ಕರ್ನಾಟಕದಲ್ಲಿ ಸಂಭವಿಸಿದ ಭಾರೀ ಪ್ರವಾಹ ಪರಿಸ್ಥಿತಿಯಿಂಧ ಹಲವು ಜಿಲ್ಲೆಗಳು ತೀವ್ರ ಸಂಕಷ್ಟ ಎದುರಿಸಿದ್ದು, ಇದರಿಂದ ಕುಕ್ಕೆ ಸುಬ್ರಮಣ್ಯ ದೇಗುಲ ಒಂದು ಕೋಟಿ ನೆರವು ನೀಡುತ್ತಿದೆ.
ಸುಬ್ರಹ್ಮಣ್ಯ [ಆ.15]: ರಾಜ್ಯಾದ್ಯಂತ ಅತಿವೃಷ್ಟಿಗೆ ತುತ್ತಾದ ಸಂತ್ರಸ್ತರಿಗೆ ನೆರವಾಗುವ ದೃಷ್ಟಿಯಿಂದ ಮುಖ್ಯಮಂತ್ರಿಗಳ ನೆರೆ ಪರಿಹಾರ ನಿಧಿಗೆ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ 1 ಕೋಟಿ ರು. ಮೊತ್ತದ ಸಹಾಯ ಧನ ನೀಡಲು ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿದೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಕುಕ್ಕೆಶ್ರೀಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮಾತನಾಡಿ, ಧನಸಹಾಯದೊಂದಿಗೆ ಭಕ್ತರು ದಾನವಾಗಿ ನೀಡಿದ ಸೀರೆ, ದೋತಿ, ಪಂಚೆ, ಶಲ್ಯ, ಬೈರಾಸು, ರವಿಕೆ ಮೊದಲಾದವುಗಳನ್ನು ಜಿಲ್ಲಾಧಿಕಾರಿ ಮತ್ತು ಸಹಾಯಕ ಆಯುಕ್ತರ ಸಹಕಾರದಿಂದ ನೆರೆ ಸಂತ್ರಸ್ತರಿಗೆ ನೀಡಲು ತೀರ್ಮಾನಿಸಲಾಗಿದೆ ಎಂದರು.
undefined
ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಕುಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಈ ಬಗ್ಗೆ ತುರ್ತು ಸಭೆ ಕರೆದು ಮಹತ್ವ ಪೂರ್ಣ ನಿರ್ಣಯ ಕೈಗೊಂಡಿದೆ. ಭಕ್ತರಿಂದ ದೇವಸ್ಥಾನಕ್ಕೆ ಬರುವ ಆದಾಯದ ಒಂದಂಶವನ್ನು ರಾಜ್ಯದ ಜನತೆಯ ಕಷ್ಟಕ್ಕೆ ವಿನಿಯೋಗಿಸಲು ಆಡಳಿತ ಮಂಡಳಿಯ ಎಲ್ಲ ಸದಸ್ಯರು ಒಮ್ಮತದ ಅಭಿಪ್ರಾಯ ಸೂಚಿಸಿದ್ದಾರೆ ಎಂದು ಹೇಳಿದರು.