ಚೈತ್ರಾ ಕುಂದಾಪುರ VS ಗುರುಪ್ರಸಾದ್, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾರಾಮಾರಿ

Published : Oct 24, 2018, 09:53 PM ISTUpdated : Oct 24, 2018, 09:58 PM IST
ಚೈತ್ರಾ ಕುಂದಾಪುರ VS ಗುರುಪ್ರಸಾದ್, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾರಾಮಾರಿ

ಸಾರಾಂಶ

ಕುಕ್ಕೆ ಸುಬ್ರಹ್ಮಣ್ಯ ಮಠದ ವಿವಾದ ಇದೀಗ ಹಲ್ಲೆ ರೂಪಕ್ಕೆ ತೆರಳಿದೆ. ಸುಬ್ರಹ್ಮಣ್ಯ ಕ್ಷೇತ್ರದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಎರಡೂ ಕಡೆಯಿಂದ ದೂರು ದಾಖಲಾಗಿದೆ.

ಸುಬ್ರಹ್ಮಣ್ಯ[ಅ.24] ಎರಡು ಗುಂಪುಗಳು ಪರಸ್ಪರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ  ಮತ್ತು ತಂಡ ಹಾಗೂ ಗುರುಪ್ರಸಾದ್ ಎಂಬುವರು ಒಬ್ಬರ ಮೇಲೆ ಒಬ್ಬರು ದೂರು ದಾಖಲಿಸಿದ್ದಾರೆ.

ನಮ್ಮ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಕಾಶಿಕಟ್ಟೆ ಬಳಿ ಕಾರು ಅಡ್ಡಗಟ್ಟಿ ದಾಳಿ ಮಾಡಲಾಗಿದೆ. ಕುಕ್ಕೆಯ ಸಂಪುಟ ನರಸಿಂಹ ಸ್ವಾಮಿ ಮಠಕ್ಕೆ ಭೇಟಿ ನೀಡಿ  ಶ್ರೀಗಳ ಜೊತೆ ಮಾತುಕತೆ ನಡೆಸಿ ವಾಪಾಸಾಗುತ್ತಿದ್ದ  ವೇಳೆ ದಾಳಿ ಮಾಡಲಾಗಿದೆ ಎಂದು ಚೈತ್ರಾ ಆರೋಪಿಸಿದ್ದಾರೆ.

ನನ್ನ ಮೇಲೆ ಕೊಲೆ ಯತ್ನ ನಡೆದಿದೆ. ಚೈತ್ರಾ ಕುಂದಾಪುರ ಮತ್ತು ತಂಡ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದೆ ಎಂದು ಗುರುಪ್ರಸಾದ್ ಆರೋಪಿಸಿದ್ದಾರೆ. ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಒಬ್ಬರ ಮೇಲೆ ಒಬ್ಬರು ದೂರು ನೀಡಿದ್ದಾರೆ.

"

 

 

PREV
click me!

Recommended Stories

ದುಬೈನಲ್ಲಿ ಕುಳಿತು ಕರಾವಳಿಯಲ್ಲಿ ಕೋಮು ಭಾವನೆ ಕೆರಳಿಸುವ ಪೋಸ್ಟ್ ಹಾಕುತ್ತಿದ್ದವನ ಬಂಧಿಸಿದ ಮಂಗಳೂರು ಪೊಲೀಸರು
‘ಶಿಕ್ಷಣ ಹಬ್‌’ ಮಂಗಳೂರು ಈಗ ಡ್ರಗ್ಸ್‌ಗೂ ಕುಖ್ಯಾತ: ವಿದ್ಯಾರ್ಥಿಗಳೇ ಬಲಿಪಶು!