ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆದಾಯದಲ್ಲಿ ಗಣನೀಯ ಇಳಿಕೆ

Published : Jun 06, 2019, 12:40 PM IST
ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆದಾಯದಲ್ಲಿ ಗಣನೀಯ ಇಳಿಕೆ

ಸಾರಾಂಶ

ದಕ್ಷಿಣ ಕನ್ನಡದ ಪ್ರಸಿದ್ಧ ದೇಗುಲ ಅತ್ಯಂತ ಶ್ರೀಮಂತ ದೇವರು ಎಂಬ ಖ್ಯಾತಿಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಆದಾಯ ಪ್ರಮಾಣದಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. 

ಮಂಗಳೂರು : ರಾಜ್ಯದ ಅತ್ಯಂತ ಶ್ರೀಮಂತ ದೇಗುಲ ಎಂದೇ ಪ್ರಸಿದ್ಧವಾಗಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆದಾಯದಲ್ಲಿ ಗಣನೀಯವಾಗಿ ಇಳಿಕೆ ಕಂಡು ಬಂದಿದೆ. 

ಪ್ರತೀ ವರ್ಷ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದ ಆದಾಯ ಈ ಬಾರಿ ಕುಸಿದಿದೆ. ಕಳೆದ ವರ್ಷ 95.92 ಕೋಟಿ ರು. ಇದ್ದ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆಸ್ತಿ ಈ ಬಾರಿ ಕುಸಿತ ಕಂಡಿದೆ. ಈ ಬಾರಿ 92.2 ಕೋಟಿ ರು. ಸಂಗ್ರವಾಗಿದೆ.

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದಲ್ಲಿ ಈ ಬಾರಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆದಾಯದಲ್ಲಿ 3.83 ಕೋಟಿ ರು. ಇಳಿದಿದೆ. ಕಳೆದ ಏಳು ವರ್ಷಗಳಲ್ಲಿ ಮೂರು ಪಟ್ಟು ಆದಾಯದಲ್ಲಿ ಹೆಚ್ಚಳವಾಗಿದ್ದ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಈ ಬಾರಿ ಭಾರಿ ಇಳಿದಿದೆ. 

ನೀರಿನ ಕೊರತೆ, ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಇಳಿಕೆ ಹಾಗೂ ಇಲ್ಲಿನ ಆಡಳಿತ ಮಂಡಳಿ ಮುಸುಕಿನ ಗುದ್ದಾಟವು ಆದಾಯ ಇಳಿಕೆಗೆ ಕಾರಣವಾಗಿರಬಹುದು ಎನ್ನಲಾಗುತ್ತಿದೆ.

PREV
click me!

Recommended Stories

ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಹೊಸ ಮಾರ್ಗಗಳಿಗೆ ಬರಲಿವೆ ಚಾಲಕ ರಹಿತ ರೈಲು