊಂದು ಕೇಳಿ ಬಂದಿದೆ.

ಬೆಳಗಾವಿ: ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಾರಿಗೆ ನೌಕರ ಸಾವು

ಒಂದು ಕಡೆ ಬೀದರ್‌ನ ಕೇಂದ್ರ ಬಸ್ ನಿಲ್ದಾಣದಲ್ಲಿ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನೊಂದೆಡೆ ಒತ್ತಾಯದ ಮೇಲೆ ಕರ್ತವ್ಯಕ್ಕೆ ಹಾಜರಾಗಿರುವ ಸಿಬ್ಬಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 
 

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!